AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs SL A: ಸತತ ಎರಡನೇ ಶತಕ ಬಾರಿಸಿದ ಸಾಯಿ ಸುದರ್ಶನ್

Sai Sudharsan Slams Second Consecutive Century: ಸಾಯಿ ಸುದರ್ಶನ್ ಭಾರತ ಎ ಮತ್ತು ಶ್ರೀಲಂಕಾ ಎ ನಡುವಿನ ಅನಧಿಕೃತ ಟೆಸ್ಟ್ ಸರಣಿಯಲ್ಲಿ ಸತತ ಎರಡನೇ ಶತಕ ಗಳಿಸಿ ಮಿಂಚಿದ್ದಾರೆ. ಐಪಿಎಲ್‌ನಿಂದಲೂ ಉತ್ತಮ ಫಾರ್ಮ್‌ನಲ್ಲಿರುವ ಅವರು, ರೆಡ್-ಬಾಲ್ ಕ್ರಿಕೆಟ್‌ನಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಅಮೋಘ ಸಾಧನೆ ಮಾಡಿದ ಅವರು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 10 ಶತಕಗಳನ್ನು ಪೂರೈಸಿದ್ದಾರೆ. ಇದರಿಂದ ಭಾರತ ಟೆಸ್ಟ್ ತಂಡದಲ್ಲಿ ಅವರಿಗೆ ಸ್ಥಾನ ಸಿಗುವ ಭರವಸೆ ಮೂಡಿದೆ.

IND A vs SL A: ಸತತ ಎರಡನೇ ಶತಕ ಬಾರಿಸಿದ ಸಾಯಿ ಸುದರ್ಶನ್
Sai Sudharshan
ಪೃಥ್ವಿಶಂಕರ
|

Updated on: Jul 03, 2026 | 5:58 PM

Share

ಭಾರತ ಎ ಹಾಗೂ ಶ್ರೀಲಂಕಾ ಎ ( India A vs Sri Lanka A) ತಂಡಗಳ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ಎ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ (Sai Sudharsan) ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುಂಚೆ ನಡೆದಿದ್ದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಸಾಯಿ ಸುದರ್ಶನ್ 166 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಸಾಯಿ ಸುದರ್ಶನ್ ಅವರ ಸತತ ಎರಡನೇ ಶತಕವಾಗಿದೆ. ಮೊದಲ ಅನಧಿಕೃತ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿಯೂ ಸಾಯಿ 132 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಸಾಯಿ ಸುದರ್ಶನ್​ಗೆ ಸತತ 2ನೇ ಶತಕ

ಸಾಯಿ ಸುದರ್ಶನ್ ಐಪಿಎಲ್‌ನಿಂದಲೂ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅವರು ತಮ್ಮ ಕೊನೆಯ 11 ಪಂದ್ಯಗಳ ಒಂಬತ್ತು ಪಂದ್ಯಗಳಲ್ಲಿ ಎರಡು ಶತಕಗಳು ಸೇರಿದಂತೆ ಐವತ್ತಕ್ಕೂ ಹೆಚ್ಚು ಸ್ಕೋರ್‌ಗಳನ್ನು ದಾಖಲಿಸಿದ್ದಾರೆ. ಸಾಯಿ ಸುದರ್ಶನ್ ಅವರನ್ನು ಸಾಮಾನ್ಯವಾಗಿ ಉತ್ತಮ ವೈಟ್-ಬಾಲ್ ಕ್ರಿಕೆಟಿಗ ಎಂದು ಪರಿಗಣಿಸಲಾಗುತ್ತದೆ, ಆದರೆ ಅವರು ಈಗ ರೆಡ್-ಬಾಲ್ ಕ್ರಿಕೆಟ್‌ನಲ್ಲೂ ತಮ್ಮ ಪರಾಕ್ರಮವನ್ನು ತೋರಿಸುತ್ತಿದ್ದಾರೆ. ಇತ್ತೀಚಿನ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿಯೂ ಸಾಯಿ ಸುದರ್ಶನ್ 81 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಈಗ, ಅವರು ಶ್ರೀಲಂಕಾ ಪ್ರವಾಸದಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿದ್ದಾರೆ.

10ನೇ ಶತಕ ಬಾರಿಸಿದ ಸಾಯಿ

ಸಾಯಿ ಸುದರ್ಶನ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಟ್ಟು 10 ಶತಕಗಳನ್ನು ಸಿಡಿಸಿದ್ದು, ಸುಮಾರು 3,000 ಪ್ರಥಮ ದರ್ಜೆ ರನ್‌ಗಳನ್ನು ಕಲೆಹಾಕಿದ್ದಾರೆ. ಆದಾಗ್ಯೂ, ಅವರು ಇಲ್ಲಿಯವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷವಾಗಿ ಉತ್ತಮ ಪ್ರದರ್ಶನ ನೀಡಿಲ್ಲ. ಆಡಿರುವ ಏಳು ಪಂದ್ಯಗಳಲ್ಲಿ 31.91 ರ ಸರಾಸರಿಯಲ್ಲಿ 383 ರನ್‌ಗಳನ್ನು ಗಳಿಸಿದ್ದಾರೆ. ಆದಾಗ್ಯೂ ಆಯ್ಕೆ ಮಂಡಳಿ ಅವರ ಮೇಲೆ ಭರವಸೆಗಳನ್ನು ಇಟ್ಟಿದ್ದು, ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಖಾಯಂ ಸ್ಥಾನ ಸಿಗುವ ಕಾಲ ದೂರವಿಲ್ಲ ಎನ್ನಬಹುದು.

IND vs SL: ಟಿ20 ಸರಣಿ ರದ್ದು; ಭಾರತ- ಲಂಕಾ ನಡುವಿನ ಟೆಸ್ಟ್ ಸರಣಿ ವೇಳಾಪಟ್ಟಿ ಪ್ರಕಟ

366 ರನ್‌ ಕಲೆಹಾಕಿದ ಲಂಕಾ

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ಎ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 366 ರನ್ ಕಲೆಹಾಕಿತು. ತಂಡದ ಪರ ನಾಯಕ ಅರಿಚಿಗೆ ಶತಕದ ಇನ್ನಿಂಗ್ಸ್ ಆಡಿದರು. ಇತ್ತ ಟೀಂ ಇಂಡಿಯಾ ಪರ ಗುರ್ನೂರ್ ಬ್ರಾರ್ 77 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರೆ, ಆಫ್-ಸ್ಪಿನ್ನರ್ ಸರಾಂಶ್ ಜೈನ್ 92 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!