AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs SL A: ಎಡವಿದ ಪಡಿಕ್ಕಲ್; ಭರ್ಜರಿ ಶತಕ ಬಾರಿಸಿದ ಸಾಯಿ ಸುದರ್ಶನ್

Sai Sudharsan century Galle: ಶ್ರೀಲಂಕಾ ಎ ವಿರುದ್ಧದ ಅನಧಿಕೃತ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎ ತಂಡದ ಆರಂಭಿಕ ಸಾಯಿ ಸುದರ್ಶನ್ ಭರ್ಜರಿ ಶತಕ ಸಿಡಿಸಿದ್ದಾರೆ. ಗಾಲೆ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಎ ತಂಡಕ್ಕೆ ಸುದರ್ಶನ್ 121 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿದರು. ಅವರ ಶತಕದ ನೆರವಿನಿಂದ ಭಾರತ ಎ ತಂಡ 200 ರನ್ ಗಡಿ ದಾಟಿದೆ.

IND A vs SL A: ಎಡವಿದ ಪಡಿಕ್ಕಲ್; ಭರ್ಜರಿ ಶತಕ ಬಾರಿಸಿದ ಸಾಯಿ ಸುದರ್ಶನ್
Sai SudharsanImage Credit source: PTI
ಪೃಥ್ವಿಶಂಕರ
|

Updated on: Jun 25, 2026 | 3:04 PM

Share

ಶ್ರೀಲಂಕಾದಲ್ಲಿ ನಡೆದ ಏಕದಿನ ತ್ರಿಕೋನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಎ ತಂಡ ಇದೀಗ ಅದೇ ಶ್ರೀಲಂಕಾದಲ್ಲಿ (India A vs Sri Lanka A) ಆತಿಥೇಯ ತಂಡದ ವಿರುದ್ಧ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇಂದಿನಿಂದ ಗಾಲೆಯಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಧೃವ್ ಜುರೇಲ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ (Sai Sudharsan) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಶತಕ ವಂಚಿತರಾಗಿದ್ದ ಸುದರ್ಶನ್, ಇದೀಗ ಶ್ರೀಲಂಕಾ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದಾರೆ.

ಇನ್ನಿಂಗ್ಸ್ ಕಟ್ಟಿದ ಸುದರ್ಶನ್

ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಸಾಯಿ ಸುದರ್ಶನ್ ಹಾಗೂ ಆಯುಷ್ ಪಾಂಡೆ ಮೊದಲ ವಿಕೆಟ್​ಗೆ 82 ರನ್​ಗಳ ಜೊತೆಯಾಟ ನೀಡಿದರು. ಆಯುಷ್ 25 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಆ ಬಳಿಕ ಬಂದ ಕನ್ನಡಿಗ ದೇವದತ್ ಪಡಿಕ್ಕಲ್ 12 ರನ್​ಗಳಿಗೆ ಸುಸ್ತಾದರು. ಹೀಗಾಗಿ ಭಾರತ ಎ ತಂಡ ಕೇವಲ 14 ರನ್​ಗಳ ಅಂತರದಲ್ಲಿ ತನ್ನ ಎರಡನೇ ವಿಕೆಟ್ ಕಳೆದುಕೊಂಡಿತು. ನಂತರ ರುತುರಾಜ್ ಜೊತೆಗೂಡಿ ತಂಡವನ್ನು 150 ರನ್​ಗಳ ಗಡಿ ದಾಟಿಸಿದ ಸುದರ್ಶನ್ ತಮ್ಮ ಶತಕವನ್ನು ಸಹ ಪೂರೈಸಿದರು.

130 ಎಸೆತಗಳಲ್ಲಿ ಶತಕ ಪೂರ್ಣ

ಇಬ್ಬರ ಜೊತೆಯಾಟ ಶತಕ ಮುಟ್ಟುವ ಮೊದಲೆ ರುತುರಾಜ್ ಗಾಯಕ್ವಾಡ್ 22 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ ಟೀಂ ಇಂಡಿಯಾ 181 ರನ್​ಗಳಿಗೆ ತನ್ನ ಮೂರನೇ ವಿಕೆಟ್ ಕಳೆದುಕೊಂಡಿತು. ನಂತರ ನಾಯಕನ ಜೊತೆ ಸೇರಿ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಿರುವ ಸಾಯಿ ತಂಡವನ್ನು 200 ರನ್​ಗಳ ಗಡಿ ದಾಟಿಸಿದ್ದಾರೆ. ಈ ಸುದ್ದಿ ಬರೆಯುವ ಹೊತ್ತಿಗೆ 161 ಎಸೆತಗಳಲ್ಲಿ 121 ರನ್ ಬಾರಿಸಿರುವ ಸುದರ್ಶನ್ 17 ಬೌಂಡರಿಗಳನ್ನು ಕಲೆಹಾಕಿದ್ದಾರೆ.

ನೆರೆಯ ದೇಶದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ ಭಾರತ; ಸ್ವಾತಂತ್ರ್ಯ ದಿನದಂದು ಮೊದಲ ಪಂದ್ಯ

ಉಭಯ ತಂಡಗಳು

ಭಾರತ ಎ ತಂಡ: ಸಾಯಿ ಸುದರ್ಶನ್, ಆಯುಷ್ ಪಾಂಡೆ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಧ್ರುವ್ ಜುರೆಲ್ (ನಾಯಕ), ಶೇಕ್ ರಶೀದ್, ಹರ್ಷ ದುಬೆ, ಸರನ್ಶ್ ಜೈನ್, ಅಂಶುಲ್ ಕಾಂಬೋಜ್, ಯಶ್ ಠಾಕೂರ್, ಆಕಿಬ್ ನಬಿ ದಾರ್.

ಶ್ರೀಲಂಕಾ ಎ ತಂಡ: ಪವಂತ ವೀರಸಿಂಗ್, ನಿರೋಶನ್ ಡಿಕ್ವೆಲ್ಲಾ, ನುವಾನಿಡು ಫೆರ್ನಾಂಡೋ, ಅಶೇನ್ ಬಂಡಾರ, ಸಹನ್ ಅರಚ್ಚಿಗೆ (ನಾಯಕ), ರವಿಂದು ಫೆರ್ನಾಂಡೋ, ಅಂಜಲಾ ಬಂಡಾರ, ಕವಿಂದು ಪತಿರತ್ನ, ದುಲಾಜ್ ಸಮುದಿತ, ಚಾಮಿಕಾ ಗುಣಶೇಖರ, ದಿಲುಂ ಸುದೀರ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?