AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಮಾಡಲು ಬಂದು, ಸೈಲೆಂಟ್ ಆಗಿ ‘ಸೋಲಿಸಿದ’ ಸ್ಯಾಮ್ ಕರನ್..!

India vs England Semi Final: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 246 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು 7 ರನ್​ಗಳ ಜಯ ಸಾಧಿಸಿದೆ.

ಸೈಲೆಂಟ್ ಮಾಡಲು ಬಂದು, ಸೈಲೆಂಟ್ ಆಗಿ 'ಸೋಲಿಸಿದ' ಸ್ಯಾಮ್ ಕರನ್..!
Sam Curran
ಝಾಹಿರ್ ಯೂಸುಫ್
|

Updated on: Mar 06, 2026 | 10:53 AM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​ರೌಂಡರ್, ಸ್ಯಾಮ್ ಕರನ್ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರನ್ನು ಸೈಲೆಂಟ್ ಮಾಡುತ್ತೇವೆ ಎಂದು ಸವಾಲು ಹಾಕಿದ್ದರು. ಈ ಸವಾಲಿನ ಮುಕ್ತಾಯದಲ್ಲಿ ಸೈಲೆಂಟ್ ಆಗಿದ್ದ ಸ್ಯಾಮ್ ಕರನ್. ಅದು ಸಹ ಸೈಲೆಂಟ್ ಆಗಿ ತನ್ನದೇ ತಂಡವನ್ನು ಸೋಲಿಸುವ ಮೂಲಕ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇನ್ನು ಟಾಮ್ ಬ್ಯಾಂಟನ್, ವಿಲ್ ಜ್ಯಾಕ್ಸ್​ ಕೂಡ ಅಲ್ಪ ಮೊತ್ತದ ಕಾಣಿಕೆ ನೀಡಿದ್ದರು.

ಈ ಮೂಲಕ ಇಂಗ್ಲೆಂಡ್ ತಂಡವು 14 ಓವರ್​ಗಳ ಮುಕ್ತಾಯದ ವೇಳೆ ಬರೋಬ್ಬರಿ 172 ರನ್ ಕಲೆಹಾಕಿದ್ದರು. ಆದರೆ ಈ ರನ್ ಗತಿ ಕುಂಠಿತವಾಗಿದ್ದೇ ಸ್ಯಾಮ್ ಕರನ್ ಎಂಟ್ರಿಯೊಂದಿಗೆ. ನಿರ್ಣಾಯಕವಾಗಿದ್ದ ಕೊನೆಯ 6 ಓವರ್​ಗಳ ವೇಳೆ ಬ್ಯಾಟಿಂಗ್​ಗೆ ಆಗಮಿಸಿದ ಸ್ಯಾಮ್ ಕರನ್ 14 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 18 ರನ್​ಗಳು ಮಾತ್ರ.

ಅಂದರೆ ನಿರ್ಣಾಯಕ ಹಂತದಲ್ಲಿ ಸ್ಯಾಮ್ ಕರನ್ ಕೇವಲ 128ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು. ಅಂದರೆ ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿಯ ಓವರ್​ಗಳಲ್ಲಿ ಹೆಚ್ಚಿನ ಬಾಲ್ ಎದುರಿಸಿದ್ದ ಕರನ್ ಸಿಂಗಲ್ ಹಾಗೂ ಡಬಲ್​ ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ನಿಧಾನಗತಿಯ ಬ್ಯಾಟಿಂಗ್ ಇಂಗ್ಲೆಂಡ್​ನ ಚೇಸಿಂಗ್ ಮೇಲೆ ಪರಿಣಾಮ ಬೀರಿತು ಎಂದರೆ ತಪ್ಪಾಗಲಾರದು.

ಇದಕ್ಕೂ ಮುನ್ನ ಬೌಲಿಂಗ್​ನಲ್ಲಿ 4 ಓವರ್​ಗಳಲ್ಲಿ ಬರೋಬ್ಬರಿ 53 ರನ್ ಚಚ್ಚಿಸಿಕೊಂಡಿದ್ದರು. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಅಂದರೆ ಬೌಲಿಂಗ್​ನಲ್ಲಿ 13.20ರ ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟ ಸ್ಯಾಮ್ ಕರನ್ ಬ್ಯಾಟಿಂಗ್​ನಲ್ಲಿ ಕಲೆಹಾಕಿದ್ದು ಕೇವಲ 18 ರನ್​ಗಳು ಮಾತ್ರ.

ಇದನ್ನೂ ಓದಿ: ಯಾರಿಂದಲೂ ಸಹ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಜೇಕಬ್ ಬೆಥೆಲ್

ಸ್ಯಾಮ್ ಕರನ್​ನ ಈ ಕಳಪೆ ಪ್ರದರ್ಶನವು ಇಂಗ್ಲೆಂಡ್ ತಂಡದ ಸೋಲಿಗೆ ಕಾರಣವಾಗಿದ್ದು ಮಾತ್ರ ವಿಪರ್ಯಾಸ. ಅಂದರೆ ಭಾರತೀಯ ಪ್ರೇಕ್ಷಕರನ್ನು ಸೈಲೆಂಟ್ ಮಾಡಲು ಬಂದು, ಸ್ಯಾಮ್ ಕರನ್ ಸೈಲೆಂಟ್ ಆಗಿಯೇ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿದ್ದರು ಎಂಬುದಕ್ಕೆ ಈ ಪ್ರದರ್ಶನದ ಅಂಕಿ ಅಂಶಗಳೇ ಸಾಕ್ಷಿ.

Follow Us
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!