ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಯುವ ದಾಂಡಿಗ ಸ್ಯಾಮ್ ಕೊನ್ಸ್ಟಾಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಯಾರ್ಕರ್ ಸ್ಪೆಷಲಿಸ್ಟ್ ಖ್ಯಾತಿಯ ವಿಶ್ವದ ನಂಬರ್ 1 ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಎಂಬುದು ವಿಶೇಷ. ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸ್ಯಾಮ್ ಕೊನ್ಸ್ಟಾಸ್ ಆರಂಭದಲ್ಲೇ ಭಾರತೀಯ ಬೌಲರ್ಗಳ ಬೆಂಡೆತ್ತಿದರು.
ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಟೆಸ್ಟ್ ಕೆರಿಯರ್ ಶುರು ಮಾಡಿದ ಸ್ಯಾಮ್ ಕೊನ್ಸ್ಟಾಸ್ ಕೆಲವೇ ಕ್ಷಣಗಳಲ್ಲಿ ತಂಡದ ಸ್ಕೋರ್ ಅನ್ನು 50ರ ಗಡಿದಾಟಿಸಿದರು. ಅದರಲ್ಲೂ ಜಸ್ಪ್ರೀತ್ ಬುಮ್ರಾ ಎಸೆದ 11ನೇ ಓವರ್ನಲ್ಲಿ ಸ್ಯಾಮ್ ಬರೋಬ್ಬರಿ 18 ರನ್ ಚಚ್ಚಿದ್ದರು.
ಬುಮ್ರಾ ಎಸೆದ ಈ ಓವರ್ನ ಮೊದಲ ಎಸೆತದಲ್ಲಿ ಸ್ಯಾಮ್ ಕೊನ್ಸ್ಟಾಸ್ ಫೋರ್ ಬಾರಿಸಿದರು. ದ್ವಿತೀಯ ಎಸೆತದಲ್ಲಿ ಯಾವುದೇ ರನ್ ಮೂಡಿಬಂದಿರಲಿಲ್ಲ. ಮೂರನೇ ಎಸೆತದಲ್ಲಿ 2 ರನ್ ಕಲೆಹಾಕಿದರು. ನಾಲ್ಕನೇ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಐದನೇ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದರು. ಇನ್ನು ಆರನೇ ಎಸೆತದಲ್ಲಿ 2 ರನ್ ಕಲೆಹಾಕಿದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಜಸ್ಪ್ರೀತ್ ಬುಮ್ರಾ ಓವರ್ನಲ್ಲಿ ಸ್ಯಾಮ್ ಕೊನ್ಸ್ಟಾಸ್ 18 ರನ್ಗಳಿಸಿ ಅಬ್ಬರಿಸಿದರು.
KONSTAS SIX OVER LONG-ON!#AUSvIND pic.twitter.com/XvIJYJTKvH
— 7Cricket (@7Cricket) December 26, 2024
ಈ ಅಬ್ಬರದೊಂದಿಗೆ ಸ್ಯಾಮ್ ಕೊನ್ಸ್ಟಾಸ್ ಕೇವಲ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇಂಟ್ರೆಸ್ಟಿಂಗ್ ವಿಷಯ ಎಂದರೆ ಸ್ಯಾಮ್ ಅರ್ಧಶತಕ ಪೂರೈಸುವಾಗ ಆಸ್ಟ್ರೇಲಿಯಾ ತಂಡದ ಸ್ಕೋರ್ 73 ರನ್ಗಳು. ಅದರಲ್ಲಿ 52 ರನ್ಗಳನ್ನು ಯುವ ದಾಂಡಿಗನೇ ಕಲೆಹಾಕಿದ್ದರು.
Drop everything and get to 7plus to watch Sam Konstas’ first Test innings!
This is extraordinary!#AUSvIND pic.twitter.com/biblhTRBVw
— 7Cricket (@7Cricket) December 26, 2024
ಈ ಮೂಲಕ ಮೊದಲ ಪಂದ್ಯದಲ್ಲಿ ಎದುರಿಸಿದ 65 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 60 ರನ್ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ 19 ವರ್ಷದ ಸ್ಯಾಮ್ ಕೊನ್ಸ್ಟಾಸ್ ಸ್ಪೋಟಕ ಇನಿಂಗ್ಸ್ನೊಂದಿಗೆ ತಮ್ಮ ಟೆಸ್ಟ್ ಕೆರಿಯರ್ ಆರಂಭಿಸಿದ್ದು ವಿಶೇಷ.