Sandeep Lamichhane: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಯುವ ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಜೈಲು ಶಿಕ್ಷೆ
ಅತ್ಯಾಚಾರ ಪ್ರಕರಣದಲ್ಲಿ ಸಂದೀಪ್‌ಗೆ ಎಷ್ಟು ವರ್ಷ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ನ್ಯಾಯಾಧೀಶರು ಬಹಿರಂಗಪಡಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ. ಲಾಮಿಚಾನೆ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ನೇಪಾಳ ಪೊಲೀಸರು ಅವರನ್ನು ಅಕ್ಟೋಬರ್ 6 ರಂದು ಬಂಧಿಸಿದ್ದರು.
ನೇಪಾಳ ಕ್ರಿಕೆಟ್ ತಂಡಕ್ಕೆ ಭಾರೀ ದೊಡ್ಡ ಹಿನ್ನಡೆ ಆಗಿದೆ. ತಂಡದ ಮಾಜಿ ನಾಯಕ ಮತ್ತು ಅದ್ಭುತ ಲೆಗ್ ಸ್ಪಿನ್ನರ್ ಸಂದೀಪ್ ಲಮಿಚಾನೆ (Sandeep Lamichhane) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ. ಶುಕ್ರವಾರ (ಡಿಸೆಂಬರ್ 29) ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್ ಲಮಿಚಾನೆ ದೋಷಿ ಎಂದು ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಸಂದೀಪ್‌ಗೆ ಎಷ್ಟು ವರ್ಷ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ನ್ಯಾಯಾಧೀಶರು ಬಹಿರಂಗಪಡಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ.
ಸಂದೀಪ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ್ದರು. ಈ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪ್ರತಿನಿಧಿಸುತ್ತಿದ್ದಾರೆ. ಲಾಮಿಚಾನೆ ಜನವರಿ 12 ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ನೇಪಾಳ ಪೊಲೀಸರು ಅವರನ್ನು ಅಕ್ಟೋಬರ್ 6 ರಂದು ಬಂಧಿಸಿದ್ದರು.
ಭಾರತ-ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಮಾಹಿತಿ
ಆಗಸ್ಟ್ 21 ರಂದು ಕಠ್ಮಂಡು ಜಿಲ್ಲಾ ನ್ಯಾಯಾಲಯದ ವಕೀಲರು 17 ವರ್ಷದ ಬಾಲಕಿಯ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಸಂದೀಪ್ ವಿರುದ್ಧ ಆರೋಪ ಹೊರಿಸಲಾಗಿದೆ. ಅಪ್ರಾಪ್ತ ಬಾಲಕಿ ಸಂದೀಪ್ ವಿರುದ್ಧ 6 ಸೆಪ್ಟೆಂಬರ್ 2022 ರಂದು ಗೌಶಾಲ್ ಮೆಟ್ರೋಪಾಲಿಟನ್ ಪೊಲೀಸ್ ವೃತ್ತದಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂದೀಪ್ ಪ್ರಸ್ತುತ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಪರ ಆಡುತ್ತಿದ್ದಾರೆ. ಇವರು ಸಂದೀಪ್ ಎರಡು ವರ್ಷಗಳ ಕಾಲ ಐಪಿಎಲ್ ಆಡಿದ್ದಾರೆ. 2018 ಮತ್ತು 2019 ರ ಋತುಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪ್ರತಿನಿಧಿಸಿದ್ದರು.
ಸಂದೀಪ್ ನೇಪಾಳ ಪರ 51 ಏಕದಿನ ಪಂದ್ಯಗಳನ್ನಾಡಿದ್ದು, 112 ವಿಕೆಟ್ ಪಡೆದಿದ್ದಾರೆ. 20 ಟಿ20 ಪಂದ್ಯಗಳಲ್ಲಿ ನೇಪಾಳ ಪರ 98 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಸಂದೀಪ್ ವಿಶ್ವದಾದ್ಯಂತ ಟಿ20 ಲೀಗ್‌ಗಳಲ್ಲಿ ಆಡುತ್ತಾರೆ. ಅವರು ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ನಲ್ಲೂ ಕಾಣಿಸಿಕೊಂಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ