AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sania Shoaib Divorce:‘ಸಾನಿಯಾ- ಶೋಯೆಬ್ ವಿಚ್ಛೇದನ ಪಡೆಯಲಿದ್ದಾರೆ’; ಆಪ್ತ ಸ್ನೇಹಿತನ ಅಧಿಕೃತ ಹೇಳಿಕೆ

Sania Shoaib Divorce: ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ವಿಚ್ಛೇದನ ಪಡೆಯುವುದು ಖಚಿತ ಎಂದು ವರದಿಯಾಗಿದೆ.

Sania Shoaib Divorce:‘ಸಾನಿಯಾ- ಶೋಯೆಬ್ ವಿಚ್ಛೇದನ ಪಡೆಯಲಿದ್ದಾರೆ’; ಆಪ್ತ ಸ್ನೇಹಿತನ ಅಧಿಕೃತ ಹೇಳಿಕೆ
ಸಾನಿಯಾ- ಶೋಯೆಬ್Image Credit source: newstrack
TV9 Web
| Updated By: ಪೃಥ್ವಿಶಂಕರ|

Updated on:Nov 11, 2022 | 4:24 PM

Share

ಕಳೆದ ಕೆಲವು ದಿನಗಳಿಂದ ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ (Sania Mirza) ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ (Shoaib Malik) ಅವರ ವೈಯಕ್ತಿಕ ಬದುಕಿನಲ್ಲಿ ಉಂಟಾಗಿರುವ ಬಿರುಕಿನ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿವೆ. ಈಗ ಈ ವದಂತಿಗೆ ಅಧಿಕೃತ ಮುದ್ರೆ ಬಿದ್ದಿದ್ದು, ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ವಿಚ್ಛೇದನ (divorce) ಪಡೆಯುವುದು ಖಚಿತ ಎಂದು ವರದಿಯಾಗಿದೆ. ಶೋಯೆಬ್ ಮಲಿಕ್ ಸ್ನೇಹಿತರೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದು, ಕ್ರೀಡಾ ಲೋಕದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ದಂಪತಿಗಳು ಈಗಾಗಲೇ ಬಹಳ ದಿನದಿಂದ ಬೇರೆ ಬೇರೆಯಾಗಿ ವಾಸಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.

ಅದರಲ್ಲೂ ಶೋಯೆಬ್ ಸಾನಿಯಾಗೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಶೋಯೆಬ್ ಪಾಕಿಸ್ತಾನಿ ಹುಡುಗಿಯೊಂದಿಗೆ ಕೆಲವು ದಿನಗಳಿಂದ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿ ಕೂಡ ಪಾಕಿಸ್ತಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸಾನಿಯಾ ಮತ್ತು ಶೋಯೆಬ್ ಅವರ ಸಂಬಂಧದಲ್ಲಿ ಕೆಲವು ತಿಂಗಳುಗಳಿಂದ ಬಿರುಕು ಇತ್ತು. ಇದರಿಂದಾಗಿ ಈ ಜೋಡಿಗಳು ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಆದರೆ ಈ ಇಬ್ಬರೂ ಸಹ ಈ ವದಂತಿಯ ಬಗ್ಗೆ ಅಧಿಕೃತವಾಗಿ ಏನ್ನನ್ನು ಹೇಳಿಲ್ಲ. ಹೀಗಾಗಿ ಶೀಘ್ರದಲ್ಲೇ ಇಬ್ಬರೂ ಕಾನೂನು ವಿಷಯಗಳನ್ನು ಪೂರ್ಣಗೊಳಿಸಿದ ನಂತರ ಬೇರೆಯಾಗಲಿದ್ದಾರೆ ಎಂದು ವರದಿಯಾಗಿದೆ. ಶೋಯೆಬ್ ಮಲಿಕ್ ಅವರ ಆಪ್ತ ಸ್ನೇಹಿತರೊಬ್ಬರು ಈ ಬಗ್ಗೆ ವಿವರಣೆ ನೀಡಿದ್ದು, ಶೀಘ್ರದಲ್ಲೇ ಇವರಿಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನಿ ನಟಿಯೊಂದಿಗೆ ಹಾಟ್ ಫೋಟೋ ಶೂಟ್

ಅಷ್ಟಕ್ಕೂ ಈ ಜೋಡಿಯ ನಡುವೆ ಬಿರುಕು ಮೂಡಲು ಶೋಯೆಬ್ ಅವರ ಅಕ್ರಮ ಸಂಬಂಧ ಕಾರಣವೆಂದು ಪಾಕ್ ಮೀಡಿಯಾಗಳು ವರದಿ ಮಾಡಿವೆ. ಕಳೆದ ವರ್ಷ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಆಯೇಶಾ ಒಮರ್ ಜೊತೆ ಹಾಟ್ ಫೋಟೋಶೂಟ್ ಮಾಡಿದ್ದರು. ಇದರಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ತೆಗೆದಿದ್ದ ಅವರಿಬ್ಬರ ಹಾಟ್ ಫೋಟೋಗಳೂ ಇದ್ದವು. ಈ ಫೋಟೋಗಳು ಆ ಸಮಯದಲ್ಲಿ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆ ವೇಳೆ ಆಯೇಶಾ ಒಮರ್ ಬಳಿ ಈ ಇಬ್ಬರ ನಡುವಿನ ಸಂಬಂಧದ ಬಗ್ಗೆ ಕೇಳಲಾಗಿತ್ತು. ಆದರೆ ಆಯೇಶಾ ಈ ಎಲ್ಲಾ ವದಂತಿಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದರು.

ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ

2010 ರಲ್ಲಿ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿವಾಹವಾಗುವುದಾಗಿ ಹೇಳಿಕೆ ನೀಡಿದಾಗ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಈ ಎಲ್ಲಾ ಟೀಕೆಗಳಿಗೆ ಸೊಪ್ಪು ಹಾಕದ ಈ ಜೋಡಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಹಲವರು ಈ ಜೋಡಿ ಹೆಚ್ಚು ವರ್ಷ ಜೊತೆಯಾಗಿ ಬಾಳುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಎಲ್ಲರ ಮಾತುಗಳನ್ನು ಸುಳ್ಳು ಮಾಡಿದ್ದ ಈ ಜೋಡಿ 12 ವರ್ಷಗಳ ಕಾಲ ಜೊತೆಗೆ ಜೀವನ ನಡೆಸಿತ್ತು. ಅಲ್ಲದೆ ಈ ದಂಪತಿಗಳಿಗೆ 2018 ರಲ್ಲಿ ಗಂಡು ಮಗು ಕೂಡ ಜನಿಸಿತ್ತು. ಆದರೆ 12 ವರ್ಷಗಳ ವೈವಾಹಿಕ ಬದುಕಿಗೆ ವಿದಾಯ ಹೇಳಲು ಮುಂದಾಗಿವೆ ಎಂದು ಹಲವು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಸಾನಿಯಾ ಆಗಲಿ, ಶೋಯೆಬ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Published On - 4:10 pm, Fri, 11 November 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ