Sania Mirza: ಮೂಗುತಿ ಸುಂದರಿ ಬಾಳಲ್ಲಿ ಬಿರುಗಾಳಿ; ದೂರಾಗ್ತಿದ್ದಾರಾ ಸಾನಿಯಾ- ಶೋಯೆಬ್?

Sania Mirza: ಕಳೆದ ವರ್ಷ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಆಯೇಶಾ ಒಮರ್ ಜೊತೆ ಹಾಟ್ ಫೋಟೋಶೂಟ್ ಮಾಡಿದ್ದರು. ಇದರಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ತೆಗೆದಿದ್ದ ಅವರಿಬ್ಬರ ಹಾಟ್ ಫೋಟೋಗಳೂ ಇದ್ದವು.

Sania Mirza: ಮೂಗುತಿ ಸುಂದರಿ ಬಾಳಲ್ಲಿ ಬಿರುಗಾಳಿ; ದೂರಾಗ್ತಿದ್ದಾರಾ ಸಾನಿಯಾ- ಶೋಯೆಬ್?
sania-Shoaib
Follow us
TV9 Web
| Updated By: ಪೃಥ್ವಿಶಂಕರ

Updated on:Nov 07, 2022 | 4:28 PM

ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ (Sania Mirza) ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿರುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ (Shoaib Malik) ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿದ ಪೋಸ್ಟ್​ನಿಂದ ಈ ಎಲ್ಲಾ ವದಂತಿಗಳಿಗೆ ರೆಕ್ಕೆಪುಕ್ಕ ಸಿಕ್ಕಿದೆ. ಸಾನಿಯಾ ಮತ್ತು ಶೋಯೆಬ್ ಏಪ್ರಿಲ್ 2010 ರಲ್ಲಿ ವಿವಾಹವಾಗಿದ್ದರು. ಅಲ್ಲದೆ ಶೋಯೆಬ್ ಪಾಕಿಸ್ತಾನ ಮೂಲದವರಾಗಿದ್ದರಿಂದ ಆ ಸಮಯದಲ್ಲಿ ಈ ಇಬ್ಬರ ಮದುವೆಗೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು.

ಸಾನಿಯಾ ಪೋಸ್ಟ್​ನಲ್ಲಿ ಏನಿದೆ?

ಕೆಲವು ದಿನಗಳ ಹಿಂದೆ ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ಸ್ಟೋರಿಯೊಂದನ್ನು ಪೋಸ್ಟ್ ಮಾಡಿದ್ದ ಸಾನಿಯಾ ಅದರಲ್ಲಿ “ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ. ಅಲ್ಲಾನನ್ನು ಹುಡುಕಲು” ಎಂದು ಬರೆದುಕೊಂಡಿದ್ದರು. ಅಲ್ಲಿಂದ ಈ ಕ್ರೀಡಾ ದಂಪತಿಗಳ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಟಾಕ್ ಶುರುವಾಗಿತ್ತು. ಅದೂ ಸಾಲದೆಂಬಂತೆ ಇತ್ತೀಚೆಗೆ ದಂಪತಿಗಳು ತಮ್ಮ ಮಗ ಇಜಾನ್ ಮಿರ್ಜಾ ಮಲಿಕ್ ಅವರ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿದ್ದರು. ಅದರ ಫೋಟೋಗಳನ್ನು ಶೋಯೆಬ್ ಮಲಿಕ್ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ಸಾನಿಯಾ ಇದರ ಬಗ್ಗೆ ಒಂದೇ ಒಂದು ಪೋಸ್ಟ್ ಕೂಡ ಹಾಕಿರಲಿಲ್ಲ. ಇದು ಕೂಡ ಹರಿದಾಡುತ್ತಿದ್ದ ವದಂತಿಗೆ ಪುಷ್ಠಿ ನೀಡಿತ್ತು.

ಪಾಕಿಸ್ತಾನಿ ನಟಿಯೊಂದಿಗೆ ಹಾಟ್ ಫೋಟೋ ಶೂಟ್

ಅಷ್ಟಕ್ಕೂ ಈ ಜೋಡಿಯ ನಡುವೆ ಬಿರುಕು ಮೂಡಲು ಶೋಯೆಬ್ ಅವರ ಅಕ್ರಮ ಸಂಬಂಧ ಕಾರಣವೆಂದು ಪಾಕ್ ಮೀಡಿಯಾಗಳು ವರದಿ ಮಾಡಿವೆ. ಕಳೆದ ವರ್ಷ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಆಯೇಶಾ ಒಮರ್ ಜೊತೆ ಹಾಟ್ ಫೋಟೋಶೂಟ್ ಮಾಡಿದ್ದರು. ಇದರಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ತೆಗೆದಿದ್ದ ಅವರಿಬ್ಬರ ಹಾಟ್ ಫೋಟೋಗಳೂ ಇದ್ದವು. ಈ ಫೋಟೋಗಳು ಆ ಸಮಯದಲ್ಲಿ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆ ವೇಳೆ ಆಯೇಶಾ ಒಮರ್ ಬಳಿ ಈ ಇಬ್ಬರ ನಡುವಿನ ಸಂಬಂಧದ ಬಗ್ಗೆ ಕೇಳಲಾಗಿತ್ತು. ಆದರೆ ಆಯೇಶಾ ಈ ಎಲ್ಲಾ ವದಂತಿಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದರು.

ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ

2010 ರಲ್ಲಿ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿವಾಹವಾಗುವುದಾಗಿ ಹೇಳಿಕೆ ನೀಡಿದಾಗ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಈ ಎಲ್ಲಾ ಟೀಕೆಗಳಿಗೆ ಸೊಪ್ಪು ಹಾಕದ ಈ ಜೋಡಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಆದರೆ ಹಲವರು ಈ ಜೋಡಿ ಹೆಚ್ಚು ವರ್ಷ ಜೊತೆಯಾಗಿ ಬಾಳುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಎಲ್ಲರ ಮಾತುಗಳನ್ನು ಸುಳ್ಳು ಮಾಡಿದ್ದ ಈ ಜೋಡಿ 12 ವರ್ಷಗಳ ಕಾಲ ಜೊತೆಗೆ ಜೀವನ ನಡೆಸಿತ್ತು. ಅಲ್ಲದೆ ಈ ದಂಪತಿಗಳಿಗೆ 2018 ರಲ್ಲಿ ಗಂಡು ಮಗು ಕೂಡ ಜನಿಸಿತ್ತು. ಆದರೆ 12 ವರ್ಷಗಳ ವೈವಾಹಿಕ ಬದುಕಿಗೆ ವಿದಾಯ ಹೇಳಲು ಮುಂದಾಗಿವೆ ಎಂದು ಹಲವು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಸಾನಿಯಾ ಆಗಲಿ, ಶೋಯೆಬ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Published On - 4:26 pm, Mon, 7 November 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ