AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಿಂಗಳುಗಳೇ ಕಳೆದಿವೆ’; ವಿಚ್ಛೇದನ ವದಂತಿಯ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಸಾನಿಯಾ ಸಹೋದರಿ

Sania Mirza- Shoaib Malik: ಶೋಯೆಬ್ ಮಲಿಕ್, ಸಾನಿಯಾ ಮಿರ್ಜಾ ಅವರಿಗೆ ಡಿವೋರ್ಸ್​ ನೀಡದೆ ಮತ್ತೊಂದು ಮದುವೆಯಾಗಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ವದಂತಿಗಳಿಗೆ ಉತ್ತರ ಕೊಡುವ ಕೆಲಸವನ್ನು ಸಾನಿಯಾ ಅವರ ಸಹೋದರಿ ಅನಮ್ ಮಿರ್ಜಾ ಮಾಡಿದ್ದಾರೆ.

‘ತಿಂಗಳುಗಳೇ ಕಳೆದಿವೆ’; ವಿಚ್ಛೇದನ ವದಂತಿಯ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಸಾನಿಯಾ ಸಹೋದರಿ
ಸಹೋದರಿಯೊಂದಿಗೆ ಸಾನಿಯಾ ಮಿರ್ಜಾ
ಪೃಥ್ವಿಶಂಕರ
|

Updated on:Jan 21, 2024 | 3:54 PM

Share

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ (Shoaib Malik), ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರೊಂದಿಗೆ ಮೂರನೇ ಮದುವೆಯಾಗುವ ಮೂಲಕ ತಮ್ಮ ಎರಡನೇ ಪತ್ನಿ ಸಾನಿಯಾ ಮಿರ್ಜಾ (Sania Mirza) ಅವರಿಂದ ದೂರವಾಗಿರುವ ಬಗ್ಗೆ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಮೂರನೇ ಮದುವೆಯಾಗಿರುವ ಸಂಗತಿಯನ್ನು ಮಲಿಕ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಆದರೆ ಈ ಫೋಟೋಗಳು ವೈರಲ್ ಆದ ಬಳಿಕ ಶೋಯೆಬ್ ಮಲಿಕ್, ಸಾನಿಯಾ ಮಿರ್ಜಾ ಅವರಿಗೆ ಡಿವೋರ್ಸ್ (divorce)​ ನೀಡದೆ ಮತ್ತೊಂದು ಮದುವೆಯಾಗಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ವದಂತಿಗಳಿಗೆ ಉತ್ತರ ಕೊಡುವ ಕೆಲಸವನ್ನು ಸಾನಿಯಾ ಅವರ ಸಹೋದರಿ ಅನಮ್ ಮಿರ್ಜಾ (Anam Mirza) ಮಾಡಿದ್ದಾರೆ.

ವಾಸ್ತವವಾಗಿ ಸಾನಿಯಾ ಹಾಗೂ ಶೋಯೆಬ್ ಮಲಿಕ್ ನಡುವಿನ ವೈಯಕ್ತಿಕ ಬದುಕು ವರ್ಷಗಳ ಹಿಂದೆಯೇ ಹದಗೆಟ್ಟಿತ್ತು. ಹೀಗಾಗಿ ಇವರಿಬ್ಬರು ಪರಸ್ಪರ ಬೇರೆ ಬೇರೆ ವಾಸಿಸಲು ಶುರು ಮಾಡಿದ್ದರು. ಆಗಲೇ ಈ ಇಬ್ಬರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಹಾಗೆಯೇ ಈ ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ದೂರವಾಗಿದ್ದಾರೆ ಎಂತಲೂ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಈ ಇಬ್ಬರೂ ಸಹ ಯಾವುದೇ ಮಾಹಿತಿ ಹೊರಹಾಕಿರಲಿಲ್ಲ. ಹಾಗೆಯೇ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂಬುದು ಸಹ ಎಲ್ಲಿಯೂ ಅಧಿಕೃತವಾಗಿ ಪ್ರಕಟವಾಗಿರಲಿಲ್ಲ. ಹೀಗಾಗಿ ಈ ಇಬ್ಬರ ಅಭಿಮಾನಿಗಳ ನಡುವೆ ಗಾಳಿ ಸುದ್ದಿ ಹರಿದಾಡಲಾರಂಭಿಸಿತ್ತು. ಆದರೀಗ ಆ ಎಲ್ಲಾ ಸುದ್ದಿಗಳಿಗೆ ಅಂತಿಮ ತೆರೆ ಬಿದ್ದಿದೆ.

ಸಾನಿಯಾ ಮಿರ್ಜಾ- ಶೋಯೆಬ್ ಮಲಿಕ್.. ಈ ಇಬ್ಬರಲ್ಲಿ ಯಾರು ಹೆಚ್ಚು ಸಿರಿವಂತರು?

ಸಾನಿಯಾ ಸಹೋದರಿ ಹೇಳಿದ್ದೇನು?

ಸೋಷಿಯಲ್ ಮೀಡಿಯಾದಲ್ಲಿ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಎದ್ದಿರುವ ಪ್ರಶ್ನೆಗಳ ನಡುವೆ, ಸಾನಿಯಾ ಮಿರ್ಜಾ ಅವರ ಸಹೋದರಿ ಅನಮ್ ಮಿರ್ಜಾ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ವಿಚ್ಛೇದನದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾನಿಯಾ ಯಾವಾಗಲೂ ತಮ್ಮ ಜೀವನವನ್ನು ತುಂಬಾ ಖಾಸಗಿಯಾಗಿ ಇಟ್ಟುಕೊಂಡಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನವನ್ನು ಸಾರ್ವಜನಿಕರ ಕಣ್ಣಿನಿಂದ ದೂರವಿಟ್ಟಿದ್ದಾರೆ. ಆದರೆ ಇಂದು ಶೋಯೆಬ್ ಮತ್ತು ಅವಳ ವಿಚ್ಛೇದನದ ಬಗ್ಗೆ ಎಲ್ಲರಿಗೂ ಹೇಳಬೇಕು ಎಂದು ಸಾನಿಯಾ ಭಾವಿಸಿದ್ದಾಳೆ. ಅವರಿಬ್ಬರು ವಿಚ್ಛೇದನ ಪಡೆದು ಕೆಲವು ತಿಂಗಳುಗಳೇ ಕಳೆದಿವೆ. ಶೋಯೆಬ್ ಅವರ ಹೊಸ ಜೀವನಕ್ಕೆ ಸಾನಿಯಾ ಕೂಡ ಶುಭ ಹಾರೈಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

View this post on Instagram

A post shared by Anam Mirza (@anammirzaaa)

2010 ರಲ್ಲಿ ಶೋಯೆಬ್-ಸಾನಿಯಾ ಮದುವೆ

ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ 2010 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇವರಿಬ್ಬರೂ ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ವಿವಾಹವಾಗಿದ್ದರು. ಉಭಯ ದೇಶಗಳ ಕ್ರೀಡಾ ಪ್ರೇಮಿಗಳಲ್ಲಿ ಈ ‘ಹೈ ಪ್ರೊಫೈಲ್’ ಜೋಡಿಯ ಬಗ್ಗೆ ಸಾಕಷ್ಟು ಆಸಕ್ತಿ ಇತ್ತು. ಆದರೆ ಅದು ಇವರಿಬ್ಬರ ವಿಚ್ಛೇದನದೊಂದಿಗೆ ಕೊನೆಗೊಂಡಿದೆ. ಮದುವೆಯಾದ 8 ವರ್ಷಗಳ ನಂತರ, ಶೋಯೆಬ್ ಮತ್ತು ಸಾನಿಯಾಗೆ ಇಝಾನ್ ಮಿರ್ಜಾ ಮಲಿಕ್ ಎಂಬ ಒಬ್ಬ ಮಗ ಕೂಡ ಜನಿಸಿದ್ದ. ಇದೆಲ್ಲದರ ನಡುವೆ ಇದೀಗ ಈ ಜೋಡಿ ಬೇರೆ ಬೇರೆಯಾಗಿ ಬದುಕು ನಡೆಸಲು ತೀರ್ಮಾನಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Sun, 21 January 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ