ಏಕದಿನ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್

| Updated By: ಝಾಹಿರ್ ಯೂಸುಫ್

Updated on: Aug 26, 2023 | 10:43 PM

Team India: ಏಕದಿನ ವಿಶ್ವಕಪ್​ನಲ್ಲಿ ಬ್ಯಾಟರ್​ ಸ್ಥಾನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಹೆಸರಿಸಿದ ಸಂಜಯ್ ಬಂಗಾರ್
Team India
Follow us on

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಚರ್ಚೆಗಳು ಜೋರಾಗುತ್ತಿದೆ. 10 ತಂಡಗಳ ನಡುವಣ ಈ ಟೂರ್ನಿಯಲ್ಲಿ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡ ಯಾವುದೆಂಬ ಚರ್ಚೆ ಒಂದೆಡೆಯಾದರೆ, ಈ ಸಲ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಆಟಗಾರರು ಯಾರೆಲ್ಲಾ ಎಂಬ ಕುತೂಹಲ ಮತ್ತೊಂದೆಡೆ. ಆದರೆ ಈ ಕುತೂಹಲವನ್ನು ತಣಿಸುವಂತಹ ಉತ್ತರ ನೀಡಿದ್ದಾರೆ ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್.

ಖಾಸಗಿ ಚಾನೆಲ್​ವೊಂದರ ಚರ್ಚೆಯಲ್ಲಿ ಕಾಣಿಸಿಕೊಂಡ ಸಂಜಯ್ ಬಂಗಾರ್, ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾ ಹೇಗಿರಬೇಕೆಂದು ಸಲಹೆ ನೀಡಿದ್ದಾರೆ. ಈ ಸಲಹೆಯೊಂದಿಗೆ ಬಲಿಷ್ಠ 15 ಸದಸ್ಯರ ತಂಡವನ್ನು ಕೂಡ ಆಯ್ಕೆ ಮಾಡಿದ್ದಾರೆ. ಹಾಗಿದ್ರೆ ಬಂಗಾರ್ ಹೆಸರಿಸಿರುವ ಆಟಗಾರರ ಸಂಯೋಜನೆ ಹೇಗಿದೆ ಎಂದು ನೋಡೋಣ…

ಬ್ಯಾಟರ್​ಗಳು:

ಏಕದಿನ ವಿಶ್ವಕಪ್​ನಲ್ಲಿ ಬ್ಯಾಟರ್​ ಸ್ಥಾನಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಆಲ್​ರೌಂಡರ್​ಗಳು:

ಏಕದಿನ ವಿಶ್ವಕಪ್ ತಂಡದಲ್ಲಿ ಆಲ್​ರೌಂಡರ್​ಗಳಾಗಿ ಮೂವರಿಗೆ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿರುವ ಸಂಜಯ್ ಬಂಗಾರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅವರನ್ನು ಈ ಸ್ಥಾನಗಳಿಗೆ ಆಯ್ಕೆ ಮಾಡಿದ್ದಾರೆ.

ಸ್ಪಿನ್ ಬೌಲರ್​:

ಪರಿಪೂರ್ಣ ಸ್ಪಿನ್ ಬೌಲರ್​ ಆಗಿ ಸಂಜಯ್ ಬಂಗಾರ್ ಆಯ್ಕೆ ಮಾಡಿರುವುದು ಕುಲ್ದೀಪ್ ಯಾದವ್ ಅವರನ್ನು ಮಾತ್ರ.

ವೇಗದ ಬೌಲರ್‌ಗಳು:

ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಇರಬೇಕೆಂದು ಸಂಜಯ್ ಬಂಗಾರ್ ತಿಳಿಸಿದ್ದಾರೆ. ಹಾಗೆಯೇ ಎಡಗೈ ವೇಗಿಯಾಗಿ ಅರ್ಷದೀಪ್ ಸಿಂಗ್​ಗೆ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ODI World Cup 2023 Schedule: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಸಂಜಯ್ ಬಂಗಾರ್ ಅವರ ಏಕದಿನ ವಿಶ್ವಕಪ್ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.