AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಟ್ ಟೆಸ್ಟ್​ ಇಲೆವೆನ್ ಹೆಸರಿಸಿದ ಸಂಜಯ್ ಬಂಗಾರ್

Sanjay Banger: ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 27 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 12 ಟೆಸ್ಟ್ ಪಂದ್ಯಗಳಿಂದ 470 ರನ್ ಕಲೆಹಾಕಿದರೆ, 15 ಏಕದಿನ ಮ್ಯಾಚ್​ಗಳಿಂದ 180 ರನ್ ಬಾರಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜರ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು.

ಬೆಸ್ಟ್ ಟೆಸ್ಟ್​ ಇಲೆವೆನ್ ಹೆಸರಿಸಿದ ಸಂಜಯ್ ಬಂಗಾರ್
FAB-4
ಝಾಹಿರ್ ಯೂಸುಫ್
|

Updated on:Aug 26, 2024 | 12:01 PM

Share

ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಈ ಜನರೇಷನ್​ನ ಬೆಸ್ಟ್​ ಟೆಸ್ಟ್ ಇಲೆವೆನ್​ ಹೆಸರಿಸಿದ್ದಾರೆ. ವಿಶ್ವದ ಪ್ರಮುಖ ಆಟಗಾರರನ್ನು ಒಳಗೊಂಡ ಈ ತಂಡದಲ್ಲಿ ಭಾರತದ 7 ಆಟಗಾರರಿರುವುದು ವಿಶೇಷ. ಅಚ್ಚರಿ ಎಂದರೆ ಈ ತಂಡದಲ್ಲಿ ಟೆಸ್ಟ್ ಸ್ಪೆಷಲಿಸ್ಟ್​ಗಳಾದ ಇಂಗ್ಲೆಂಡ್​ನ ಜೋ ರೂಟ್ ಹಾಗೂ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್​ಗೆ ಸ್ಥಾನ ಕಲ್ಪಿಸಲಾಗಿಲ್ಲ.

ಈ ತಂಡಕ್ಕೆ ಆರಂಭಿಕ ಜೋಡಿಯಾಗಿ ಸಂಜಯ್ ಬಂಗಾರ್ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾ ದಾಂಡಿಗ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ ಅವರನ್ನು ಹೆಸರಿಸಿರುವ ಬಂಗಾರ್, ನಾಲ್ಕನೇ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿಯನ್ನು ಸೂಚಿಸಿದ್ದಾರೆ. ಕಿಂಗ್ ಕೊಹ್ಲಿ ಟೆಸ್ಟ್​ನಲ್ಲಿ ನಾಲ್ಕನೇ ಕ್ರಮಾಂಕದಲ್ಲೇ ಆಡುತ್ತಿರುವುದರಿಂದ ಅವರನ್ನು ಅದೇ ಕ್ರಮಾಂಕಕ್ಕೆ ಆಯ್ಕೆ ಮಾಡಿದ್ದಾರೆ.

ವಿಕೆಟ್ ಕೀಪರ್ ಬ್ಯಾಟರ್ ಆಗಿ ಈ ತಂಡದಲ್ಲಿ ರಿಷಭ್ ಪಂತ್​ಗೆ ಸ್ಥಾನ ನೀಡಲಾಗಿದೆ. ಆರನೇ ಕ್ರಮಾಂಕದಲ್ಲಿ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್​ ಅವರನ್ನು ಹೆಸರಿಸಿದ್ದಾರೆ. ಅಲ್ಲದೆ ಏಳನೇ ಕ್ರಮಾಂಕದಲ್ಲಿ ಆಲ್​ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದಾರೆ. 8ನೇ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇನ್ನು ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಝಲ್​ವುಡ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಸಂಜಯ್ ಬಂಗಾರ್ ಹೆಸರಿಸಿರುವ ಈ ಪೀಳಿಗೆಯ ಬೆಸ್ಟ್ ಟೆಸ್ಟ್ ಇಲೆವೆನ್ ಈ ಕೆಳಗಿನಂತಿದೆ…

  1. ರೋಹಿತ್ ಶರ್ಮಾ (ಭಾರತ)
  2. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)
  3. ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)
  4. ವಿರಾಟ್ ಕೊಹ್ಲಿ (ಭಾರತ)
  5. ರಿಷಬ್ ಪಂತ್ (ಭಾರತ)
  6. ಬೆನ್ ಸ್ಟೋಕ್ಸ್ (ಇಂಗ್ಲೆಂಡ್)
  7. ರವೀಂದ್ರ ಜಡೇಜಾ (ಭಾರತ)
  8. ರವಿಚಂದ್ರನ್ ಅಶ್ವಿನ್ (ಭಾರತ)
  9. ಜಸ್​ಪ್ರೀತ್ ಬುಮ್ರಾ (ಭಾರತ)
  10. ಮೊಹಮ್ಮದ್ ಶಮಿ (ಭಾರತ)
  11. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)

ಸಂಜಯ್ ಬಂಗಾರ್ ವೃತ್ತಿಜೀವನ:

ಸಂಜಯ್ ಬಂಗಾರ್ ಅವರು ಟೀಮ್ ಇಂಡಿಯಾ ಪರ 27 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 12 ಟೆಸ್ಟ್ ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ಅವರು ಒಟ್ಟು 470 ರನ್ ಕಲೆಹಾಕಿದ್ದಾರೆ. ಹಾಗೆಯೇ 7 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು 15 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಸಂಜಯ್ ಬಂಗಾರ್ ಒಂದು ಅರ್ಧಶತಕದೊಂದಿಗೆ ಒಟ್ಟು 180 ರನ್ ಕಲೆಹಾಕಿದ್ದಾರೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಹಾಗೆಯೇ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜರ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿರುವ ಬಂಗಾರ್ 12 ಪಂದ್ಯಗಳಲ್ಲಿ 8 ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದು, ಈ ವೇಳೆ 49 ರನ್ ಕಲೆಹಾಕಿದ್ದಾರೆ. ಇದೇ ವೇಳೆ 4 ವಿಕೆಟ್​ಗಳನ್ನು ಕಬಳಿಸಿದ್ದಾರೆ.

Published On - 11:58 am, Mon, 26 August 24

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ