Asia Cup 2025: 4 ವಿಕೆಟ್ ಉರುಳಿಸಿದ ಕುಲ್ದೀಪ್ಗೆ ಪಾಕ್ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶವಿಲ್ಲ
Kuldeep Yadav: 2025 ರ ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧದ ಪಂದ್ಯದಲ್ಲಿ ಕುಲ್ದೀಪ್ ಯಾದವ್ 4 ವಿಕೆಟ್‌ಗಳನ್ನು ಕಬಳಿಸಿ ಟೀಂ ಇಂಡಿಯಾವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಕುಲ್ದೀಪ್ ಯಾದವ್ ಅವರ ಈ ಅದ್ಭುತ ಪ್ರದರ್ಶನದ ಹೊರತಾಗಿಯೂ ಅವರಿಗೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವ ಅವಕಾಶ ಸಿಗದಿರಬಹುದು ಎಂದು ಸಂಜಯ್ ಮಂಜ್ರೇಕರ್ ಪೋಸ್ಟ್ ಮಾಡಿದ್ದಾರೆ.

ಏಷ್ಯಾಕಪ್‌ನಲ್ಲಿ (Asia Cup 2025) ಶುಭಾರಂಭ ಮಾಡಿರುವ ಟೀಂ ಇಂಡಿಯಾ ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಉಭಯ ದೇಶಗಳಿಗೆ ಇದು ಪ್ರತಿಷ್ಠೆಯ ಕಣವಾಗಿರುವುದರಿಂದ ಎರಡೂ ತಂಡಗಳು ಗೆಲ್ಲಲೇಬೇಕಾದ ಒತ್ತಡದಲ್ಲಿವೆ. ಹೀಗಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನು ಕಟ್ಟಿಕೊಂಡು ಕಣಕ್ಕಿಳಿಯಲಿವೆ. ಇತ್ತ ಟೀಂ ಇಂಡಿಯಾ ಬಗ್ಗೆ ಹೇಳುವುದಾದರೆ ಯುಎಇ ವಿರುದ್ಧದ ಪಂದ್ಯದಲ್ಲಿ ಒಂದು ಓವರ್‌ನಲ್ಲಿ 3 ವಿಕೆಟ್‌ಗಳನ್ನು ಉರುಳಿಸಿದ್ದ ಕುಲ್ದೀಪ್ ಯಾದವ್ಗೆ (Kuldeep Yadav) ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಎಇ ತಂಡ ಕೇವಲ 57 ರನ್‌ಗಳಿಗೆ ಆಲೌಟ್ ಆಯಿತು. ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ 2.1 ಓವರ್‌ಗಳಲ್ಲಿ ಕೇವಲ 7 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದರು. ಹಾಗಿದ್ದರೂ ಕುಲ್ದೀಪ್ಗೆ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗುವುದಿಲ್ಲ ಎಂದು ಸಂಜಯ್ ಮಂಜ್ರೇಕರ್ ಪೋಸ್ಟ್ವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮಂಜ್ರೇಕರ್ ಪೋಸ್ಟ್
ಪ್ರಸಿದ್ಧ ನಿರೂಪಕ ಸಂಜಯ್ ಮಂಜ್ರೇಕರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ‘ಒಂದೇ ಓವರ್‌ನಲ್ಲಿ 3 ವಿಕೆಟ್‌ಗಳನ್ನು ಪಡೆದಿರುವ ಕುಲ್ದೀಪ್ ಯಾದವ್ ಮುಂದಿನ ಪಂದ್ಯವನ್ನು ಆಡದಿರಬಹುದು’ ಎಂದು ಬರೆದಿದ್ದಾರೆ. ಈ ರೀತಿಯ ಉತ್ತಮ ಪ್ರದರ್ಶನ ನೀಡಿದರೂ ಕುಲ್ದೀಪ್ಗೆ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗದಿರಬಹುದು ಎಂದು ಮಂಜ್ರೇಕರ್ ಏಕೆ ಹೇಳಿದರು ಎಂದು ನಿಮಗೆಲ್ಲ ಅನುಮಾನ ಮೂಡಬಹುದು. ಆದರೆ ಅದಕ್ಕೆ ಉತ್ತರವೆಂದರೆ, ಮಂಜ್ರೇಕರ್ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಅನ್ನು ಅಣಕಿಸಿ ಈ ರೀತಿಯ ಪೋಸ್ಟ್ ಹಂಚಿಕೊಂಡಿದ್ದಾರೆ.
Kuldeep has 3 in one over. May not play the next game now. 😉
— Sanjay Manjrekar (@sanjaymanjrekar) September 10, 2025
ಉತ್ತಮ ಪ್ರದರ್ಶನ ನೀಡಿದರೂ ತಂಡದಲ್ಲಿಲ್ಲ ಸ್ಥಾನ
ವಾಸ್ತವವಾಗಿ, ಮಂಜ್ರೇಕರ್ ಅವರ ಹೇಳಿಕೆಯ ಹಿಂದಿನ ಕಾರಣವೆಂದರೆ ಟೀಂ ಇಂಡಿಯಾದಲ್ಲಿ ಕುಲ್ದೀಪ್ ಅವರ ವೃತ್ತಿಜೀವನ. ಕುಲ್ದೀಪ್ 2017 ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದರು ಆದರೆ ಅಂದಿನಿಂದ ಅವರನ್ನು ಹಲವು ಬಾರಿ ತಂಡದಿಂದ ಕೈಬಿಡಲಾಗಿದೆ. ಅನೇಕ ಸಂದರ್ಭಗಳಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ಆಡುವ 11 ರಿಂದ ಅಥವಾ ತಂಡದಿಂದಲೇ ಕೈಬಿಡಲಾಯಿತು. ವಿಶೇಷವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ. 2019 ರಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್‌ನಲ್ಲಿ 5 ವಿಕೆಟ್‌ಗಳನ್ನು ಪಡೆದಿದ್ದರೂ, ಅವರನ್ನು ಕೈಬಿಡಲಾಯಿತು. ನಂತರ 2021 ರಲ್ಲಿ, ಅವರಿಗೆ ಕೇವಲ 1 ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿತು. ಆ ನಂತರ ಡಿಸೆಂಬರ್ 2022 ರಲ್ಲಿ, ಅವರಿಗೆ ಮತ್ತೆ ಆಡುವ ಅವಕಾಶ ಸಿಕ್ಕಿತು.
IND vs UAE, Asia Cup 2025: ಕೇವಲ 4.3 ಓವರ್‌ಗಳಲ್ಲಿ ಗೆದ್ದು ಏಷ್ಯಾಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
ಬಾಂಗ್ಲಾದೇಶ ವಿರುದ್ಧದ ಆ ಪಂದ್ಯದಲ್ಲಿ ಕುಲ್ದೀಪ್ ಮತ್ತೆ 5 ವಿಕೆಟ್ ಪಡೆದಿದ್ದರು ಆದರೆ ಇದರ ಹೊರತಾಗಿಯೂ ಅವರನ್ನು ಕೈಬಿಡಲಾಯಿತು. 2024 ರಲ್ಲಿ ನೇರವಾಗಿ ತಂಡಕ್ಕೆ ಮರಳಿದ ಕುಲ್ದೀಪ್ ಕಳೆದ ವರ್ಷ ಉತ್ತಮ ಪ್ರದರ್ಶನ ನೀಡಿದ ನಂತರವೂ, ಆಸ್ಟ್ರೇಲಿಯಾ ಪ್ರವಾಸ ಮತ್ತು ನಂತರ ಇಂಗ್ಲೆಂಡ್ ಪ್ರವಾಸದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡುವ ಅವಕಾಶ ಅವರಿಗೆ ಸಿಗಲಿಲ್ಲ. ಅದೇ ರೀತಿ, ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ, ಅವರಿಗೆ ಗುಂಪು ಹಂತದ ಯಾವುದೇ ಪಂದ್ಯದಲ್ಲಿ ಆಡಲು ಅವಕಾಶ ಸಿಗಲಿಲ್ಲ. ಸೂಪರ್-4 ಸುತ್ತಿನಲ್ಲಿ ಆಡುವ ಅವಕಾಶ ಪಡೆದ ಅವರು ಅದ್ಭುತ ಪ್ರದರ್ಶನ ನೀಡಿದರು. ಈ ಕಾರಣದಿಂದಾಗಿ, ಕುಲ್ದೀಪ್ ಅವರ ಉತ್ತಮ ಪ್ರದರ್ಶನದ ನಂತರ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಅನೇಕ ಬಾರಿ ಅವರನ್ನು ತಂಡದಿಂದ ಕೈಬಿಡುವ ಕೆಲಸ ಮಾಡಿದೆ. ಇದಕ್ಕಾಗಿಯೇ ಮಂಜ್ರೇಕರ್ ಆ ರೀತಿಯ ಪೋಸ್ಟ್ ಹಂಚಿಕೊಂಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:11 pm, Thu, 11 September 25
