AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ vs ಸಂಜು: ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ!

ಮ್ಯಾಚೆಂಸ್ಟರ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ. ಇತ್ತ ವೈಭವ್ ಕೆರಿಯರ್ ಶುರುವಾಗುತ್ತಿದ್ದಂತೆ, ಅತ್ತ ಸಂಜು ಸ್ಯಾಮ್ಸನ್ ಸೈಡ್ ಲೈನ್ ಆಗಿದ್ದಾರೆ. ಇದುವೇ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ವೈಭವ್ vs ಸಂಜು: ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ!
Sanju - VaibhavImage Credit source: BCCI
ಝಾಹಿರ್ ಯೂಸುಫ್
|

Updated on: Jul 06, 2026 | 10:09 AM

Share

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಯುವ ದಾಂಡಿಗನಿಗೆ ಆಡುವ ಬಳಗದಲ್ಲಿ ಅವಕಾಶ ನೀಡಲು ಟೀಮ್ ಮ್ಯಾನೇಜ್ಮೆಂಟ್ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಈ ನಿರ್ಧಾರಕ್ಕೆ  ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಮಂಜ್ರೇಕರ್ ಕಿಡಿ:

ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಗೆದ್ದಿದ್ದ ಮ್ಯಾಚ್ ವಿನ್ನರ್ ಸ್ಯಾಮ್ಸನ್‌ನನ್ನು ಕೇವಲ 3 ಪಂದ್ಯಗಳ ವೈಫಲ್ಯದ ಆಧಾರದ ಮೇಲೆ ದಿಢೀರ್ ಆಗಿ ಕೈಬಿಟ್ಟಿರುವುದು ಅಚ್ಚರಿಯ ನಿರ್ಧಾರ.

ಒಂದು ವೇಳೆ ಅವರಿಗೆ ಗಾಯವಾಗಿದ್ದರೆ ಮಾತ್ರ ಈ ನಿರ್ಧಾರ ಒಪ್ಪಬಹುದು, ಇಲ್ಲದಿದ್ದರೆ ಇದು ಕ್ರಿಕೆಟ್ ಇತಿಹಾಸದ ಅತ್ಯಂತ ವಿಲಕ್ಷಣ ಆಯ್ಕೆ ಎಂದು ಸಂಜಯ್ ಮಂಜ್ರೇಕರ್ ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಬರೆದುಕೊಂಡಿದ್ದಾರೆ.

15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಪಾದಾರ್ಪಣೆ ಮಾಡಲು ಮ್ಯಾನೇಜ್‌ಮೆಂಟ್ ಬಯಸಿದ್ದರೆ, ಅದಕ್ಕೆ ಸ್ಯಾಮ್ಸನ್ ಅವರನ್ನು ಬಲಿಪಶು ಮಾಡುವ ಅಗತ್ಯವಿರಲಿಲ್ಲ ಎಂಬುದು ಮಂಜ್ರೇಕರ್ ವಾದ.

ಸಂಜು ಸ್ಯಾಮ್ಸನ್ ಅವರನ್ನು ಆಡುವ ಹನ್ನೊಂದರ ಬಳಗದಲ್ಲೇ ಉಳಿಸಿಕೊಂಡು, ನಂಬರ್ 3 ಬ್ಯಾಟಿಂಗ್ ಸ್ಥಾನಕ್ಕೆ ಕಳುಹಿಸಬಹುದಿತ್ತು. ಆದರೆ ಅವರನ್ನು ಏಕಾಏಕಿ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಟ್ಟಿದ್ದಾರೆ.

ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಏನು ತಮಾಷೆ ಮಾಡುತ್ತಿದ್ದಾರಾ? ಎಂಬುದೇ ಅರ್ಥವಾಗುತ್ತಿಲ್ಲ. ಯಾವುದೇ ಕಾರಣವಿಲ್ಲದೆ ಸ್ಯಾಮ್ಸನ್ ಅವರನ್ನು ಹೊರಗಿಟ್ಟಿರುವುದು ಅತ್ಯಂತ ವಿಲಕ್ಷಣ ಮತ್ತು ನಂಬಲಾಗದ ನಿರ್ಧಾರ ಎಂದು ಮಂಜ್ರೇಕರ್ ಅಸಮಾಧಾನ ಹೊರಹಾಕಿದ್ದಾರೆ.

ಸಂಜು ಸ್ಯಾಮ್ಸನ್ ಪ್ರದರ್ಶನ:

ಸಂಜು ಸ್ಯಾಮ್ಸನ್ ಕಳೆದ ಮೂರು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಅದರಲ್ಲೂ ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 1 ರನ್​ ಮಾತ್ರ.

  • ಇಂಗ್ಲೆಂಡ್ ವಿರುದ್ಧ (ಮೊದಲ ಟಿ20): ಕೇವಲ 1 ರನ್ ಗಳಿಸಿ ಔಟ್.
  • ಐರ್ಲೆಂಡ್ ವಿರುದ್ಧ (ಮೊದಲ ಟಿ20): ಕೇವಲ 5 ರನ್ ಗಳಿಸಿ ನಿರಾಸೆ ಮೂಡಿಸಿದರು.
  • ಐರ್ಲೆಂಡ್ ವಿರುದ್ಧ (ಎರಡನೇ ಟಿ20): ಮೊದಲ ಎಸೆತದಲ್ಲೇ (0) ಡಕ್ ಔಟ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬೆತ್ ಮೂನಿ

ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸಂಜು ಸ್ಯಾಮ್ಸನ್ ಅವರನ್ನು ಕೂರಿಸಿ ವೈಭವ್ ಸೂರ್ಯವಂಶಿಗೆ ಚಾನ್ಸ್ ನೀಡಿದ್ದರು. ಆದರೆ ಗಂಭೀರ್ ಅವರ ಈ ನಿರ್ಧಾರಕ್ಕೆ ಸಂಜಯ್ ಮಂಜ್ರೇಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!