
ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ನಾಳೆಯಿಂದ (ಜುಲೈ 23) ಶುರುವಾಗಲಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಆಡುವ ಬಳಗವನ್ನು ಹೆಸರಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್ನಿಂದ ಇಬ್ಬರು ಕೈ ಬಿಟ್ಟಿದ್ದಾರೆ.
ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಅವರನ್ನೇ ಮುಂದುವರೆಸಿದ್ದು, ಮೂರನೇ ಕ್ರಮಾಂಕಕ್ಕೆ ಎಡಗೈ ಯುವ ದಾಂಡಿಗ ಸಾಯಿ ಸುದರ್ಶನ್ ಅವರನ್ನು ಹೆಸರಿಸಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕರುಣ್ ನಾಯರ್ ಅವರನ್ನು ಕೈ ಬಿಟ್ಟು ಸುದರ್ಶನ್ಗೆ ಅವಕಾಶ ನೀಡಬೇಕೆಂದು ಸಂಜಯ್ ಮಂಜ್ರೇಕರ್ ಆಗ್ರಹಿಸಿದ್ದಾರೆ.
ಇನ್ನು 4ನೇ ಮತ್ತು 5ನೇ ಕ್ರಮಾಂಕಗಳಲ್ಲಿ ಶುಭ್ಮನ್ ಗಿಲ್ ಹಾಗೂ ರಿಷಭ್ ಪಂತ್ ಅವರನ್ನು ಹೆಸರಿಸಲಾಗಿದ್ದು, 6ನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ಗೆ ಸ್ಥಾನ ನೀಡಿದ್ದಾರೆ. 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಇದ್ದರೆ, 8ನೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಿದ್ದಾರೆ.
ಹಾಗೆಯೇ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ಒಂದು ವೇಳೆ ಪ್ರಸಿದ್ಧ್ ಕೃಷ್ಣ ಅವರನ್ನು ಕಣಕ್ಕಿಳಿಸದಿದ್ದರೆ ಅನ್ಶುಲ್ ಕಂಬೋಜ್ಗೆ ಅವಕಾಶ ನೀಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಹ ಸಂಜಯ್ ಮಂಜ್ರೇಕರ್ ಮುಂದಿಟ್ಟಿದ್ದಾರೆ. ಅದರಂತೆ ಸಂಜಯ್ ಮಂಜ್ರೇಕರ್ ಅವರ ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ ಈ ಕೆಳಗಿನಂತಿದೆ…
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್, ರಿಷಭ್ ಪಂತ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಇದನ್ನೂ ಓದಿ: ಬರೋಬ್ಬರಿ 13 ಸಿಕ್ಸ್: ಟಿ10 ಪಂದ್ಯದಲ್ಲಿ ತೂಫಾನ್ ಸೆಂಚುರಿ ಸಿಡಿಸಿದ ಜೋಶ್
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.