‘10 ವರ್ಷ ವ್ಯರ್ಥ ಮಾಡಿದ್ರು’; ಧೋನಿ, ಕೊಹ್ಲಿ, ರೋಹಿತ್ ಮೇಲೆ ಗಂಭೀರ ಆರೋಪ ಮಾಡಿದ ಸಂಜು ತಂದೆ

Sanju Samson's father: ಸಂಜು ಸ್ಯಾಮ್ಸನ್ ಅವರ ಅದ್ಭುತ ಟಿ20 ಪ್ರದರ್ಶನದ ನಡುವೆಯೂ, ಅವರ ತಂದೆ ವಿಶ್ವನಾಥ್ ಅವರು ಧೋನಿ, ಕೊಹ್ಲಿ, ರೋಹಿತ್ ಮತ್ತು ದ್ರಾವಿಡ್ ಅವರ ಮೇಲೆ ತೀವ್ರ ಆರೋಪಗಳನ್ನು ಮಾಡಿದ್ದಾರೆ. ಅವರು ಸಂಜು ಅವರ 10 ವರ್ಷಗಳ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಭಾರೀ ಸಂಚಲನವನ್ನು ಉಂಟುಮಾಡಿದೆ. ಈ ಹೇಳಿಕೆಗಳು ಸಂಜು ಅವರ ವೃತ್ತಿಜೀವನದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ.

‘10 ವರ್ಷ ವ್ಯರ್ಥ ಮಾಡಿದ್ರು’; ಧೋನಿ, ಕೊಹ್ಲಿ, ರೋಹಿತ್ ಮೇಲೆ ಗಂಭೀರ ಆರೋಪ ಮಾಡಿದ ಸಂಜು ತಂದೆ
ಸಂಜು ಸ್ಯಾಮ್ಸನ್
Follow us
ಪೃಥ್ವಿಶಂಕರ
|

Updated on:Nov 13, 2024 | 6:42 PM

ಸತತ ವೈಫಲ್ಯಗಳಿಂದ ಭಾರತ ತಂಡದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್, ಪ್ರಸ್ತುತ ಭಾರತ ಟಿ20 ತಂಡದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಪಂದ್ಯವನ್ನಾಡುತ್ತಿರುವ ಭಾರತ ಟಿ20 ತಂಡದಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಸಂಜು, ಮೊದಲ ಟಿ20ಯಲ್ಲಿ ಅದ್ಭುತ ಶತಕ ಬಾರಿಸಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾಗಿದ್ದರು. ಇದಕ್ಕೂ ಮುನ್ನ ಬಾಂಗ್ಲಾದೇಶ ವಿರುದ್ಧವೂ ಸಂಜು ಶತಕ ಬಾರಿಸಿದ್ದರು. ಈ ಮೂಲಕ ಸತತ ಎರಡು ಟಿ20 ಪಂದ್ಯಗಳಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಆದರೆ ಇದೀಗ ಸಂಜು ಅವರ ತಂದೆ ನೀಡುರುವ ವಿವಾದಾತ್ಮಕ ಹೇಳಿಕೆ ಅವರ ವೃತ್ತಿಬದುಕಿಗೆ ದೊಡ್ಡ ಪೆಟ್ಟು ನೀಡುವ ಸೂಚನೆ ನೀಡಿದೆ. ಧೋನಿ, ವಿರಾಟ್ ಮತ್ತು ರೋಹಿತ್ ಶರ್ಮಾ ತಮ್ಮ ಮಗನ 10 ವರ್ಷವನ್ನು ಹಾಳು ಮಾಡಿದ್ದಾರೆ ಎಂದು ಸಂಜು ಸ್ಯಾಮ್ಸನ್ ತಂದೆ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ದೊಡ್ಡ ಆರೋಪ ಮಾಡಿದ್ದಾರೆ.

ಮಾಜಿ ನಾಯಕರ ಮೇಲೆ ಗಂಭೀರ ಆರೋಪ

ವಾಸ್ತವವಾಗಿ ಸಂಜು ಸ್ಯಾಮ್ಸನ್ ಅವರ ತಂದೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರಲ್ಲಿ ಅವರು ಟೀಂ ಇಂಡಿಯಾದ ಮಾಜಿ ನಾಯಕರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ವೈರಲ್ ವಿಡಿಯೋದಲ್ಲಿರುವಂತೆ ಸಂಜು ಅವರ ತಂದೆ, ‘ನನ್ನ ಮಗನ 10 ವರ್ಷಗಳ ವೃತ್ತಿಜೀವನವನ್ನು 3-4 ಮಂದಿ ಹಾಳು ಮಾಡಿದ್ದಾರೆ. ಧೋನಿ, ವಿರಾಟ್, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ನನ್ನ ಮಗನ 10 ವರ್ಷಗಳನ್ನು ಹಾಳು ಮಾಡಿದರು. ಅವರು ನನ್ನ ಮಗನನ್ನು ನೋಯಿಸಿದ್ದಾರೆ. ಆದರೀಗ ನನ್ನ ಮಗ ಈ ಬಿಕ್ಕಟ್ಟಿನಿಂದ ಚೇತರಿಸಿಕೊಂಡಿದ್ದಾನೆ ಎಂದಿದ್ದಾರೆ.

ಶ್ರೀಕಾಂತ್ ಮೇಲೂ ವಾಗ್ದಾಳಿ

ಇಷ್ಟಕ್ಕೆ ನಿಲ್ಲದ ಸಂಜು ಸ್ಯಾಮ್ಸನ್ ಅವರ ತಂದೆ, ಮಾಜಿ ಕ್ರಿಕೆಟಿಗ ಕೆ ಶ್ರೀಕಾಂತ್ ಅವರ ಮೇಲೂ ವಾಗ್ದಾಳಿ ನಡೆಸಿದ್ದಾರೆ. ಅವರು, ‘ಕೆ. ಶ್ರೀಕಾಂತ್ ಅವರ ಕಾಮೆಂಟ್ ನನಗೆ ತುಂಬಾ ನೋವುಂಟು ಮಾಡಿದೆ. ಬಾಂಗ್ಲಾದೇಶದಂತಹ ತಂಡದ ವಿರುದ್ಧ ಸಂಜು ಸ್ಯಾಮ್ಸನ್ ಶತಕ ಸಿಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ ಯಾವುದೇ ತಂಡದ ವಿರುದ್ಧ ಬಾರಿಸಿದರೂ, ಶತಕ ಶತಕವೇ. ಸಂಜು ಒಬ್ಬ ಕ್ಲಾಸಿಕ್ ಆಟಗಾರ. ಅವರ ಬ್ಯಾಟಿಂಗ್ ಸಚಿನ್ ಮತ್ತು ರಾಹುಲ್ ದ್ರಾವಿಡ್ ಅವರಂತೆ ಶ್ರೇಷ್ಠವಾಗಿದೆ ಎಂದಿದ್ದಾರೆ.

ವಾಸ್ತವವಾಗಿ ಸಂಜು ಸ್ಯಾಮ್ಸನ್ ತಮ್ಮ ತಂದೆಯವರ ಈ ರೀತಿಯ ಹೇಳಿಕೆಗಳಿಂದ ಸಂಕಷ್ಟಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಅವರು 2016ರಲ್ಲಿ ಕೇರಳ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳೊಂದಿಗೆ ಜಗಳವಾಡಿದ್ದರು. ಇದರಿಂದ ಸಂಜು ಅವರಿಗೆ ತಮ್ಮ ತಂದೆಯನ್ನು ಮೈದಾನಕ್ಕೆ ಕರೆತರದಂತೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಮತ್ತೊಮ್ಮೆ ಸಂಜು ಸ್ಯಾಮ್ಸನ್ ಅವರ ತಂದೆ ತಮ್ಮ ಹೇಳಿಕೆಗಳಿಂದ ಮಗನ ವೃತ್ತಿಜೀವನಕ್ಕೆ ಕಪ್ಪು ಚುಕ್ಕೆ ತರುತ್ತಿದ್ದಾರೆ.

Published On - 6:39 pm, Wed, 13 November 24

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ