AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCL 2025: 121, 89, 62.. ಆಯ್ಕೆ ಮಂಡಳಿಗೆ ಸವಾಲಾದ ಸಂಜು ಸ್ಯಾಮ್ಸನ್ ಪ್ರದರ್ಶನ

Sanju Samson: ಏಷ್ಯಾಕಪ್ 2025ಕ್ಕೆ ಆಯ್ಕೆಯಾದ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಥಾನ ಅನುಮಾನದಲ್ಲಿದೆ. ಆದರೆ, ಕೇರಳ ಕ್ರಿಕೆಟ್ ಲೀಗ್‌ನಲ್ಲಿ ಅವರ ಅದ್ಭುತ ಪ್ರದರ್ಶನ, ವಿಶೇಷವಾಗಿ ಐದು ದಿನಗಳಲ್ಲಿ ಮೂರು ಹ್ಯಾಟ್ರಿಕ್ ಅರ್ಧಶತಕಗಳು, ಅವರ ಆಯ್ಕೆ ಸಾಧ್ಯತೆ ಹೆಚ್ಚಿಸಿದೆ. ಶುಭ್‌ಮನ್ ಗಿಲ್ ಅವರ ಆಗಮನದಿಂದ ಆರಂಭಿಕ ಸ್ಥಾನದಲ್ಲಿ ಸ್ಪರ್ಧೆ ಇದ್ದರೂ, ಸಂಜು ತಮ್ಮ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಇದು ಆಯ್ಕೆ ಸಮಿತಿಯ ಮೇಲೆ ಒತ್ತಡ ಹೇರಬಹುದು.

KCL 2025: 121, 89, 62.. ಆಯ್ಕೆ ಮಂಡಳಿಗೆ ಸವಾಲಾದ ಸಂಜು ಸ್ಯಾಮ್ಸನ್ ಪ್ರದರ್ಶನ
Sanju Samson
ಪೃಥ್ವಿಶಂಕರ
|

Updated on: Aug 28, 2025 | 5:57 PM

Share

2025 ರ ಏಷ್ಯಾಕಪ್​ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಈ 20 ಸದಸ್ಯರ ತಂಡದಲ್ಲಿ ಯಾರು ಆಡು ಹನ್ನೊಂದರ ಬಳಗದಲ್ಲಿ ಅವಕಾಶ ಪಡೆಯುತ್ತಾರೆ ಎಂಬ ಸುಳಿವು ಈಗಾಗಲೇ ಸಿಕ್ಕಿದೆ. ಆದಾಗ್ಯೂ ಇಷ್ಟು ದಿನ ಟಿ20 ತಂಡದಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಸಂಜು ಸ್ಯಾಮ್ಸನ್​ಗೆ (Sanju Samson) ಅವಕಾಶ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿತ್ತು. ಇದಕ್ಕೆ ಕಾರಣ ಶುಭ್​ಮನ್ ಗಿಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವುದರ ಜೊತೆಗೆ ಉಪನಾಯಕತ್ವದ ಜವಾಬ್ದಾರಿ ನೀಡಿರುವುದು. ಗಿಲ್ ಆಗಮನದಿಂದ ಅವರು ಆರಂಭಿಕನಾಗಿ ಆಡುತ್ತಾರೆ. ಹೀಗಾಗಿ ಸಂಜು ತಮ್ಮ ಕ್ರಮಾಂಕವನ್ನು ಬದಲಿಸಬೇಕಾಗುತ್ತದೆ. ಆದರೆ ಸಂಜು ಆರಂಭಿಕನಾಗಿ ಯಶಸ್ಸು ಪಡೆದಷ್ಟು ಮಧ್ಯಮ ಕ್ರಮಾಂಕದಲ್ಲಿ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಸಂಜುರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡಬಹುದು ಎನ್ನಲಾಗುತ್ತಿತ್ತು. ಆದರೆ ಇದೀಗ ಸಂಜು ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಆಯ್ಕೆ ಮಂಡಳಿಯ ನಿದ್ದೆಗೆಡಿಸಿದ್ದಾರೆ.

ಆರಂಭಿಕನಾಗಿ ಬ್ಯಾಟ್ ಬೀಸಿದ ಸಂಜು

ಪ್ರಸ್ತುತ ನಡೆಯುತ್ತಿರುವ ಕೇರಳ ಕ್ರಿಕೆಟ್ ಲೀಗ್​ನಲ್ಲಿ ಕೊಚ್ಚಿ ಬ್ಲೂ ಟೈಗರ್ಸ್ ತಂಡದ ನಾಯಕನಾಗಿ ಆಡುತ್ತಿರುವ ಸಂಜು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಕಳೆದ ಐದು ದಿನಗಳಲ್ಲಿ ಸತತ ಮೂರನೇ ಪಂದ್ಯದಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದಾರೆ. ಆಗಸ್ಟ್ 28 ರಂದು ನಡೆದ ಲೀಗ್​ನ 15 ನೇ ಪಂದ್ಯದಲ್ಲಿ ಕೊಚ್ಚಿ ಬ್ಲೂ ಟೈಗರ್ಸ್ ಮತ್ತು ತ್ರಿವೇಂದ್ರಮ್ ರಾಯಲ್ಸ್ ಮುಖಾಮುಖಿಯಾಗಿದ್ದವು . ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೊಚ್ಚಿ ತಂಡದ ಪರ ಮತ್ತೊಮ್ಮೆ ಆರಂಭಿಕ ಆಟಗಾರನಾಗಿ ಬಂದ ಸಂಜು ಸ್ಯಾಮ್ಸನ್ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸಿದರು.

ಸತತ ಮೂರು ಪಂದ್ಯಗಳಲ್ಲಿ ಅರ್ಧಶತಕ

ಸ್ಯಾಮ್ಸನ್ 12 ನೇ ಓವರ್‌ನಲ್ಲಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಓವರ್‌ನಲ್ಲಿ ಅವರು 2 ಸಿಕ್ಸರ್‌ಗಳನ್ನು ಬಾರಿಸಿ, ನಂತರ ಒಂದು ರನ್ ಗಳಿಸುವ ಮೂಲಕ ಈ ಅರ್ಧಶತಕವನ್ನು ಪೂರ್ಣಗೊಳಿಸಿದರು. ಅಂತಿಮವಾಗಿ ಸ್ಯಾಮ್ಸನ್ 15 ನೇ ಓವರ್‌ನಲ್ಲಿ ಔಟಾದರು ಆದರೆ ಆ ಹೊತ್ತಿಗೆ ಅವರು ಕೇವಲ 37 ಎಸೆತಗಳಲ್ಲಿ 62 ರನ್‌ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 5 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಈ ರೀತಿಯಾಗಿ, ಸ್ಯಾಮ್ಸನ್ ಕೇವಲ 5 ದಿನಗಳಲ್ಲಿ ಸತತ ಮೂರನೇ ಪಂದ್ಯದಲ್ಲಿ 50 ಕ್ಕೂ ಹೆಚ್ಚು ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ. ಇದಕ್ಕೂ ಮೊದಲು, ಅವರು ಆಗಸ್ಟ್ 24 ರ ಭಾನುವಾರ 121 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಆ ನಂತರ ಆಗಸ್ಟ್ 26 ರ ಮಂಗಳವಾರ 89 ರನ್‌ ಬಾರಿಸಿದ್ದರು.

ಕೊನೆಯ ಎಸೆತದಲ್ಲಿ ಸಿಕ್ಸರ್, ಸಂಜು ತಂಡಕ್ಕೆ ಗೆಲುವು ತಂದ ಆಶಿಕ್; ವಿಡಿಯೋ ನೋಡಿ

ಆಯ್ಕೆ ಮಂಡಳಿಗೆ ಹೊಸ ಸವಾಲು

ಸ್ಯಾಮ್ಸನ್ ಅವರ ಈ ಇನ್ನಿಂಗ್ಸ್ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ಮತ್ತು ವಿಶೇಷವಾಗಿ ಕೋಚ್ ಗಂಭೀರ್ ಅವರಿಗೆ ಹೊಸ ತಲೆನೋವು ತಂದೊಡ್ಡಿದೆ. ಏಕೆಂದರೆ ಮೇಲೆ ಹೇಳಿದಂತೆ ಶುಭ್​ಮನ್ ಗಿಲ್ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದ ನಂತರ ಮತ್ತು ವಿಶೇಷವಾಗಿ ಉಪನಾಯಕನಾದ ನಂತರ, ಅವರನ್ನು ಆರಂಭಿಕ ಆಟಗಾರನನ್ನಾಗಿ ಆಡಿಸಬಹುದು ಎಂದು ಊಹಿಸಲಾಗುತ್ತಿದೆ. ಹೀಗಾಗಿ ಸ್ಯಾಮ್ಸನ್ ಕೆಸಿಎಲ್​ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಲು ಪ್ರಾರಂಭಿಸಿದರು. ಈ ಮೂಲಕ ಅವರು ನಾನು ಯಾವ ಕ್ರಮಾಂಕದಲ್ಲೂ ಆಡಲು ಸಿದ್ಧ ಎಂಬುದುನ್ನು ಆಯ್ಕೆ ಮಂಡಳಿಯ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಆದರೆ ಈಗ ಸ್ಯಾಮ್ಸನ್ ತಾನು ಆರಂಭಿಕನಾಗಿಯೇ ಹೆಚ್ಚು ಪರಿಣಾಮಕಾರಿಯಾಗಬಲ್ಲೆ ಎಂಬುದನ್ನು ಸಾಭೀತುಪಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ