ಟೀಮ್ ಇಂಡಿಯಾ ಬಳಗಕ್ಕೆ ಸಂಜು ಸ್ಯಾಮ್ಸನ್ ಆಯ್ಕೆ..!

India Squad For Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಪಾಕ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ತಂಡ ನೇಪಾಳ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಟೀಮ್ ಇಂಡಿಯಾ ಬಳಗಕ್ಕೆ ಸಂಜು ಸ್ಯಾಮ್ಸನ್ ಆಯ್ಕೆ..!
Sanju Samson
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2023 | 2:47 PM

ಬಹುನಿರೀಕ್ಷಿತ ಏಷ್ಯಾಕಪ್​ಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಇನ್ನು ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಇದೇ ಮೊದಲ ಬಾರಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇತ್ತ ತಿಲಕ್ ವರ್ಮಾ ತಂಡದಲ್ಲಿ ಸ್ಥಾನ ಪಡೆದರೆ ಅತ್ತ ಸಂಜು ಸ್ಯಾಮ್ಸನ್ 17 ಸದಸ್ಯರ ತಂಡದಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಸ್ಯಾಮ್ಸನ್ ಅವರನ್ನು ಟೀಮ್ ಇಂಡಿಯಾ ಬಳಗದಲ್ಲಿರಿಸಲಾಗಿದೆ ಎಂಬುದು ವಿಶೇಷ.

ಮೀಸಲು ಆಟಗಾರನಾಗಿ ಸ್ಯಾಮ್ಸನ್:

ಏಷ್ಯಾಕಪ್​ಗಾಗಿ ಶ್ರೀಲಂಕಾಗೆ ತೆರಳಿರುವ ಟೀಮ್ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮೀಸಲು ಆಟಗಾರನಾಗಿ ಎಂಬುದಷ್ಟೇ ಇಲ್ಲಿ ವ್ಯತ್ಯಾಸ. ಅಂದರೆ ತಂಡದಿಂದ ಯಾವುದಾದರು ಬ್ಯಾಟರ್ ಹೊರಗುಳಿದರೆ ಸ್ಯಾಮ್ಸನ್​​ಗೆ ಚಾನ್ಸ್ ಸಿಗಬಹುದು.

3ನೇ ವಿಕೆಟ್ ಕೀಪರ್:

ಏಷ್ಯಾಕಪ್​ಗೆ ಆಯ್ಕೆ ಮಾಡಲಾಗಿರುವ ತಂಡದಲ್ಲಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ವಿಕೆಟ್​ ಕೀಪರ್​ಗಳಾಗಿ ಸ್ಥಾನ ಪಡೆದಿದ್ದಾರೆ. ಇತ್ತ ಮೂರನೇ ವಿಕೆಟ್ ಕೀಪರ್ ಯಾರು ಎಂಬ ಪ್ರಶ್ನೆಗೆ ಉತ್ತರ ಸಂಜು ಸ್ಯಾಮ್ಸನ್.

ಕೆಎಲ್ ರಾಹುಲ್ ಅಥವಾ ಇಶಾನ್ ಕಿಶನ್​…ಇವರಿಬ್ಬರಲ್ಲಿ ಯಾರಾದರೂ ಗಾಯಗೊಂಡು ತಂಡದಿಂದ ಹೊರಗುಳಿದರೆ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ 17 ಸದಸ್ಯರ ತಂಡಕ್ಕೆ ಎಂಟ್ರಿ ಕೊಡಲಿದ್ದಾರೆ. ಹೀಗಾಗಿಯೇ ಏಕೈಕ ಮೀಸಲು ಆಟಗಾರನಾಗಿ ವಿಕೆಟ್ ಕೀಪರ್ ಬ್ಯಾಟ್ಸ್​​ಮನ್ ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ.

ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ:

ಸಂಜು ಸ್ಯಾಮ್ಸನ್ ಏಕದಿನ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ಇದುವರೆಗೆ 13 ಏಕದಿನ ಪಂದ್ಯಗಳನ್ನಾಡಿರುವ ಕೇರಳದ ಕ್ರಿಕೆಟಿಗ 55.71 ಸರಾಸರಿಯಲ್ಲಿ ಒಟ್ಟು 375 ರನ್​ ಕಲೆಹಾಕಿದ್ದಾರೆ. ಈ ವೇಳೆ 3 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.

ಆದರೆ ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಸ್ಯಾಮ್ಸನ್ ವಿಫಲರಾಗಿದ್ದರು. ಇದಾಗ್ಯೂ ಇದೀಗ ಏಷ್ಯಾಕಪ್​ಗೆ ಮೀಸಲು ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಏಷ್ಯಾಕಪ್​ಗಾಗಿ ಆಯ್ಕೆಯಾದ ಭಾರತ ತಂಡ ಈ ಕೆಳಗಿನಂತಿದೆ.

ಟೀಮ್ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ)

ಏಷ್ಯಾಕಪ್ ಯಾವಾಗ ಶುರು?

ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಪಾಕ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ತಂಡ ನೇಪಾಳ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಇನ್ನು ಫೈನಲ್ ಪಂದ್ಯವು ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ನಡೆಯಲಿದೆ.

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ