AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ತಂಡದಿಂದಲೇ ಹೊರಗಿದ್ದವ ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಗೆದ್ದ; ಸಂಜು ಸೂಪರ್ ಸ್ಯಾಮ್ಸನ್

Sanju Samson T20 World Cup Heroics: ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್‌ನಲ್ಲಿ ಎದುರಾದ ಎಲ್ಲಾ ಅಡೆತಡೆಗಳನ್ನು ಮೆಟ್ಟಿ ನಿಂತು ಅದ್ಭುತ ಸಾಧನೆ ಮಾಡಿದ್ದಾರೆ. ಆರಂಭಿಕ ಸ್ಥಾನ ಕಳೆದುಕೊಂಡರೂ, ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಸತತ ಮೂರು ಅರ್ಧಶತಕ ಸಿಡಿಸಿದರು. ವಿರಾಟ್ ಕೊಹ್ಲಿ ದಾಖಲೆ ಮುರಿದು 321 ರನ್‌ಗಳೊಂದಿಗೆ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿದರು. ಸಂಜುರ ಧೃಡ ಸಂಕಲ್ಪ ಮತ್ತು ದಾಖಲೆ ನಿರ್ಮಾಣದ ಆಟಕ್ಕೆ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಪ್ರಶಸ್ತಿ ಲಭಿಸಿತು.

IND vs NZ: ತಂಡದಿಂದಲೇ ಹೊರಗಿದ್ದವ ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಗೆದ್ದ; ಸಂಜು ಸೂಪರ್ ಸ್ಯಾಮ್ಸನ್
Sanju Samson
ಪೃಥ್ವಿಶಂಕರ
|

Updated on:Mar 08, 2026 | 11:40 PM

Share

ಸಂಜು ಸ್ಯಾಮ್ಸನ್‌ (Sanju Samson)… ಸಾಮರ್ಥ್ಯ, ಧೃಡ ಸಂಕಲ್ಪ ಬಿಟ್ಟು ಕೊಡದ ಮನೋಭಾವ ಇದ್ದರೆ ಏನು ಬೇಕಾದರು ಸಾಧಿಸಬಹುದು ಎಂಬುದಕ್ಕೆ ತಕ್ಕ ಉದಾಹರಣೆ. ಟಿ20 ವಿಶ್ವಕಪ್ (T20 World Cup) ಆರಂಭಕ್ಕೆ ಕೆಲವೇ ದಿನಗಳ ಮೊದಲು ತಂಡದ ಆರಂಭಿಕ ಬ್ಯಾಟ್ಸ್‌ಮನ್ ಆಗಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದ ಸ್ಯಾಮ್ಸನ್‌, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ತೋರಿದ ಕೆಟ್ಟ ಪ್ರದರ್ಶನದ ಪರಿಣಾಮವಾಗಿ ಟಿ20 ವಿಶ್ವಕಪ್ ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಬೇಕಾಯಿತು. ಈ ಎಲ್ಲಾ ಅವಮಾನಗಳ ನಡುವೆಯೂ ಸಿಕ್ಕ ಅವಕಾಶವನ್ನು ದೋಚಿಕೊಂಡ ಸಂಜು ಸ್ಯಾಮ್ಸನ್‌ ಸತತ ಮೂರು ಪಂದ್ಯಗಳಲ್ಲಿ ಅರ್ಧಶತಕಳ ಗೆಲುವಿನ ಇನ್ನಿಂಗ್ಸ್ ಆಡಿದರು. ಇದಕ್ಕೆ ಉಡುಗೊರೆಯಾಗಿ ಸಂಜು ಸ್ಯಾಮ್ಸನ್​ಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯೂ ಲಭಿಸಿತು.

ಲೀಗ್ ಹಂತದಲ್ಲಿ 1 ಪಂದ್ಯ

ಟಿ20 ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೆ ತುತ್ತಾದ ಕಾರಣ ಸಂಜುಗೆ ಆಡುವ ಅವಕಾಶ ಸಿಕ್ಕಿತು. ನಮೀಬಿಯಾ ವಿರುದ್ಧದ ಲೀಗ್ ಪಂದ್ಯದಲ್ಲಿ 22 ರನ್ ಬಾರಿಸಿದ ಸಂಜುಗೆ ನಂತರ ಅವಕಾಶ ಸಿಗಲಿಲ್ಲ. ಆದರೆ ಅಭಿಷೇಕ್ ಶರ್ಮಾರ ಕಳಪೆ ಪ್ರದರ್ಶನ ಹಾಗೂ ರಿಂಕು ಸಿಂಗ್ ಅವರ ತಂದೆಯ ನಿಧನದಿಂದಾಗಿ ತಂಡದಲ್ಲಿ ಆಡುವ ಅವಕಾಶ ಪಡೆದುಕೊಂಡ ಸಂಜು ಆ ನಂತರ ನಿರ್ಮಿಸಿದ್ದು ಇತಿಹಾಸ.

ಹ್ಯಾಟ್ರಿಕ್ ಅರ್ಧಶತಕ

ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ 24 ರನ್ ಬಾರಿಸಿದ ಸಂಜು ಮುಂದಿನ ಮೂರು ನಿರ್ಣಾಯಕ ಪಂದ್ಯಗಳಲ್ಲಿ ಭಾರತದ ಗೆಲುವಿನ ಹೀರೋ ಎನಿಸಿಕೊಂಡರು. ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಸೂಪರ್ 8 ಪಂದ್ಯದಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ಸಂಜು ಆರಂಭಿಕನಾಗಿ ಬಂದು ಕೊನೆಯವರೆಗೂ ಅಜೇಯರಾಗಿ ಉಳಿದು 97 ರನ್ ಬಾರಿಸಿ ತಂಡವನ್ನು ಸೆಮಿಫೈನಲ್‌ಗೇರಿಸಿದ್ದರು. ನಂತರ ಸೆಮಿಫೈನಲ್​ನಲ್ಲೂ ಅಬ್ಬರಿಸಿದ ಸಂಜು ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 89 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದೀಗ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲೂ ಸಂಜು ಬ್ಯಾಟ್​ನಿಂದ 89 ರನ್​ಗಳ ಇನ್ನಿಂಗ್ಸ್ ಮೂಡಿಬಂತು.

IND vs NZ: ಹ್ಯಾಟ್ರಿಕ್ ಅರ್ಧಶತಕ; ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್

ಸ್ಯಾಮ್ಸನ್​ಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿ

ಈ ವಿಶ್ವಕಪ್‌ನಲ್ಲಿ ಕೇವಲ ಐದು ಪಂದ್ಯಗಳಲ್ಲಿ ಆಡಲು ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್‌ 80.2 ಸರಾಸರಿಯಲ್ಲಿ 321 ರನ್ ಬಾರಿಸುವ ಮೂಲಕ ಒಂದು ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದರು. ಹಾಗೆಯೇ ಟಿ20 ವಿಶ್ವಕಪ್‌ನಲ್ಲಿ ಸ್ಯಾಮ್ಸನ್ 24 ಸಿಕ್ಸರ್‌ಗಳನ್ನು ಬಾರಿಸಿದರು. ಇದಲ್ಲದೆ ನಾಲ್ಕು ಪಂದ್ಯಗಳಲ್ಲಿ ಮೊದಲ ಓವರ್‌ನಲ್ಲಿ ಸಿಕ್ಸರ್‌ ಬಾರಿಸುವ ಮೂಲಕ ವಿಶ್ವ ದಾಖಲೆಯನ್ನು ಸೃಷ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 pm, Sun, 8 March 26

Follow Us
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಬೆಂಗಳೂರಿನ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ
ತಿರುಪತಿಗೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಸತೀಶ್​​ ಜಾರಕಿಹೊಳಿ ಅಚ್ಚರಿಯ ಹೇಳಿಕೆ
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಸತೀಶ್​​ ಜಾರಕಿಹೊಳಿ ಅಚ್ಚರಿಯ ಹೇಳಿಕೆ
ಸೊಂಡಿಲ ಬಳಸಿ ಮರದಿಂದ ಹಲಸಿನ ಕಾಯಿ ಕಿತ್ತ ಆನೆ
ಸೊಂಡಿಲ ಬಳಸಿ ಮರದಿಂದ ಹಲಸಿನ ಕಾಯಿ ಕಿತ್ತ ಆನೆ