IPL 2022: ರಾಜಸ್ಥಾನ್ ರಾಯಲ್ಸ್​ ತಂಡದಿಂದ ಪ್ರಮುಖ ಆಟಗಾರ ಔಟ್: ಬೇರೆ ತಂಡಕ್ಕೆ ನಾಯಕ?

IPL 2022 News: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿಯಂತೆ. ಸಿಎಸ್​ಕೆ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ಉತ್ತರಾಧಿಕಾರಿಯನ್ನು ಎದುರು ನೋಡುತ್ತಿದ್ದು, ಆ ಸ್ಥಾನಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಯಾಮ್ಸನ್ ಸೂಕ್ತ ಆಯ್ಕೆ ಎಂಬ ಅಭಿಪ್ರಾಯ ಸಿಎಸ್​ಕೆ ಫ್ರಾಂಚೈಸಿ ವಲಯದಲ್ಲಿದೆ.

IPL 2022: ರಾಜಸ್ಥಾನ್ ರಾಯಲ್ಸ್​ ತಂಡದಿಂದ ಪ್ರಮುಖ ಆಟಗಾರ ಔಟ್: ಬೇರೆ ತಂಡಕ್ಕೆ ನಾಯಕ?
Rajasthan Royals
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 17, 2021 | 6:22 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗುತ್ತಿರುವ ಬೆನ್ನಲ್ಲೇ ಕೆಲ ತಂಡಗಳಿಂದ ಪ್ರಮುಖ ಆಟಗಾರ ತಮ್ಮ ಹಳೆಯ ತಂಡವನ್ನು ತೊರೆಯಲು ಮುಂದಾಗುತ್ತಿದ್ದಾರೆ ಎಂಬ ಸುದ್ದಿಗಳು ಹೊರಬೀಳುತ್ತಿವೆ. ಈಗಾಗಲೇ ಸನ್​ರೈಸರ್ಸ್ ಹೈದರಾಬಾದ್​ ತಂಡದಿಂದ ಮಾಜಿ ನಾಯಕ ಡೇವಿಡ್ ವಾರ್ನರ್ ಹೊರಬರುವುದು ಬಹುತೇಕ ಖಚಿತವಾಗಿದೆ. ಅತ್ತ ಪಂಜಾಬ್ ಕಿಂಗ್ಸ್​ ತಂಡದಿಂದ ಹೊರಗುಳಿಯಲು ಕೆಎಲ್ ರಾಹುಲ್ ಕೂಡ ಮನಸ್ಸು ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ರಿಟೈನ್ ಆಗದಿರಲು ನಾಯಕ ಸಂಜು ಸ್ಯಾಮ್ಸನ್ ಕೂಡ ಬಯಸಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಕೆಲ ಮೂಲಗಳ ಪ್ರಕಾರ, ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಮುಂದುವರೆಯಲು ಇಚ್ಛಿಸುತ್ತಿಲ್ಲ. ಬದಲಾಗಿ ಮೆಗಾ ಹರಾಜಿನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಬಯಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಆರ್​ಆರ್ ತಂಡದಲ್ಲಿದ್ದರೂ ಸ್ಯಾಮ್ಸನ್ ನಾಯಕನಾಗಿ ಯಶಸ್ವಿಯಾಗಿರಲಿಲ್ಲ. ಇದಾಗ್ಯೂ ಐಪಿಎಲ್​ನ ಅತ್ಯುತ್ತಮ ವಿಕೆಟ್ ಕೀಪರ್ ಬ್ಯಾಟರುಗಳ ಪಟ್ಟಿಯಲ್ಲಿ ಸ್ಯಾಮ್ಸನ್ ಹೆಸರು ಕೂಡ ಮುಂಚೂಣಿಯಲ್ಲಿದೆ. ಇತ್ತ ಈ ಬಾರಿ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು ಸೇರ್ಪಡೆಯಾಗಿದ್ದು, ಹೀಗಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳಲು ಸ್ಯಾಮ್ಸನ್ ಮುಂದಾಗುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನೊಂದು ವರದಿ ಪ್ರಕಾರ, ಸಂಜು ಸ್ಯಾಮ್ಸನ್ ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿಯಂತೆ. ಸಿಎಸ್​ಕೆ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ಉತ್ತರಾಧಿಕಾರಿಯನ್ನು ಎದುರು ನೋಡುತ್ತಿದ್ದು, ಆ ಸ್ಥಾನಕ್ಕೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಯಾಮ್ಸನ್ ಸೂಕ್ತ ಆಯ್ಕೆ ಎಂಬ ಅಭಿಪ್ರಾಯ ಸಿಎಸ್​ಕೆ ಫ್ರಾಂಚೈಸಿ ವಲಯದಲ್ಲಿದೆ. ಹೀಗಾಗಿ ಸ್ಯಾಮ್ಸನ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ, ಪ್ರಮುಖ ತಂಡಗಳು ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸಲಿದೆ.

ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಾಗಿ ಸ್ಯಾಮ್ಸನ್ ಯಶಸ್ವಿಯಾಗದಿದ್ದರೂ, ಇತ್ತ ದೇಶೀಯ ಟೂರ್ನಿಯಲ್ಲಿ ಕೇರಳ ಪರ ನಾಯಕತ್ವದೊಂದಿಗೆ ಅಬ್ಬರಿಸುತ್ತಿದ್ದಾರೆ. ಈ ಬಾರಿಯ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ 6 ಪಂದ್ಯಗಳಲ್ಲಿ 114 ಸರಾಸರಿಯಲ್ಲಿ 227 ರನ್ ಗಳಿಸಿದ್ದಾರೆ. ಇದರಲ್ಲಿ 4 ಬಾರಿ ಸ್ಯಾಮ್ಸನ್ ಅಜೇಯರಾಗಿ ಉಳಿದಿದ್ದರು ಎಂಬುದು ವಿಶೇಷ. ಅಷ್ಟೇ ಅಲ್ಲದೆ 144 ರ ಸ್ಟ್ರೈಕ್ ರೇಟ್‌ನಲ್ಲಿ 3 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಸದ್ಯ ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕೇರಳ ತಂಡವು ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಸಂಜು ಸ್ಯಾಮ್ಸನ್ ಅವರ ಹೆಸರು ಕಾಣಿಸಿಕೊಂಡರೆ, ನಾಯಕ ಅಥವಾ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಆಯ್ಕೆ ಮಾಡಲು ಪ್ರಮುಖ ಫ್ರಾಂಚೈಸಿಗಳು ಮುಂದಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(Sanju Samson to Part Ways With Rajasthan Royals Before IPL 2022?)

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ