AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗನ ವೃತ್ತಿಜೀವನವನ್ನು ಮುಗಿಸಲು ನೋಡುತ್ತಿದ್ದಾರೆ’; ಸಂಜು ಸ್ಯಾಮ್ಸನ್‌ ತಂದೆಯ ಗಂಭೀರ ಆರೋಪ

Sanju Samson's Father Speaks Out: ಸಂಜು ಸ್ಯಾಮ್ಸನ್ ಅವರ ತಂದೆ ಕೇರಳ ಕ್ರಿಕೆಟ್ ಸಂಸ್ಥೆಯ ನಿರ್ಲಕ್ಷ್ಯದಿಂದ ತಮ್ಮ ಮಗನ ವೃತ್ತಿಜೀವನಕ್ಕೆ ಅಪಾಯ ಎದುರಾಗುತ್ತಿದೆ ಎಂದು ಆರೋಪಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಸಂಜು ಆಡಲು ಅವಕಾಶ ನೀಡದಿರುವುದರಿಂದ ಅವರು ಬೇಸರಗೊಂಡಿದ್ದಾರೆ. ಬೇರೆ ರಾಜ್ಯ ತಂಡದಲ್ಲಿ ಆಡಲು ಸಂಜು ಸಿದ್ಧ ಎಂದು ಅವರು ಹೇಳಿದ್ದಾರೆ.

‘ನನ್ನ ಮಗನ ವೃತ್ತಿಜೀವನವನ್ನು ಮುಗಿಸಲು ನೋಡುತ್ತಿದ್ದಾರೆ’; ಸಂಜು ಸ್ಯಾಮ್ಸನ್‌ ತಂದೆಯ ಗಂಭೀರ ಆರೋಪ
ಸಂಜು ಸ್ಯಾಮ್ಸನ್
ಪೃಥ್ವಿಶಂಕರ
|

Updated on: Jan 22, 2025 | 4:24 PM

Share

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗುತ್ತಿದೆ. ಈ ಸರಣಿಗಾಗಿ ಉಭಯ ತಂಡಗಳನ್ನು ಪ್ರಕಟಿಸಲಾಗಿದ್ದು, ಟೀಂ ಇಂಡಿಯಾದಲ್ಲಿ ಆರಂಭಿಕನಾಗಿ ಸಂಜು ಸ್ಯಾಮ್ಸನ್ ಆಡುವುದು ಖಚಿತವಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಸಂಜು ಅವರ ತಂದೆ ನೀಡಿದ ಹೇಳಿಕೆ ಕ್ರಿಕೆಟ್ ಪ್ರೇಮಿಗಳಲ್ಲಿ ಆಶ್ಚರ್ಯವನ್ನುಂಟು ಮಾಡಿದೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸಂಜು ಸ್ಯಾಮ್ಸನ್‌ ಅವರ ತಂದೆ ‘ನನ್ನ ಮಗನ ವೃತ್ತಿಜೀವನವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಅವನು ಕೇರಳವನ್ನು ತೊರೆಯಲು ಸಹ ಸಿದ್ಧನಾಗಿದ್ದಾನೆ. ಬೇರೆ ಯಾವುದೇ ರಾಜ್ಯವು ತನ್ನ ತಂಡದಲ್ಲಿ ತನ್ನ ಮಗನಿಗೆ ಅವಕಾಶ ನೀಡಿದರೆ, ಅವನು ಕೇರಳ ತಂಡವನ್ನು ಬಿಟ್ಟು ಅಲ್ಲಿಗೆ ಶಿಫ್ಟ್ ಆಗುತ್ತಾನೆ ಎಂದು ಸ್ಯಾಮ್ಸನ್ ತಂದೆ ಹೇಳಿದ್ದಾರೆ.

ಕಣ್ಣೀರಿಟ್ಟ ಸಂಜು ತಂದೆ

ಸ್ಪೋರ್ಟ್ಸ್ ಟಾಕ್​ಗೆ ನೀಡಿದ ಸಂದರ್ಶನದಲ್ಲಿ ಕಣ್ಣೀರಿಡುತ್ತ ಮಾತನಾಡಿದ ಸಂಜು ಸ್ಯಾಮ್ಸನ್ ತಂದೆ, ‘ಕೇರಳ ತಂಡದಲ್ಲಿ ಸಂಜು ಸ್ಯಾಮ್ಸನ್ ಸೇಫ್ ಇಲ್ಲ. ಈ ತಂಡದಲ್ಲಿ ಮಗನಿಗೆ ಏನು ಬೇಕಾದರೂ ಆಗಬಹುದು. ತಾವು ಯಾವುದೇ ತಪ್ಪು ಮಾಡಿದ್ದರೆ ಕೇರಳ ಅಸೋಸಿಯೇಷನ್‌ಗೆ ಕ್ಷಮೆಯಾಚಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ.

ಕೇರಳ ತಂಡದಲ್ಲಿ ಸಂಜುಗೆ ಅವಕಾಶವಿಲ್ಲ

ಇತ್ತೀಚೆಗೆ ಕೇರಳ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿರಲಿಲ್ಲ. ವಿಜಯ್ ಹಜಾರೆ ಟ್ರೋಫಿಯ ಒಂದೇ ಒಂದು ಪಂದ್ಯವನ್ನು ಆಡಲಾಗಲಿಲ್ಲ. ಕೇರಳ ಕ್ರಿಕೆಟ್ ಅಸೋಸಿಯೇಷನ್ ​​ಪ್ರಕಾರ, ಸಂಜು ಸ್ಯಾಮ್ಸನ್ ಕೇರಳ ಕ್ರಿಕೆಟ್ ತಂಡದ ಶಿಬಿರಕ್ಕೆ ಗೈರಾದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಯಾಮ್ಸನ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಲಿಲ್ಲ, ಆದ್ದರಿಂದ ಅವರು ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಸಂಜು ಸ್ಯಾಮ್ಸನ್ ತಂದೆಗೆ ಈ ಎಲ್ಲ ವಿಷಯಗಳಿಂದ ತುಂಬಾ ನೋವಾಗಿದ್ದು, ಅದಕ್ಕಾಗಿಯೇ ಅವರು ಕೇರಳವನ್ನು ತೊರೆಯುವ ಬಗ್ಗೆ ಮಾತನಾಡುತ್ತಿದ್ದಾರೆ.

ಏಕದಿನದಲ್ಲಿ ಅದ್ಭುತ ಪ್ರದರ್ಶನ

ಸಂಜು ಸ್ಯಾಮ್ಸನ್ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಗುಳಿದಿರುವುದು ದುರಾದೃಷ್ಟಕರ. ಏಕೆಂದರೆ ಸಂಜು ಈ ಸ್ವರೂಪದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಜು ಸ್ಯಾಮ್ಸನ್ ಇದುವರೆಗೆ ಟೀಂ ಇಂಡಿಯಾ ಪರ 14 ಏಕದಿನ ಇನ್ನಿಂಗ್ಸ್‌ಗಳಲ್ಲಿ 56ಕ್ಕೂ ಹೆಚ್ಚು ಸರಾಸರಿಯಲ್ಲಿ 510 ರನ್ ಗಳಿಸಿದ್ದಾರೆ. 100ರ ಆಸುಪಾಸಿನ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಸಂಜು ಈ ಮಾದರಿಯಲ್ಲಿ ಒಂದು ಶತಕ ಮತ್ತು 3 ಅರ್ಧಶತಕಗಳನ್ನು ಗಳಿಸಿದ್ದಾರೆ. ಆದಾಗ್ಯೂ ಅವರನ್ನು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗಿಟ್ಟಿರುವುದು ಕ್ರಿಕೆಟ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ