AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಕ್ರಿಕೆಟ್‌ ಮುಖ್ಯ ಕೋಚ್ ರೇಸ್​​ನಲ್ಲಿ ಈ ಅನುಭವಿ ಸ್ಪಿನ್ನರ್‌ ಹೆಸರು! ಶೀಘ್ರದಲ್ಲೇ ಅಧಿಕೃತ ಘೋಷಣೆ

ಮುಷ್ತಾಕ್ ನ್ಯೂಜಿಲ್ಯಾಂಡ್ ವಿರುದ್ಧ ಆಡುವ ಸರಣಿಯಲ್ಲಿ ಈ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಿತ್ತು. ಆದರೆ ಭದ್ರತಾ ಕಾರಣಗಳಿಂದಾಗಿ ಕಿವಿ ತಂಡವು ಈ ಪ್ರವಾಸವನ್ನು ರದ್ದುಗೊಳಿಸಿತು. ಇದರ ನಂತರ, ಮುಷ್ತಾಕ್ ಈಗ ನೇರವಾಗಿ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮುಖ್ಯ ಕೋಚ್ ರೇಸ್​​ನಲ್ಲಿ ಈ ಅನುಭವಿ ಸ್ಪಿನ್ನರ್‌ ಹೆಸರು! ಶೀಘ್ರದಲ್ಲೇ ಅಧಿಕೃತ ಘೋಷಣೆ
ಪಾಕ್ ತಂಡ
TV9 Web
| Edited By: |

Updated on: Sep 30, 2021 | 9:56 PM

Share

ಪಾಕಿಸ್ತಾನ ಪ್ರಸ್ತುತ ವಿಶ್ವ ಕ್ರಿಕೆಟ್‌ ಮುಂದೆ ತಲೆ ತಗ್ಗಿಸಿ ನಿಂತಿದೆ. ಮೊದಲು ತಂಡದ ಬದಲಾವಣೆಯ ಕಾರಣ ರಮೀಜ್ ರಾಜಾ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧ್ಯಕ್ಷರಾದರು ಮತ್ತು ನಂತರ ನ್ಯೂಜಿಲ್ಯಾಂಡ್ ತನ್ನ ಪ್ರವಾಸವನ್ನು ಅರ್ದಕ್ಕೆ ರದ್ದುಗೊಳಿಸಿತು. ಮುಂದಿನ ತಿಂಗಳು ಆರಂಭವಾಗಲಿರುವ ಟಿ 20 ವಿಶ್ವಕಪ್‌ಗೆ ಮುನ್ನ ತಂಡವು ಹಲವು ಬದಲಾವಣೆಗಳನ್ನು ಎದುರಿಸುತ್ತಿದೆ. ಮಿಸ್ಬಾ ಉಲ್ ಹಕ್ ಮುಖ್ಯ ಕೋಚ್ ಹುದ್ದೆಯನ್ನು ತೊರೆದ ನಂತರ, ತಂಡವು ತನ್ನ ಮುಂದಿನ ತರಬೇತುದಾರನನ್ನು ಹುಡುಕುತ್ತಿದೆ. ಈಗ ಹಿರಿಯ ಆಫ್ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ತಂಡದ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು ಎಂಬ ವರದಿಗಳು ಕೇಳಿಬಂದಿವೆ. ಮಾಜಿ ಆಟಗಾರ ಪ್ರಸ್ತುತ ರಾಷ್ಟ್ರೀಯ ಉನ್ನತ ಪ್ರದರ್ಶನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಆಟಗಾರರ ಅಭಿವೃದ್ಧಿಯ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಅವರು ತಂಡದ ಮುಂದಿನ ಮುಖ್ಯ ತರಬೇತುದಾರರಾಗುವ ರೇಸ್​ನಲ್ಲಿ ಮುಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ತಂಡವು ಟಿ 20 ವಿಶ್ವಕಪ್ ಆಡಬಹುದು.

ಮುಷ್ತಾಕ್ ನ್ಯೂಜಿಲ್ಯಾಂಡ್ ವಿರುದ್ಧ ಆಡುವ ಸರಣಿಯಲ್ಲಿ ಈ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಿತ್ತು. ಆದರೆ ಭದ್ರತಾ ಕಾರಣಗಳಿಂದಾಗಿ ಕಿವಿ ತಂಡವು ಈ ಪ್ರವಾಸವನ್ನು ರದ್ದುಗೊಳಿಸಿತು. ಇದರ ನಂತರ, ಮುಷ್ತಾಕ್ ಈಗ ನೇರವಾಗಿ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದ್ದಾರೆ. ಕ್ರಿಕೆಟ್ ಪಾಕಿಸ್ತಾನದ ವರದಿಯ ಪ್ರಕಾರ, ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಅವರ ಅನುಮೋದನೆಯ ನಂತರ ಪಾಕಿಸ್ತಾನ ಈ ವಿಷಯದಲ್ಲಿ ಅಧಿಕೃತ ಘೋಷಣೆಯನ್ನು ಮಾಡಬಹುದು. ಟಿ 20 ವಿಶ್ವಕಪ್​ನಲ್ಲಿ ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತದ ವಿರುದ್ಧ ಆಡಲಿದೆ.

ಈ ದೈತ್ಯರು ಜೊತೆಯಾಗುತ್ತಾರೆ ಮುಷ್ತಾಕ್ ಮೊದಲು, ಪಿಸಿಬಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮ್ಯಾಥ್ಯೂ ಹೇಡನ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ವೇಗದ ಬೌಲರ್ ವಾರ್ನನ್ ಫಿಲಾಂಡರ್ ಅವರನ್ನು ಬ್ಯಾಟಿಂಗ್ ಕೋಚ್ ಮತ್ತು ಬೌಲಿಂಗ್ ಕೋಚ್ ಆಗಿ ಸಹಿ ಹಾಕಿದೆ. ಈ ಇಬ್ಬರ ಜೊತೆಯಲ್ಲಿ ಮುಷ್ತಾಕ್ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಕೋಚ್ ಹುದ್ದೆಯನ್ನು ವಹಿಸಿಕೊಳ್ಳಬಹುದು. ಮುಷ್ತಾಕ್ ಈ ಹಿಂದೆ ಹಲವು ಅಂತಾರಾಷ್ಟ್ರೀಯ ತಂಡಗಳೊಂದಿಗೆ ಕೆಲಸ ಮಾಡಿದ್ದಾರೆ. ಅವರು ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ನಂತಹ ತಂಡಗಳೊಂದಿಗೆ ಸ್ಪಿನ್ ಬೌಲಿಂಗ್ ತರಬೇತುದಾರರಾಗಿ ಕೆಲಸ ಮಾಡಿದ್ದಾರೆ. ಮುಷ್ತಾಕ್ ಅವರನ್ನು ಅವರ ಕಾಲದ ಖ್ಯಾತ ಸ್ಪಿನ್ನರ್ ಎಂದು ಪರಿಗಣಿಸಲಾಗಿತ್ತು. ಇಂದಿಗೂ, ಅವರು ವಿಶ್ವದ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರ ವೃತ್ತಿಜೀವನದಲ್ಲಿ, ಅವರು ಪಾಕಿಸ್ತಾನಕ್ಕಾಗಿ 49 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 208 ವಿಕೆಟ್ಗಳನ್ನು ಪಡೆದಿದ್ದಾರೆ. ಅದೇ ಸಮಯದಲ್ಲಿ, ಅವರು 169 ಏಕದಿನ ಪಂದ್ಯಗಳಲ್ಲಿ 288 ವಿಕೆಟ್ ಪಡೆದಿದ್ದಾರೆ.

ಮಿಸ್ಬಾ, ವಾಕರ್ ಗುಡ್​ಬೈ ಈ ಹಿಂದೆ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ತಂಡದ ಮುಖ್ಯ ತರಬೇತುದಾರರಾಗಿದ್ದರು ಮತ್ತು ವಕಾರ್ ಯೂನಿಸ್ ಅವರಿಗೆ ಬೌಲಿಂಗ್ ತರಬೇತುದಾರನ ಜವಾಬ್ದಾರಿ ನೀಡಲಾಗಿತ್ತು. ಅವರು ಈ ತಿಂಗಳ ಆರಂಭದಲ್ಲಿ ತಮ್ಮ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಮಿಸ್ಬಾ ಅವರ ಅವಧಿಯಲ್ಲಿ ಹೆಚ್ಚು ವಿವಾದಗಳು ಇದ್ದವು. ಮಿಕ್ಕಿ ಆರ್ಥರ್ ನಂತರ ಅವರು ತಂಡದ ತರಬೇತುದಾರನ ಜವಾಬ್ದಾರಿಯನ್ನು ವಹಿಸಿಕೊಂಡರು ಆದರೆ ಹೆಚ್ಚಿನ ಯಶಸ್ಸನ್ನು ತರಲು ಸಾಧ್ಯವಾಗಲಿಲ್ಲ. ಪಮೀಬಿನಲ್ಲಿ ರಮೀಜ್ ರಾಜಾ ಪ್ರವೇಶದಿಂದಾಗಿ, ಅವರು ಮತ್ತು ರಾಜ ನಡುವಿನ ಸಂಬಂಧ ಚೆನ್ನಾಗಿಲ್ಲದ ಕಾರಣ ಅವರು ತಮ್ಮ ಹುದ್ದೆಯನ್ನು ತೊರೆದರು ಎಂದು ಊಹಿಸಲಾಗಿದೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​