
ಮುಂದಿನ ತಿಂಗಳು ಭಾರತ ತಂಡ ಇಂಗ್ಲೆಂಡ್ ಪ್ರವಾಸ (India cricket team England tour) ಕೈಗೊಳಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಇದಕ್ಕೂ ಮುನ್ನ ಭಾರತ ಎ ತಂಡ ಇಂಗ್ಲೆಂಡ್ ಲಯನ್ಸ್ ವಿರುದ್ಧ ಎರಡು ಅನಧಿಕೃತ ನಾಲ್ಕು ದಿನಗಳ ಪಂದ್ಯಗಳನ್ನು ಆಡಬೇಕಾಗಿದೆ. ಈ ಸರಣಿಗೆ ಬಿಸಿಸಿಐ (BCCI) ಇತ್ತೀಚೆಗೆ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿರುವ ಒಬ್ಬ ಆಟಗಾರ ಇಂಗ್ಲೆಂಡ್ ಪ್ರವಾಸಕ್ಕಾಗಿ ಕಠಿಣ ತಯಾರಿ ನಡೆಸುತ್ತಿದ್ದಾರೆ. ಅದರಂತೆ ತನ್ನ ದೇಹದ ತೂಕವನ್ನು ಸಹ ಬರೋಬ್ಬರಿ 10 ಕೆಜಿ ಕಡಿಮೆ ಮಾಡಿಕೊಂಡಿದ್ದಾನೆ. ಕಳೆದ ವರ್ಷ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಈ ಆಟಗಾರ, ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದರು.
ಟೀಮ್ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಇಂಗ್ಲೆಂಡ್ ಪ್ರವಾಸಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರು 2024 ರಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ಗೆ ಪಾದಾರ್ಪಣೆ ಮಾಡಿದರು. ಆದರೆ ಸರ್ಫರಾಜ್‌ಗೆ ವಿದೇಶದಲ್ಲಿ ಟೆಸ್ಟ್ ಪಂದ್ಯ ಆಡಲು ಇನ್ನೂ ಅವಕಾಶ ಸಿಕ್ಕಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರ ಗಮನ ಈಗ ಇಂಗ್ಲೆಂಡ್ ಲಯನ್ಸ್ ವಿರುದ್ಧ ಬಲವಾದ ಪ್ರದರ್ಶನ ನೀಡುವತ್ತ ಇದೆ, ಇದರಿಂದ ಅವರು ಹಿರಿಯ ತಂಡದ ಭಾಗವಾಗಬಹುದು. ಈ ಪ್ರವಾಸಕ್ಕಾಗಿ ಸರ್ಫರಾಜ್ ಖಾನ್ ತೂಕ ಇಳಿಸಿಕೊಂಡಿದ್ದು, ಕಟ್ಟುನಿಟ್ಟಿನ ಆಹಾರ ಕ್ರಮವನ್ನೂ ಅನುಸರಿಸುತ್ತಿದ್ದಾರೆ.
ಇಂಡಿಯಾ ಟುಡೇ ವರದಿಯ ಪ್ರಕಾರ, ಸರ್ಫರಾಜ್ ಖಾನ್ ಫಿಟ್ ಆಗಿರಲು ಬೇಯಿಸಿದ ತರಕಾರಿ ಮತ್ತು ಕಟ್ಟುನಿಟ್ಟಿನ ಆಹಾರ ಯೋಜನೆಯನ್ನು ಅನುಸರಿಸಿದ್ದಾರೆ. ಇದರಿಂದಾಗಿ ಅವರು 10 ಕೆಜಿ ತೂಕ ಇಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ, ಅವರು ದಿನಕ್ಕೆ ಎರಡು ಬಾರಿ ಅಭ್ಯಾಸ ಮಾಡುತ್ತಿದ್ದು, ಇದರಲ್ಲಿ ಅವರ ಮುಖ್ಯ ಗಮನ ಸ್ಟಂಪ್ನಿಂದ ಹೊರಗಹೋಗುವ ಚೆಂಡುಗಳನ್ನು ಎದುರಿಸುವುದಾಗಿದೆ.
ಭಾರತ ಟಿ20 ತಂಡಕ್ಕೆ ಕೆಎಲ್ ರಾಹುಲ್ ಆಯ್ಕೆ ಬಹುತೇಕ ಖಚಿತ
ಸರ್ಫರಾಜ್ ಖಾನ್ ಇದುವರೆಗೆ ಟೀಂ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಈ ಎಲ್ಲಾ ಪಂದ್ಯಗಳನ್ನು ಅವರು ಭಾರತದಲ್ಲಿ ಮಾತ್ರ ಆಡಿದ್ದಾರೆ. ಇದರಲ್ಲಿ ಅವರು 37.10 ಸರಾಸರಿಯಲ್ಲಿ 371 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು ಒಂದು ಶತಕ ಮತ್ತು 3 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅವರು ಕೊನೆಯ ಬಾರಿಗೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಪರ ಆಡಿದ್ದರು. ಈ ಪಂದ್ಯವನ್ನು ನವೆಂಬರ್ 2024 ರಲ್ಲಿ ಆಡಲಾಗಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ