IND vs ENG 2nd Test: ಟೀಮ್ ಇಂಡಿಯಾಕ್ಕೆ ಚೊಚ್ಚಲ ಆಯ್ಕೆ: ಸರ್ಫರಾಜ್ ಖಾನ್ ಇನ್ಸ್ಟಾ ಸ್ಟೋರಿ ಏನು ನೋಡಿ
Sarfaraz Khan, India vs England: ಸರ್ಫರಾಜ್ ಖಾನ್ ದೇಶೀಯ ಕ್ರಿಕೆಟ್‌ನಲ್ಲಿ ನಿರಂತರವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಬೇಕು ಎಂಬ ಬೇಡಿಕೆ ಕಳೆದ ಹಲವು ತಿಂಗಳಿಂದ ಕೇಳಿ ಬರುತ್ತಿತ್ತು. ಇದೀಗ ಅಂತಿಮವಾಗಿ ಸರ್ಫರಾಜ್‌ಗೆ ಟೀಮ್ ಇಂಡಿಯಾದ ಬಾಗಿಲು ತೆರೆದಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡ ಟೀಮ್ ಇಂಡಿಯಾಕ್ಕೆ (India vs England) ಭಾರೀ ಆಘಾತ ಉಂಟಾಗಿದೆ. ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಇಬ್ಬರೂ ಗಾಯದಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ತಂಡಕ್ಕೆ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ. ಈ ಮೂವರಲ್ಲಿ ಆಲ್‌ರೌಂಡರ್‌ಗಳಾದ ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್ ಮತ್ತು ಮುಂಬೈಕರ್ ಸರ್ಫರಾಜ್ ಖಾನ್ ಸೇರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಬಿಸಿಸಿಐ ಮಾಹಿತಿ ನೀಡಿದೆ.
ಸರ್ಫರಾಜ್ ಖಾನ್ ದೇಶೀಯ ಕ್ರಿಕೆಟ್‌ನಲ್ಲಿ ನಿರಂತರವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡಬೇಕು ಎಂಬ ಬೇಡಿಕೆ ಕಳೆದ ಹಲವು ತಿಂಗಳಿಂದ ಕೇಳಿ ಬರುತ್ತಿತ್ತು. ಆದರೆ ಸರ್ಫರಾಜ್‌ಗೆ ಅವಕಾಶ ಸಿಗಲಿಲ್ಲ. ಇದೀಗ ಅಂತಿಮವಾಗಿ ಸರ್ಫರಾಜ್‌ಗೆ ಟೀಮ್ ಇಂಡಿಯಾದ ಬಾಗಿಲು ತೆರೆದಿದೆ. ಬಿಸಿಸಿಐನ ಈ ನಿರ್ಧಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸ್ವಾಗತಿಸಿದ್ದಾರೆ. ಈ ಬಗ್ಗೆ ಸರ್ಫರಾಜ್ ಮೊದಲ ಪ್ರತಿಕ್ರಿಯೆ ಹೊರಬಿದ್ದಿದೆ.
IND vs ENG: ಟೀಂ ಇಂಡಿಯಾಕ್ಕೆ ಆಯ್ಕೆಯಾದ ಆಲ್‌ರೌಂಡರ್ ಸೌರಭ್ ಕುಮಾರ್ ಬಗ್ಗೆ ನಿಮಗೆಷ್ಟು ಗೊತ್ತು?
ಟೀಮ್ ಇಂಡಿಯಾದಲ್ಲಿ ತಮ್ಮ ಆಯ್ಕೆಯನ್ನು ಸಂಭ್ರಮಿಸಿದ ಸರ್ಫರಾಜ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ಫರಾಜ್ ಇನ್ಸ್ಟಾದಲ್ಲಿ ಹಲವು ಸ್ಟೋರಿಗಳನ್ನು ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಅವರು ಸರ್ಫರಾಜ್ ಅವರನ್ನು ಅಭಿನಂದಿಸಿ ಪೋಸ್ಟ್ ಮಾಡಿದ್ದಾರೆ. ಅದರ ಫೋಟೋವನ್ನು ಸರ್ಫರಾಜ್ ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ಸರ್ಫರಾಜ್ ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು ಇದಕ್ಕೆ ‘ಚಕ್ ದೇ ಇಂಡಿಯಾ’ ಚಿತ್ರದ ಹಾಡನ್ನು ಹಾಕಿದ್ದಾರೆ. ಮೂರನೇ ಸ್ಟೋರಿಯಲ್ಲಿ, ಸರ್ಫರಾಜ್ ಅವರು ತ್ರಿವರ್ಣ ಮತ್ತು ಹೃದಯದ ಎಮೋಜಿಯೊಂದಿಗೆ ಟೀಮ್ ಇಂಡಿಯಾದಲ್ಲಿನ ಆಟಗಾರರ ಹೆಸರಿನೊಂದಿಗೆ ತಮ್ಮ ಫೋಟೋವನ್ನು ಶೇರ್ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಕೆಶ್ ಕುಮಾರ್ ಸಿರಾಜ್, ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್ ಮತ್ತು ಸೌರಭ್ ಕುಮಾರ್.
ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರೌಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜ್ಯಾಕ್ ಲೀಚ್, ಆಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್, ಡೇನಿಯಲ್ ಲಾರೆನ್ಸ್ ಮತ್ತು ಗಸ್ ಅಟ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ