ಟೀಮ್ ಇಂಡಿಯಾ ವಿರುದ್ಧವೇ ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್

IND vs SA: ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೊದಲ ಟೆಸ್ಟ್ ಪಂದ್ಯವು ಸೆಂಚುರಿಯನ್​ನಲ್ಲಿ ನಡೆಯಲಿದ್ದು, ಇದಾದ ಬಳಿಕ ಜನವರಿ 3 ರಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಟೀಮ್ ಇಂಡಿಯಾ ವಿರುದ್ಧವೇ ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್
Sarfaraz Khan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 23, 2023 | 8:34 AM

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಗಾಗಿ ಟೀಮ್ ಇಂಡಿಯಾ (Team India) ಸಜ್ಜಾಗುತ್ತಿದೆ. ಡಿಸೆಂಬರ್ 26 ರಿಂದ ಆರಂಭವಾಗಲಿರುವ ಈ ಸರಣಿಗೂ ಮುನ್ನ ಭಾರತ ಮತ್ತು ಭಾರತ ಎ ತಂಡಗಳ ನಡುವೆ ಅಭ್ಯಾಸ ಪಂದ್ಯವನ್ನು ಏರ್ಪಡಿಸಲಾಗಿದೆ. ಈ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಸ್ಪೋಟಕ ಸೆಂಚುರಿ ಸಿಡಿಸಿ ಸರ್ಫರಾಝ್ ಖಾನ್ ಅಬ್ಬರಿಸಿದ್ದಾರೆ.

ಈ ಪಂದ್ಯದಲ್ಲಿ ಭಾರತ ಎ ತಂಡದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಯುವ ದಾಂಡಿಗ ಟೀಮ್ ಇಂಡಿಯಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಸರ್ಫರಾಝ್ ಖಾನ್ ಕೇವಲ 61 ಎಸೆತಗಳಲ್ಲಿ ಶತಕ ಪೂರೈಸಿ ಮಿಂಚಿದರು.

ಈ ಶತಕದೊಂದಿಗೆ ಸರ್ಫರಾಝ್ ಖಾನ್ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ದೇಶೀಯ ಅಂಗಳದಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಸರ್ಫರಾಝ್​ಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ತೂಫಾನ್ ಸೆಂಚುರಿ ಬಾರಿಸಿ ಮತ್ತೊಮ್ಮೆ ಆಯ್ಕೆಗಾರರ ಗಮನ ಸೆಳೆದಿದ್ದಾರೆ.

ರಣಜಿ ಕ್ರಿಕೆಟ್​ನಲ್ಲಿ ಸರ್ಫರಾಝ್ ಕಿಂಗ್:

ರಣಜಿ ಕ್ರಿಕೆಟ್ ಟೂರ್ನಿಗಳಲ್ಲಿ ಸರ್ಫರಾಝ್ ಖಾನ್ ರನ್​ಗಳಿಸುತ್ತಲೇ ಬರುತ್ತಿದ್ದಾರೆ. ಮುಂಬೈ ತಂಡದ ಪರ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುತ್ತಿರುವ ಅವರು ಅದ್ಭುತ ಪ್ರದರ್ಶನದಿಂದ ಗಮನ ಸೆಳೆಯುತ್ತಿದ್ದಾರೆ. ಇದುವರೆಗೆ 41 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ 26 ವರ್ಷದ ಸರ್ಫರಾಝ್ 71.70 ಸರಾಸರಿಯಲ್ಲಿ 3657 ರನ್‌ಗಳನ್ನು ಕಲೆಹಾಕಿದ್ದಾರೆ. ಈ ವೇಳೆ 13 ಶತಕಗಳು ಮತ್ತು 10 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ: IPL 2024: ಬಲಿಷ್ಠ ಪಡೆ…RCB ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

ಈ ಅದ್ಭುತ ಪ್ರದರ್ಶನದ ಫಲವಾಗಿ ಅವರಿಗೆ ಇತ್ತೀಚೆಗೆ ಭಾರತ ಎ ತಂಡದಲ್ಲಿ ಅವಕಾಶ ಲಭಿಸಿತು. ಅದರಂತೆ ಸೌತ್ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಸರ್ಫರಾಝ್ ಅರ್ಧಶತಕ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಸ್ಪೋಟಕ ಶತಕ ಬಾರಿಸಿ ಮಿಂಚಿರುವುದು ವಿಶೇಷ.

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ:

ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೊದಲ ಟೆಸ್ಟ್ ಪಂದ್ಯವು ಸೆಂಚುರಿಯನ್​ನಲ್ಲಿ ನಡೆಯಲಿದ್ದು, ಇದಾದ ಬಳಿಕ ಜನವರಿ 3 ರಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯಗಳ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದರೆ ಏಕದಿನ ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಯಾವುದೇ ಪಂದ್ಯವಾಡಿಲ್ಲ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಟೀಮ್ ಇಂಡಿಯಾ ದಿಗ್ಗಜರು ಮತ್ತೆ ಮೈದಾನಕ್ಕೆ ಮರಳಲಿದ್ದಾರೆ.

Published On - 8:33 am, Sat, 23 December 23

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ