IND vs NZ: ಕೆಎಲ್ ರಾಹುಲ್ vs ಸರ್ಫರಾಝ್ ಖಾನ್: ಯಾರಿಗೆ ಸಿಗಲಿದೆ ಚಾನ್ಸ್?

Sarfaraz Khan vs KL Rahul: ರಲ್ಲಿ ಟೀಮ್ ಇಂಡಿಯಾ ಪರ ಸರ್ಫರಾಝ್ ಖಾನ್ ಮೂರು ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, ಕೆಎಲ್ ರಾಹುಲ್ ಎಂಟು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ ಸರ್ಫರಾಝ್ 3 ಅರ್ಧಶತಕ ಬಾರಿಸಿ ಮಿಂಚಿದರೆ, ಕೆಎಲ್ ರಾಹುಲ್ 2 ಹಾಫ್ ಸೆಂಚುರಿ ಸಿಡಿಸಿದ್ದಾರೆ.

IND vs NZ: ಕೆಎಲ್ ರಾಹುಲ್ vs ಸರ್ಫರಾಝ್ ಖಾನ್: ಯಾರಿಗೆ ಸಿಗಲಿದೆ ಚಾನ್ಸ್?
Sarfaraz Khan - KL Rahul
Follow us
|

Updated on:Oct 15, 2024 | 12:01 PM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ನಾಳೆಯಿಂದ (ಅ.16) ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದು ಯಾರು ಎಂಬುದೇ ಈಗ ಪ್ರಶ್ನೆ. ಏಕೆಂದರೆ ಭಾರತ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಪ್ರತಿಯೊಬ್ಬರು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅತ್ತ ಬಾಂಗ್ಲಾ ಸರಣಿಯ ವೇಳೆ ಬೆಂಚ್ ಕಾದಿದ್ದ ಸರ್ಫರಾಝ್ ದೇಶೀಯ ಅಂಗಳದಲ್ಲಿ ದ್ವಿಶತಕ ಬಾರಿಸಿ ಇದೀಗ ಮತ್ತೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಹೀಗಾಗಿಯೇ ಈ ಬಾರಿ ಸರ್ಫರಾಝ್ ಖಾನ್​ಗೆ ಮಣೆ ಹಾಕಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯ ಎರಡೂ ಪಂದ್ಯಗಳಲ್ಲೂ ಯುವ ದಾಂಡಿಗ ಬೆಂಚ್ ಕಾದಿದ್ದರು. ಇದಾದ ಬಳಿಕ ನಡೆದ ಇರಾನಿ ಕಪ್ ಪಂದ್ಯದಲ್ಲಿ ಕಣಕ್ಕಿಳಿದ ಸರ್ಫರಾಝ್ 286 ಎಸೆತಗಳಲ್ಲಿ 222 ರನ್​ಗಳ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದರು.

ಇತ್ತ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್​ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಇಲ್ಲಿ ಸರ್ಫರಾಝ್​ಗೆ ಚಾನ್ಸ್ ನೀಡಲು ಮುಂದಾದರೆ ಕೆಎಲ್ ರಾಹುಲ್ ಅವರ ತಲೆದಂಡವಾಗುವುದು ಖಚಿತ.

ಏಕೆಂದರೆ ಸರ್ಫರಾಝ್ ಖಾನ್ ಮಧ್ಯಮ ಕ್ರಮಾಂಕದ ಬ್ಯಾಟರ್. ಇತ್ತ ಮಧ್ಯಮ ಕ್ರಮಾಂಕದಲ್ಲಿರುವುದು ಕೆಎಲ್ ರಾಹುಲ್. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಲ್ಲದೆ ಈ ಸರಣಿಯಲ್ಲಿ ಮೂರು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಕೆಎಲ್ ರಾಹುಲ್ ಕಲೆಹಾಕಿರುವುದು 106 ರನ್​ಗಳು.

ಅದೇ ಟೀಮ್ ಇಂಡಿಯಾ ಪರ ಮೂರು ಟೆಸ್ಟ್ ಪಂದ್ಯಗಳನ್ನಾಡಿರುವ ಸರ್ಫರಾಝ್ ಖಾನ್ ಒಟ್ಟು 200 ರನ್ ಗಳಿಸಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಬದಲಾವಣೆ ಮಾಡಲು ಮುಂದಾದರೆ ಕೆಎಲ್ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ತವರಿನಲ್ಲಿ ಪಂದ್ಯ: ರಾಹುಲ್​ಗೆ ಪ್ಲಸ್ ಪಾಯಿಂಟ್:

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಕೆಎಲ್ ರಾಹುಲ್​ಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂ ರಾಹುಲ್​ ಅವರ ತವರು ಮೈದಾನ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್​ಗೆ ಮತ್ತೊಂದು ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.

ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಕೇವಲ 43 ಎಸೆತಗಳಲ್ಲಿ 68 ರನ್ ಬಾರಿಸಿದ್ದರು. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಿಂದ ಕನ್ನಡಿಗನ ಕೈ ಬಿಡುವ ಸಾಧ್ಯತೆ ಇಲ್ಲ ಎಂದೇ ಹೇಳಬಹುದು.

ಇದನ್ನೂ ಓದಿ: IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

ಹೀಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಒಂದು ವೇಳೆ ತವರು ಮೈದಾನದಲ್ಲಿ ವಿಫಲರಾದರೆ, ಮುಂದಿನ ಎರಡು ಪಂದ್ಯಗಳಲ್ಲಿ ಸರ್ಫರಾಝ್ ಖಾನ್​ಗೆ ಚಾನ್ಸ್ ಸಿಗಬಹುದು. ಹಾಗಾಗಿ ಭಾರತದ ಪರ ಮತ್ತೊಮ್ಮೆ ಕಣಕ್ಕಿಳಿಯಲು ಸರ್ಫರಾಝ್ ಖಾನ್ ಒಂದೆರಡು ಪಂದ್ಯಗಳವರೆಗೆ ಕಾಯಬೇಕಾಗಿ ಬರಬಹುದು.

Published On - 12:00 pm, Tue, 15 October 24

ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ