IND vs AUS: ಆಸ್ಟ್ರೇಲಿಯಾ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು?

|

Updated on: Oct 13, 2024 | 2:17 PM

Women’s T20 World Cup 2024: ವುಮೆನ್ಸ್ ಟಿ20 ವಿಶ್ವಕಪ್​ನಲ್ಲಿ ಇಂದು (ಅ.13) ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳು ಸೆಣಸಲಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7.30 ರಿಂದ ಶುರುವಾಗಲಿದೆ. ಈ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸಿದರೆ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

IND vs AUS: ಆಸ್ಟ್ರೇಲಿಯಾ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು?
IND vs AUS
Follow us on

ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಅ.13) ನಡೆಯಲಿರುವ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಭಾರತ ತಂಡ ನೇರವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಕಡಿಮೆ ಅಂತರದ ಗೆಲುವು ದಾಖಲಿಸಿದರೆ ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯದ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಆದರೆ ಅದಕ್ಕೂ ಮುನ್ನ ಇಂದಿನ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿದರೆ ಸೆಮಿಫೈನಲ್ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬಹುದು.

ಭಾರತ ತಂಡ ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು?

ಪ್ರಸ್ತುತ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು 6 ಅಂಕಗಳೊಂದಿಗೆ +2.786 ನೆಟ್ ರನ್ ರೇಟ್ ಹೊಂದಿದೆ. ಅತ್ತ ದ್ವಿತೀಯ ಸ್ಥಾನದಲ್ಲಿರುವ ಟೀಮ್ ಇಂಡಿಯಾ 4 ಅಂಕಗಳೊಂದಿಗೆ +0.576 ನೆಟ್ ರನ್ ರೇಟ್ ಹೊಂದಿದೆ. ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಟೀಮ್ ಇಂಡಿಯಾದ ಅಂಕ ಕೂಡ ಆರಕ್ಕೇರಲಿದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ

ಇದಾಗ್ಯೂ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಕಾರಣ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲಿದೆ. ಆದರೆ ಇಲ್ಲಿ ಆಸ್ಟ್ರೇಲಿಯಾವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಲು ಟೀಮ್ ಇಂಡಿಯಾ ಕನಿಷ್ಠ 60 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

  • ಭಾರತ ತಂಡವು ಮೊದಲು ಬ್ಯಾಟ್ ಮಾಡಿ 180 ರನ್​ ಕಲೆಹಾಕಿದರೆ, ಆಸ್ಟ್ರೇಲಿಯಾ ತಂಡವನ್ನು 117 ರನ್​ಗಳಿಗೆ ನಿಯಂತ್ರಿಸಬೇಕು. ಈ ಮೂಲಕ ನೆಟ್ ರನ್ ರೇಟ್​ನಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕಬಹುದು.
  • ಟೀಮ್ ಇಂಡಿಯಾ 160 ಸ್ಕೋರ್ ಮಾಡಿದರೆ, ಆಸ್ಟ್ರೇಲಿಯಾ ತಂಡವನ್ನು 98ರನ್​ಗಳಿಗೆ ನಿರ್ಬಂಧಿಸಬೇಕು. ಅಂದರೆ ಇಲ್ಲಿ ಟೀಮ್ ಇಂಡಿಯಾದ ಗೆಲುವಿಗೆ ಕನಿಷ್ಠ 60 ರನ್​ಗಳ ಅಂತರ ಇರಲೇಬೇಕು.
  • ಒಂದು ವೇಳೆ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟ್ ಮಾಡಿ 120 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ ಈ ಮೊತ್ತವನ್ನು 10.1 ಓವರ್​ಗಳಲ್ಲಿ ಚೇಸ್ ಮಾಡಬೇಕಾಗುತ್ತದೆ.
  • ಹೀಗೆ ಭಾರೀ ಅಂತರದಿಂದ ಗೆದ್ದರೆ ಮಾತ್ರ ಟೀಮ್ ಇಂಡಿಯಾ ನೆಟ್ ರನ್ ರೇಟ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಬಹುದು. ಅಲ್ಲದೆ ಈ ಅಗ್ರಸ್ಥಾನದೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಡಬಹುದಾಗಿದೆ.
  • ಇನ್ನು ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸಾಧಾರಣ ಗೆಲುವು ದಾಖಲಿಸಿದರೆ, ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ನ್ಯೂಝಿಲೆಂಡ್ ಸೋಲನುವುದನ್ನು ಎದುರು ನೋಡಬೇಕಾಗುತ್ತದೆ. ಅಥವಾ 20 ಕ್ಕಿಂತ ಕಡಿಮೆ ಅಂತರದಲ್ಲಿ ನ್ಯೂಝಿಲೆಂಡ್ ಗೆದ್ದರೂ, ಟೀಮ್ ಇಂಡಿಯಾ ನೆಟ್ ರನ್ ರೇಟ್ ಸಹಾಯದಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

 

 

Published On - 2:08 pm, Sun, 13 October 24