AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿದ RCB ಆಟಗಾರ

Finn Allen: ಸ್ಪೋಟಕ ಶತಕ ಸಿಡಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡ ಫಿನ್ ಅಲೆನ್​ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್​ನಲ್ಲಿ ಕಳೆದ ಎರಡು ಸೀಸನ್​ಗಳಿಂದ ಫಿನ್ ಅಲೆನ್​ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಟಿ20 ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿದ RCB ಆಟಗಾರ
Finn Allen
TV9 Web
| Edited By: |

Updated on: Jul 28, 2022 | 12:06 PM

Share

ನ್ಯೂಜಿಲೆಂಡ್-ಸ್ಕಾಟ್ಲೆಂಡ್ ನಡುವಣ ಟಿ20 ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸುವ ಮೂಲಕ ಯುವ ಆಟಗಾರ ಫಿನ್ ಅಲೆನ್ ಅಬ್ಬರಿಸಿದ್ದಾರೆ. ಆತಿಥೇಯ ಸ್ಕಾಟ್ಲೆಂಡ್​ನ ಎಡಿನ್​ಬರ್ಗ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸ್ಕಾಟ್ಲೆಂಡ್ ನಾಯಕ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಫಿನ್ ಅಲೆನ್ ಬಿರುಸಿನ ಆರಂಭ ಒದಗಿಸಿದ್ದರು. ಮಾರ್ಟಿನ್ ಗಪ್ಟಿಲ್ ಜೊತೆಗೂಡಿ ಇನಿಂಗ್ಸ್ ಆರಂಭಿಸಿದ ಫಿನ್ ಅಲೆನ್ ಮೊದಲ ವಿಕೆಟ್​ಗೆ 85 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 40 ರನ್​ಗಳಿಸಿದ್ದ ಗಪ್ಟಿಲ್ ಔಟಾದರು. ಇದಾಗ್ಯೂ ಅಲೆನ್ ಅಬ್ಬರ ಮುಂದುವರೆದಿತ್ತು.

56 ಎಸೆತಗಳನ್ನು ಎದುರಿಸಿದ ಅಲೆನ್ 8 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 101 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ವೃತ್ತಿಜೀವನದ ಮೊದಲ ಶತಕ ಸಿಡಿಸಿ ಮಿಂಚಿದರು. ಫಿನ್ ಅಲೆನ್ ಅವರ ಈ ಸ್ಪೋಟಕ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡವು 5 ವಿಕೆಟ್‌ ನಷ್ಟಕ್ಕೆ 225 ರನ್ ಗಳಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸ್ಕಾಟ್ಲೆಂಡ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗೆ 157 ರನ್ ಗಳಿಸಲಷ್ಟೇ ಶಕ್ತವಾಯಿತು.

ಸ್ಕಾಟ್ಲೆಂಡ್ ಪರ ಆರಂಭಿಕ ಆಟಗಾರ ಕ್ಯಾಲಮ್ ಮೆಕ್ಲಿಯೋಡ್ 33 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಹಾಗೆಯೆ ಕ್ರಿಸ್ ಗ್ರೀವ್ಸ್ (31) ಮತ್ತು ಆರಂಭಿಕ ಜಾರ್ಜ್ ಮುನ್ಸಿ (28) ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇತ್ತ ನ್ಯೂಜಿಲೆಂಡ್ ಪರ ಇಶ್ ಸೋಧಿ 4 ಓವರ್ ಗಳಲ್ಲಿ 28 ರನ್ ನೀಡಿ ಕೇವಲ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸ್ಪೋಟಕ ಶತಕ ಸಿಡಿಸುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡ ಫಿನ್ ಅಲೆನ್​ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್​ನಲ್ಲಿ ಕಳೆದ ಎರಡು ಸೀಸನ್​ಗಳಿಂದ ಫಿನ್ ಅಲೆನ್​ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಅವರಿಗೆ ಆರ್​ಸಿಬಿ ಪರ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ ಎಂಬುದು ವಿಶೇಷ. ಇದೀಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​