SCO vs OMN: ಚೊಚ್ಚಲ ಪಂದ್ಯದಲ್ಲೇ 7 ವಿಕೆಟ್ ಕಿತ್ತು ಇತಿಹಾಸ ನಿರ್ಮಿಸಿದ ಸ್ಕಾಟ್ಲೆಂಡ್ ವೇಗಿ..!

Charlie Cassell: ಚಾರ್ಲಿ ಕ್ಯಾಸಲ್ ತೆಗೆದ 7 ವಿಕೆಟ್​ಗಳಲ್ಲಿ ಮೊದಲ ಎರಡು ವಿಕೆಟ್​ಗಳು ಅವರು ಬೌಲ್ ಮಾಡಿದ ಮೊದಲ ಓವರ್​ನ ಮೊದಲ ಎರಡು ಎಸೆತಗಳಲ್ಲೇ ಬಂದವು. ಇದರೊಂದಿಗೆ ತಾನು ಬೌಲ್ ಮಾಡಿದ ಚೊಚ್ಚಲ ಪಂದ್ಯದ ಚೊಚ್ಚಲ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಸತತ ಎರಡು ವಿಕೆಟ್​ಗಳನ್ನು ಉರುಳಿಸಿದ ವಿಶ್ವದ ಮೊದಲ ಬೌಲರ್ ಎಂಬ ದಾಖಲೆಯನ್ನು ಚಾರ್ಲಿ ತನ್ನ ಖಾತೆಗೆ ಹಾಕಿಕೊಂಡಿದ್ದಾರೆ.

SCO vs OMN: ಚೊಚ್ಚಲ ಪಂದ್ಯದಲ್ಲೇ 7 ವಿಕೆಟ್ ಕಿತ್ತು ಇತಿಹಾಸ ನಿರ್ಮಿಸಿದ ಸ್ಕಾಟ್ಲೆಂಡ್ ವೇಗಿ..!
ಚಾರ್ಲಿ ಕ್ಯಾಸಲ್
Follow us
ಪೃಥ್ವಿಶಂಕರ
|

Updated on:Jul 22, 2024 | 7:04 PM

ಸ್ಕಾಟ್ಲೆಂಡ್​ನ ಫೋರ್ಥಿಲ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಒಮಾನ್ ಹಾಗೂ ಸ್ಕಾಟ್ಲೆಂಡ್ ನಡುವಿನ ಏಕದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಯುವ ವೇಗಿ ಚಾರ್ಲಿ ಕ್ಯಾಸಲ್ ತಮ್ಮ ಮಾರಕ ಬೌಲಿಂಗ್ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಯಾವೊಬ್ಬ ಬೌಲರ್​ಗೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಪದಾರ್ಪಣೆ ಪಂದ್ಯದಲ್ಲಿ ಕೇವಲ 5.4 ಓವರ್​ಗಳನ್ನು ಬೌಲ್ ಮಾಡಿದ ಚಾರ್ಲಿ, ಒಂದು ಮೇಡನ್ ಓವರ್ ಸೇರಿದಂತೆ ಕೇವಲ 21 ರನ್ ನೀಡಿ ಬರೋಬ್ಬರಿ 7 ವಿಕೆಟ್ ಕಬಳಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚಾರ್ಲಿ ಕ್ಯಾಸಲ್​ಗೂ ಮುನ್ನ ವಿಶ್ವದ ಯಾವೊಬ್ಬ ಬೌಲರ್​ಗೂ ತಮ್ಮ ಚೊಚ್ಚಲ ಪಂದ್ಯದಲ್ಲಿ ಇಷ್ಟು ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ.

ರಬಾಡ ದಾಖಲೆ ಉಡೀಸ್

ಚಾರ್ಲಿಗೂ ಮುನ್ನ ಈ ದಾಖಲೆ ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಾಡ ಅವರ ಹೆಸರಿನಲ್ಲಿತ್ತು. ರಬಾಡ ತಮ್ಮ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯದಲ್ಲಿ 2015 ರಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಕೇವಲ 16 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಇದೀಗ ಆ ದಾಖಲೆಯನ್ನು ಸ್ಕಾಟ್ಲೆಂಡ್​ನ ಚಾರ್ಲಿ ಕ್ಯಾಸಲ್ ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

7 ವಿಕೆಟ್ ಪಡೆದ ಚಾರ್ಲಿ

ಇದರ ಜೊತೆಗೆ ಚಾರ್ಲಿ ಕ್ಯಾಸಲ್ ತೆಗೆದ 7 ವಿಕೆಟ್​ಗಳಲ್ಲಿ ಮೊದಲ ಎರಡು ವಿಕೆಟ್​ಗಳು ಅವರು ಬೌಲ್ ಮಾಡಿದ ಮೊದಲ ಓವರ್​ನ ಮೊದಲ ಎರಡು ಎಸೆತಗಳಲ್ಲೇ ಬಂದವು. ಇದರೊಂದಿಗೆ ತಾನು ಬೌಲ್ ಮಾಡಿದ ಚೊಚ್ಚಲ ಪಂದ್ಯದ ಚೊಚ್ಚಲ ಓವರ್​ನ ಮೊದಲ ಎರಡು ಎಸೆತಗಳಲ್ಲಿ ಸತತ ಎರಡು ವಿಕೆಟ್​ಗಳನ್ನು ಉರುಳಿಸಿದ ವಿಶ್ವದ ಮೊದಲ ಬೌಲರ್ ಎಂಬ ದಾಖಲೆಯನ್ನು ಚಾರ್ಲಿ ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ಹಾಗೆಯೇ ಚೊಚ್ಚಲ ಪಂದ್ಯದ ಮೊದಲ ಓವರ್​ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದ 32ನೇ ಬೌಲರ್​ ಎನಿಸಿಕೊಂಡಿದ್ದಾರೆ. ಚಾರ್ಲಿ ಕ್ಯಾಸಲ್​ಗೂ ಮುನ್ನ ಈ ಸಾಧನೆಯನ್ನು ವಿಶ್ವದ 31 ಬೌಲರ್​ಗಳು ಮಾಡಿದ್ದರು.

ಇದಲ್ಲದೆ ಮೊದಲ ಓವರ್​ನಲ್ಲಿ ಚಾರ್ಲಿ ಸತತ ಎರಡು ಎಸೆತಗಳಲ್ಲಿ 2 ವಿಕೆಟ್​ಗಳನ್ನು ಪಡೆದಿದಲ್ಲದೆ ಅದೇ ಓವರ್​ನಲ್ಲಿ ಮತ್ತೊಂದು ವಿಕೆಟ್ ಕೂಡ ಕಬಳಿಸಿದರು. ಜೊತೆಗೆ ಈ ಓವರ್​ ಮೇಡನ್ ಕೂಡ ಆಗಿತ್ತು. ಈ ಮೂಲಕ ಚಾರ್ಲಿ ಮೊದಲ ಓವರ್​ನಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಯಾವುದೇ ರನ್ ನೀಡಿದ ಮೊದಲ ಬೌಲರ್ ಎನಿಸಿಕೊಂಡರು. ವಾಸ್ತವವಾಗಿ ಒಮಾನ್ ವಿರುದ್ಧದ ಪಂದ್ಯಕ್ಕೆ ಚಾರ್ಲಿ ಕ್ಯಾಸಲ್ ಮೊದಲು ತಂಡದಲ್ಲಿ ಆಯ್ಕೆಯಾಗಿರಲಿಲ್ಲ. ಆದರೆ ತಂಡದಲ್ಲಿ ಆಯ್ಕೆಯಾಗಿದ್ದ ಮತ್ತೊಬ್ಬ ವೇಗಿ ಕ್ರಿಸ್ ಸೋಲ್ ಇಂಜುರಿಗೊಂಡಿದ್ದರಿಂದ ಚಾರ್ಲಿ ಕ್ಯಾಸಲ್​ಗೆ ತಂಡದಲ್ಲಿ ಆಡುವ ಅವಕಾಶ ಸಿಕ್ಕಿತ್ತು. ಇದೀಗ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿರುವ ಚಾರ್ಲಿ, ವಿಶ್ವದಾಖಲೆ ನಿರ್ಮಿಸಿದ್ದಾರೆ.

ಪಂದ್ಯ ಹೀಗಿದೆ

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ.. ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡ ಚಾರ್ಲಿ ಕ್ಯಾಸಲ್ ದಾಳಿಗೆ ನಲುಗಿ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ ಕೇವಲ 21.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 90 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿರುವ ಸ್ಕಾಟ್ಲೆಂಡ್ ಕೂಡ ಆರಂಭಿಕ ಆಘಾತ ಎದುರಿಸಿದ್ದು, ಈ ಸುದ್ದಿ ಬರೆಯುವ ಹೊತ್ತಿಗೆ 2 ವಿಕೆಟ್ ಕಳೆದುಕೊಂಡು 73 ರನ್ ಕಲೆಹಾಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Mon, 22 July 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ