AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ‘ಪಾಪ ಬಡ ತಂಡ’; ಆರ್​ಸಿಬಿಯನ್ನು ಗೇಲಿ ಮಾಡಿದ ವೀರೇಂದ್ರ ಸೆಹ್ವಾಗ್

Virender Sehwag Calls RCB a "Poor" Team: ವೀರೇಂದ್ರ ಸೆಹ್ವಾಗ್ ಅವರು ಐಪಿಎಲ್ 2025 ಕಾರ್ಯಕ್ರಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು "ಬಡ" ತಂಡ ಎಂದು ಕರೆದಿದ್ದಾರೆ. ಇದು ಆರ್‌ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಸೆಹ್ವಾಗ್ ಅವರು ಟ್ರೋಫಿ ಗೆಲ್ಲದಿರುವುದನ್ನು ಆಧರಿಸಿ ಈ ಹೇಳಿಕೆ ನೀಡಿದ್ದಾರೆ. ಆದರೆ ಆರ್‌ಸಿಬಿ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಚಾಂಪಿಯನ್ ಆಗುವ ಸಾಧ್ಯತೆಯಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

IPL 2025: ‘ಪಾಪ ಬಡ ತಂಡ’; ಆರ್​ಸಿಬಿಯನ್ನು ಗೇಲಿ ಮಾಡಿದ ವೀರೇಂದ್ರ ಸೆಹ್ವಾಗ್
Rcb
Follow us
TV9 Web
| Updated By: ಪೃಥ್ವಿಶಂಕರ

Updated on:Apr 01, 2025 | 8:17 PM

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ (Virender Sehwag) ತಮ್ಮ ಕುಚೇಷ್ಟೇಯ ಹೇಳಿಕೆಗಳಿಂದಲೇ ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿರುತ್ತಾರೆ. ಇದೀಗ ಅಂತಹದ್ದೇ ಹೇಳಿಕೆ ನೀಡಿರುವ ಸಿಡಿಲಮರಿ ಖ್ಯಾತಿಯ ವೀರೇಂದ್ರ ಸೆಹ್ವಾಗ್ ಆರ್​ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಐಪಿಎಲ್ 2025ಕ್ಕೆ (IPL 2025) ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸೆಹ್ವಾಗ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಕಳಪೆ ಎಂದು ಕರೆದಿದ್ದಾರೆ. ವೀರೇಂದ್ರ ಸೆಹ್ವಾಗ್ ಲೈವ್ ಕಾರ್ಯಕ್ರಮದಲ್ಲಿ ಆರ್‌ಸಿಬಿ ತಂಡವನ್ನು ಅಣಕಿಸಿ ಕಳಪೆ ತಂಡಕ್ಕೆ ಹೋಲಿಸಿದ್ದಾರೆ. ಇದೀಗ ಸೆಹ್ವಾಗ್ ಅವರ ಈ ರೀತಿಯ ಹೇಳಿಕೆಯೂ ಅಸಂಖ್ಯಾತ ಆರ್​ಸಿಬಿ ಅಭಿಮಾನಿಗಳು ಕೆರಳುವಂತೆ ಮಾಡಿದೆ.

ಆರ್‌ಸಿಬಿಯನ್ನು ಕಳಪೆ ಎಂದ ಸೆಹ್ವಾಗ್

ಕ್ರಿಕ್‌ಬಜ್ ಕಾರ್ಯಕ್ರಮದಲ್ಲಿ ಐಪಿಎಲ್ 2025 ರ ಪಾಯಿಂಟ್ ಟೇಬಲ್ ಕುರಿತು ಕಾಮೆಂಟ್ ಮಾಡುವ ಸಂದರ್ಭದಲ್ಲಿ ಸೆಹ್ವಾಗ್, ‘ಬಡ ತಂಡ ಸ್ವಲ್ಪ ಸಮಯದವರೆಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರಲಿ ಬಿಡಿ, ಈ ಬಡ ತಂಡ ಎಷ್ಟು ಕಾಲ ಮೇಲಿರುತ್ತಾರೆಂದು ಯಾರಿಗೂ ತಿಳಿದಿಲ್ಲ. ನಾನು ಹಣದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಈ ಎಲ್ಲಾ ತಂಡಗಳು ತುಂಬಾ ಶ್ರೀಮಂತವಾಗಿವೆ. ಪ್ರತಿಯೊಂದು ತಂಡವು ಒಂದು ಸೀಸನ್​ನಲ್ಲಿ 400-500 ಕೋಟಿ ರೂ. ಗಳಿಸುತ್ತದೆ. ನಾನು ಅದರ ಬಗ್ಗೆ ಮಾತನಾಡುತ್ತಿಲ್ಲ. ನಾನು ಇಲ್ಲಿ ಒಂದೇ ಒಂದು ಟ್ರೋಫಿಯನ್ನು ಗೆಲ್ಲದಿರುವ ಬಗ್ಗೆ ಮಾತನಾಡುತ್ತಿದ್ದೇನೆ. ಅದಕ್ಕಾಗಿಯೇ ನಾನು ಆರ್‌ಸಿಬಿಯನ್ನು ಬಡ ತಂಡ ಎಂದು ಕರೆಯುತ್ತಿದ್ದೇನೆ ಎಂದಿದ್ದಾರೆ.

Bengaluru Traffic Advisory: ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯ; ಪಾರ್ಕಿಂಗ್ ವಿವರ, ಸಂಚಾರ ಸಲಹೆ ಇಲ್ಲಿದೆ

ಇದನ್ನೂ ಓದಿ
Image
ಸೋಶೀಯಲ್ ಮೀಡಿಯಾದಲ್ಲೂ ಆರ್​ಸಿಬಿಯೇ ನಂ.1..!
Image
ಬೆಂಗಳೂರಿನಲ್ಲಿ ಆರ್​ಸಿಬಿಯ ಮುಂದಿನ ಪಂದ್ಯ; ಎದುರಾಳಿ ಯಾರು?
Image
ಪಂದ್ಯದ ವೇಳೆ ಖಲೀಲ್ ಅಧಿಕಪ್ರಸಂಗತನ; ವಾರ್ನಿಂಗ್ ಕೊಟ್ಟ ಕೊಹ್ಲಿ
Image
ಆರ್​ಸಿಬಿ ಆಟಗಾರನನ್ನು ಗೇಲಿ ಮಾಡಿದ ಸಿಎಸ್​ಕೆ; ವೈರಲ್ ವಿಡಿಯೋ

ಆರ್‌ಸಿಬಿ ಐಪಿಎಲ್ ಗೆದ್ದಿಲ್ಲ

ಆರ್‌ಸಿಬಿ ಐಪಿಎಲ್‌ನಲ್ಲಿ ಅತ್ಯಂತ ಜನಪ್ರಿಯ ತಂಡವಾಗಿರಬಹುದು ಆದರೆ ಈ ಫ್ರಾಂಚೈಸಿ ಇನ್ನೂ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ ಎಂಬುದು ನಿಜ. ಆದರೆ, ಈ ಬಾರಿ ಈ ತಂಡ ವಿಭಿನ್ನ ಶೈಲಿಯಲ್ಲಿ ಕ್ರಿಕೆಟ್ ಆಡುತ್ತಿದೆ. ಮೊದಲ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಬ್ಯಾಟಿಂಗ್‌ಗಿಂತ ಬೌಲಿಂಗ್‌ನಲ್ಲಿಯೇ ಹೆಚ್ಚು ಮೇಲುಗೈ ಸಾಧಿಸಿದ್ದು, ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಹೊಸ ನಾಯಕ ರಜತ್ ಪಾಟಿದಾರ್ ಮತ್ತು ವಿರಾಟ್ ಕೊಹ್ಲಿ ತುಂಬಾ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಫಿಲ್ ಸಾಲ್ಟ್ ಕೂಡ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಟಿಮ್ ಡೇವಿಡ್ ಕೂಡ ಉತ್ತಮ ಫಾರ್ಮ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಸೀಸನ್​ನಲ್ಲಿ ಆರ್‌ಸಿಬಿ ಐಪಿಎಲ್ ಚಾಂಪಿಯನ್ ಆಗಲು ಉತ್ತಮ ಅವಕಾಶವನ್ನು ಹೊಂದಿದೆ. ಒಂದು ವೇಳೆ ಆರ್‌ಸಿಬಿ ಚಾಂಪಿಯನ್ ಆದರೆ ಸೆಹ್ವಾಗ್ ಈ ತಂಡವನ್ನು ಕಳಪೆ ಎಂದು ಕರೆಯುತ್ತಾರೋ ಇಲ್ಲವೋ ಎಂದು ನೋಡಲು ಆಸಕ್ತಿದಾಯಕವಾಗಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 pm, Tue, 1 April 25

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್