ಟಿ20 ವಿಶ್ವಕಪ್ (T20 World Cup 2021) ಶುರುವಾಗಿದೆ. ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 23 ರಿಂದ ಸೂಪರ್ 12 ಪಂದ್ಯಗಳು ಆರಂಭವಾಗಲಿದೆ. ಇನ್ನು ಅಕ್ಟೋಬರ್ 24 ರಂದು ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯೋದು ಯಾರು ಎಂಬುದು ಈಗ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಈ ವರ್ಷದ ಮಾರ್ಚ್‌ನಲ್ಲಿ ನಡೆದ ಇಂಗ್ಲೆಂಡ್ ಸರಣಿಯಲ್ಲಿ, ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಜೊತೆ ಓಪನ್ ಮಾಡುವುದಾಗಿ ತಿಳಿಸಿದ್ದರು. ಇದೇ ಕಾರಣದಿಂದ ಕೊಹ್ಲಿ ಐಪಿಎಲ್‌ನಲ್ಲಿ ದೇವದತ್ ಪಡಿಕ್ಕಲ್‌ನೊಂದಿಗೆ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಟಿ20 ವಿಶ್ವಕಪ್‌ನಲ್ಲಿ ಅಪ್ಪಿ ತಪ್ಪಿಯೂ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಬಾರದು ಎಂದಿದ್ದಾರೆ ಭಾರತ ತಂಡ ಮಾಜಿ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹ್ವಾಗ್.
ನನ್ನ ಪ್ರಕಾರ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಬೇಕು. ನಾನೇನಾದರೂ ಟೀಮ್ ಇಂಡಿಯಾ ಸಹಾಯಕ ಸಿಬ್ಬಂದಿಯಲ್ಲಿದಿದ್ದರೆ, ಕ್ಯಾಪ್ಟನ್ಗೆ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಹೇಳುತ್ತಿದ್ದೆ. ಅಷ್ಟೇ ಅಲ್ಲದೆ ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಅವರನ್ನು ಆರಂಭಿಕನಾಗಿ ಆಯ್ಕೆ ಮಾಡುತ್ತಿದ್ದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ.
ಪಂಜಾಬ್ ಕಿಂಗ್ಸ್ ಪರ ರಾಹುಲ್ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ನನ್ನ ಪ್ರಕಾರ ರೋಹಿತ್-ರಾಹುಲ್ ಓಪನರ್ಗಳಾಗುವುದು ಉತ್ತಮ ಎಂದು ಸೆಹ್ವಾಗ್ ಹೇಳಿದ್ದಾರೆ. ಕೊಹ್ಲಿಗೆ ಮೂರನೇ ಸ್ಥಾನದಲ್ಲಿ ಆಡಬೇಕು ಎಂದು ಹೇಳುವವರು ಯಾರೂ ಇಲ್ಲ ಎಂದು ನಾನು ಭಾವಿಸುವುದಿಲ್ಲ. ಬಿಗ್ ಕ್ಯಾಪ್ಟನ್ಸ್ ಎನಿಸಿಕೊಂಡಿರುವ ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಅಥವಾ ಧೋನಿ ಇವರಲ್ಲಿ 2-3 ಮಂದಿ ಹೇಳಿದ್ರೂ ಕೊಹ್ಲಿ ಕೇಳ್ತಾರೆ ಎಂದು ಸೆಹ್ವಾಗ್ ತಿಳಿಸಿದರು.
ಭಾರತದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಪ್ರಕಾರ ಕೆಎಲ್ ರಾಹುಲ್ ಅವರು ಉತ್ತಮ ಫಾರ್ಮ್ನಲ್ಲಿದ್ದು, ಹೀಗಾಗಿ ರೋಹಿತ್ ಜೊತೆ ರಾಹುಲ್ ಓಪನ್ ಮಾಡಬೇಕು. ಏಕೆಂದರೆ ರಾಹುಲ್ ಪಂಜಾಬ್ ಕಿಂಗ್ಸ್ ಪರ 13 ಪಂದ್ಯಗಳಲ್ಲಿ 626 ರನ್ ಗಳಿಸಿದ್ದಾರೆ. ಹೀಗಾಗಿ ಈ ಅದ್ಭುತ ಫಾರ್ಮ್ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದಿದ್ದಾರೆ.
ಇದನ್ನೂ ಓದಿ: 1985 ರಿಂದ 2021: 25 ಕ್ಕೂ ಹೆಚ್ಚು ಬಾರಿ ಬದಲಾದ ಟೀಮ್ ಇಂಡಿಯಾ ಜೆರ್ಸಿ
ಇದನ್ನೂ ಓದಿ: IPL 2021: ಈ ಬಾರಿಯ ಐಪಿಎಲ್‌ನಲ್ಲಿ ಕಾರು ಸಿಕ್ಕಿದ್ದು ಯಾರಿಗೆ ಗೊತ್ತಾ?
ಇದನ್ನೂ ಓದಿ: IPL 2021 award winners: ಯಾರಿಗೆ ಯಾವ ಪ್ರಶಸ್ತಿ: ಇಲ್ಲಿದೆ ಸಂಪೂರ್ಣ ಪಟ್ಟಿ
(sehwag names india batsman who should open with rohit sharma at t20 wc)