AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಓವರ್​ಗಳಲ್ಲಿ 564 ರನ್​: 477 ರನ್​ಗಳ ಅಮೋಘ ಜಯ

Selangor vs Putrajaya: ಮಲೇಷ್ಯಾದ ರಾಜ್ಯ ತಂಡಗಳ ಅಂಡರ್-19 ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಗರಿಷ್ಠ ಮೊತ್ತದ ದಾಖಲೆಯೊಂದಿಗೆ. ಇದರ ಜೊತೆಗೆ ಏಕದಿನ ಪಂದ್ಯದಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ಭರ್ಜರಿ ರೆಕಾರ್ಡ್​ ಕೂಡ ನಿರ್ಮಾಣವಾಗಿದೆ.

50 ಓವರ್​ಗಳಲ್ಲಿ 564 ರನ್​: 477 ರನ್​ಗಳ ಅಮೋಘ ಜಯ
ಸಾಂದರ್ಭಿಕ ಚಿತ್ರ
ಝಾಹಿರ್ ಯೂಸುಫ್
|

Updated on:Oct 06, 2025 | 11:58 AM

Share

ಏಕದಿನ ಕ್ರಿಕೆಟ್​ನಲ್ಲಿ 500 ರನ್​ಗಳಿಸಲು ಸಾಧ್ಯವೇ? ಸಾಧ್ಯ ಎಂದು ನಿರೂಪಿಸಿದ್ದಾರೆ ಸೆಲಂಗೋರ್ ಅಂಡರ್-19 ತಂಡ. ಮಲೇಷ್ಯಾದ ಅಂಡರ್-19 ಏಕದಿನ ಟೂರ್ನಿಯಲ್ಲಿ ಸೆಲಂಗೋರ್ ಹಾಗೂ ಪುತ್ರಜಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೆಲಂಗೋರ್ ತಂಡವು 50 ಓವರ್​ಗಳಲ್ಲಿ ಬರೋಬ್ಬರಿ 564 ರನ್ ಕಲೆಹಾಕಿದ್ದಾರೆ.

ಪಂದ್ಯದ ಮೊದಲ ಓವರ್​ನಿಂದಲೇ ಪುತ್ರಜಯ ತಂಡದ ಬೌಲರ್​ಗಳ ವಿರುದ್ಧ ಸೆಲಂಗೋರ್ ದಾಂಡಿಗರು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಮುಖ್ಯವಾಗಿ ಮುಹಮ್ಮದ್ ಅಕ್ರಮ್ ವಿಸ್ಫೋಟಕ ಇನಿಂಗ್ಸ್ ಆಡಿದ್ದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಅಕ್ರಮ್ ಪುತ್ರಜಯ ಬೌಲರ್​ಗಳ ಬೆಂಡೆತ್ತಿದರು. ಅಲ್ಲದೆ ಕೇವಲ 97 ಎಸೆತಗಳಲ್ಲಿ ಬರೋಬ್ಬರಿ 217 ರನ್​ಗಳ ಇನಿಂಗ್ಸ್ ಆಡಿದರು. ಈ ದ್ವಿಶತಕದ ನೆರವಿನೊಂದಿಗೆ ಸೆಲಂಗೋರ್ ತಂಡವು 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 564 ರನ್ ಕಲೆಹಾಕಿತು.

ಮುಹಮ್ಮದ್ ಅಕ್ರಮ್:

477 ರನ್​ಗಳ ಭರ್ಜರಿ ಜಯ:

ಸೆಲಂಗೋರ್ ತಂಡ ನೀಡಿದ 565 ರನ್​ಗಳ ಗುರಿ ಬೆನ್ನತ್ತಿದ ಪುತ್ರಜಯ ತಂಡದ ಬ್ಯಾಟರ್​ಗಳು ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು. ಪರಿಣಾಮ 21.5 ಓವರ್​ಗಳಲ್ಲಿ ಕೇವಲ 87 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಸೆಲಂಗೋರ್ ತಂಡವು ಬರೋಬ್ಬರಿ 477 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಗೆಲುವಿನೊಂದಿಗೆ ಸೆಲಂಗೋರ್ ತಂಡವು ಮಲೇಷ್ಯಾ ರಾಜ್ಯ ಅಂಡರ್-19 ಟೂರ್ನಿಯಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

ಇದನ್ನೂ ಓದಿ: ೪೦೦ ರನ್ಸ್… ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ವಿಶ್ವ ದಾಖಲೆ

ಹಾಗೆಯೇ ಮಲೇಷ್ಯಾ ಅಂಡರ್-19 ಏಕದಿನ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ತಂಡವೆಂಬ ಭರ್ಜರಿ ದಾಖಲೆಯನ್ನು ಸಹ ನಿರ್ಮಿಸಿದೆ.

Published On - 11:58 am, Mon, 6 October 25

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು