AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​​ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿ, ಪಾಕ್ ಪರ ಘೋಷಣೆ ಕೂಗಿದ್ದ 7 ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

ICC World Cup 2023: ದೂರುದಾರರ ಪ್ರಕಾರ, ಆರೋಪಿ ವಿದ್ಯಾರ್ಥಿಗಳು, ಟೀಂ ಇಂಡಿಯಾವನ್ನು ಬೆಂಬಲಿಸಿದಕ್ಕಾಗಿ ನಮ್ಮನ್ನು ನಿಂದಿಸಿ, ಕಿರುಕುಳ ನೀಡಿದ್ದಾರೆ. ಅಲ್ಲದೆ ಆರೋಪಿ ವಿದ್ಯಾರ್ಥಿಗಳು ನಮ್ಮ ಮೇಲೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಶ್ವಕಪ್​​ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿ, ಪಾಕ್ ಪರ ಘೋಷಣೆ ಕೂಗಿದ್ದ 7 ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Nov 28, 2023 | 3:34 PM

Share

ನವೆಂಬರ್ 19 ರಂದು ನಡೆದಿದ್ದ ಏಕದಿನ ವಿಶ್ವಕಪ್​ನ  (ODI World Cup 2023) ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತದ (India vs Australia) ಸೋಲನ್ನು ಸಂಭ್ರಮಿಸಿದ್ದ ಹಾಗೂ ಇದೇ ವೇಳೆ ಪಾಕಿಸ್ತಾನದ (Pakistan) ಪರ ಘೋಷಣೆ ಕೂಗಿದ ಆರೋಪದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಗುಂಡು ಹಾರಿಸುವುದಾಗಿ ಬೆದರಿಕೆ

ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ಸುದ್ದಿ ಪ್ರಕಾರ, ಶೇರ್-ಎ-ಕಾಶ್ಮೀರ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೂರುದಾರರ ಪ್ರಕಾರ, ಆರೋಪಿ ವಿದ್ಯಾರ್ಥಿಗಳು, ಟೀಂ ಇಂಡಿಯಾವನ್ನು ಬೆಂಬಲಿಸಿದಕ್ಕಾಗಿ ನಮ್ಮನ್ನು ನಿಂದಿಸಿ, ಕಿರುಕುಳ ನೀಡಿದ್ದಾರೆ. ಅಲ್ಲದೆ ಆರೋಪಿ ವಿದ್ಯಾರ್ಥಿಗಳು ನಮ್ಮ ಮೇಲೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೊರಗಿನ ವಿದ್ಯಾರ್ಥಿಗಳಲ್ಲಿ ಭಯ ಸೃಷ್ಟಿಯಾಗಿದೆ ಎಂದೂ ದೂರುದಾರರು ಆರೋಪಿಸಿದ್ದಾರೆ.

ಭಾರತದ ವಿರುದ್ಧ ಸತತ 2 ಸೋಲು; ಟಿ20 ಸರಣಿಯಿಂದಲೇ ಹೊರಬಿದ್ದ ಆಸ್ಟ್ರೇಲಿಯಾದ 6 ಆಟಗಾರರು..!

ವರದಿಯ ಪ್ರಕಾರ, ದೂರಿನನ್ವಯ ಪೊಲೀಸರು ಈ ಬಗ್ಗೆ ಈಗಾಗಲೇ ತನಿಖೆ ಪ್ರಾರಂಭಿಸಿದ್ದು, ಶ್ರೀನಗರದ ಗಂದರ್‌ಬಾಲ್ ಪೊಲೀಸ್ ಠಾಣೆಯಲ್ಲಿ ಯುಎಪಿಎ ಸೆಕ್ಷನ್ 13 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ವಿಶ್ವವಿದ್ಯಾಲಯದ ಅಧಿಕಾರಿ ಹೇಳಿದ್ದೇನು?

ಈ ವಿಷಯಕ್ಕೆ ಸಂಬಂಧಿಸಿದಂತೆ ಪಶುವೈದ್ಯಕೀಯ ವಿಜ್ಞಾನದ ಬ್ಯಾಚುಲರ್ ಅಧಿಕಾರಿಯೊಬ್ಬರು ಮಾತನಾಡಿದ್ದು, ಹಾಸ್ಟೆಲ್‌ನಲ್ಲಿ ಸುಮಾರು 300 ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಅವರಲ್ಲಿ 30 ರಿಂದ 40 ವಿದ್ಯಾರ್ಥಿಗಳು ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಿಂದ ಬಂದವರಾಗಿದ್ದಾರೆ. ನವೆಂಬರ್ 19 ರಂದು ರಾತ್ರಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು. ಬಳಿಕ ಕಾಶ್ಮೀರದ ಹೊರಗಿನ ವಿದ್ಯಾರ್ಥಿಗಳು, ಸ್ಥಳೀಯ ವಿದ್ಯಾರ್ಥಿಗಳು ಭಾರತದ ಸೋಲನ್ನು ಸಂಭ್ರಮಿಸಿದ್ದಲ್ಲದೆ ನಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳೇ ನೇರವಾಗಿ ಪೊಲೀಸರ ಮೊರೆ ಹೋಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರು ಯಾವುದಾದರೂ ಸಾಕ್ಷ್ಯವನ್ನು ನೀಡಿದ್ದಾರೋ ಇಲ್ಲವೋ ಎಂಬುದು ಪೊಲೀಸರಿಗೆ ಮಾತ್ರ ತಿಳಿದಿದೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:31 pm, Tue, 28 November 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!