
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಈಗಾಗಲೇ 13 ಟೀಮ್ಗಳು ಫೈನಲ್ ಆಗಿವೆ. ಇನ್ನುಳಿದ 7 ಸ್ಥಾನಗಳಿಗಾಗಿ 22 ತಂಡಗಳ ನಡುವೆ ಪೈಪೋಟಿ ಇದೆ. ಈ ಇಪ್ಪೆತ್ತರಡು ತಂಡಗಳಲ್ಲಿ ಏಳು ಟೀಮ್ಗಳು ಮಾತ್ರ ಮುಂಬರುವ ಟಿ20 ವಿಶ್ವಕಪ್ಗೆ ಅರ್ಹತೆ ಪಡೆಯಲಿದೆ.
ಆಫ್ರಿಕಾ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 8 ತಂಡಗಳಲ್ಲಿ ಕೇವಲ ಎರಡು ಟೀಮ್ಗಳು ಮಾತ್ರ ಮುಂಬರುವ ಟಿ20 ವಿಶ್ವಕಪ್ಗೆ ಅರ್ಹತೆ ಪಡೆಯಲಿದೆ.
ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 9 ತಂಡಗಳಲ್ಲಿ ಮೂರು ತಂಡಗಳಿಗೆ ಮುಂಬರುವ ಟಿ20 ವಿಶ್ವಕಪ್ ಆಡುವ ಅವಕಾಶವಿದೆ. ಹೀಗಾಗಿ ಈ 9 ತಂಡಗಳಲ್ಲಿ ಮೂರು ಟೀಮ್ಗಳು ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲಿದೆ.
ಯುರೋಪ್ ಪ್ರಾದೇಶಿ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿಯಲಿರುವ 5 ತಂಡಗಳಲ್ಲಿ 2 ಟೀಮ್ಗಳು ಟಿ20 ವಿಶ್ವಕಪ್ 2026 ರಲ್ಲಿ ಕಾಣಿಸಿಕೊಳ್ಳಲಿದೆ. ಈ ಐದು ಟೀಮ್ಗಳಲ್ಲಿ ನೆದರ್ಲೆಂಡ್ಸ್ ಹಾಗೂ ಸ್ಕಾಟ್ಲೆಂಡ್ ತಂಡಗಳು ಬಲಿಷ್ಠವಾಗಿರುವುದರಿಂದ ಈ ಎರಡು ಟೀಮ್ಗಳನ್ನು ಸಹ ಮುಂಬರುವ ವಿಶ್ವಕಪ್ನಲ್ಲಿ ನಿರೀಕ್ಷಿಸಬಹುದು.
ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್ 2026 ಫೆಬ್ರವರಿ 10 ರಿಂದ ಶುರುವಾಗಲಿದೆ. ಈ ಟೂರ್ನಿಯ ಉದ್ಘಾಟನಾ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮೊದಲ ಮ್ಯಾಚ್ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ಕಣಕ್ಕಿಳಿಯುವ ಸಾಧ್ಯತೆಯಿದೆ.
ಇದನ್ನೂ ಓದಿ: IPL 2026: ಚೆನ್ನೈ ಸೂಪರ್ ಕಿಂಗ್ಸ್ಗೆ ಸಂಜು ಸ್ಯಾಮ್ಸನ್?
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯವು ಫೆಬ್ರವರಿ 27 ರಂದು ನಡೆಯುವ ಸಾಧ್ಯತೆಯಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 12 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಥವಾ ಕೊಲಂಬೊದಲ್ಲಿ ಆಯೋಜಿಸಲಿದ್ದಾರೆ.