AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಶಫಾಲಿ, ದೀಪ್ತಿ ಅರ್ಧಶತಕ; ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ

*Women's World Cup 2025 Final: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025 ರ ಮಹಿಳಾ ವಿಶ್ವಕಪ್ ಅಂತಿಮ ಪಂದ್ಯದಲ್ಲಿ, ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಶಫಾಲಿ ವರ್ಮಾ ಮತ್ತು ದೀಪ್ತಿ ಶರ್ಮಾ ಅವರ ಅರ್ಧಶತಕಗಳ ನೆರವಿನಿಂದ 7 ವಿಕೆಟ್‌ಗೆ 288 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 289 ರನ್‌ಗಳ ಸವಾಲಿನ ಗುರಿ ನೀಡಿದೆ.

World Cup 2025: ಶಫಾಲಿ, ದೀಪ್ತಿ ಅರ್ಧಶತಕ; ಆಫ್ರಿಕಾಗೆ ಸವಾಲಿನ ಗುರಿ ನೀಡಿದ ಭಾರತ
India Womens
ಪೃಥ್ವಿಶಂಕರ
|

Updated on:Nov 02, 2025 | 8:53 PM

Share

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 2025 ರ ಮಹಿಳಾ ವಿಶ್ವಕಪ್‌ನ (Women’s World Cup 2025) ಅಂತಿಮ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ತಂಡಕ್ಕೆ 299 ರನ್​ಗಳ ಗುರಿ ನೀಡಿದೆ. ಟೀಂ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ಶಫಾಲಿ ವರ್ಮಾ ಹಾಗೂ ದೀಪ್ತಿ ಶರ್ಮಾ ತಲಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.

ಭಾರತಕ್ಕೆ ಉತ್ತಮ ಆರಂಭ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಮೊದಲ ವಿಕೆಟ್​ಗೆ ಆರಂಭಿಕರಾದ ಸ್ಮೃತಿ ಹಾಗೂ ಶಫಾಲಿ 105 ರನ್​ಗಳ ಜತೆಯಾಟ ನೀಡಿದರು. ಈ ವೇಳೆ ಸ್ಮೃತಿ 45 ರನ್ ಬಾರಿಸಿ ಔಟಾಗುವ ಮೂಲಕ ಈ ಜೊತೆಯಾಟ ಮುರಿದುಬಿತ್ತು. ಸೆಮಿಫೈನಲ್​ನಲ್ಲಿ ಶತಕ ಬಾರಿಸಿದ್ದ ಜೆಮಿಮಾ, ಫೈನಲ್ ಪಂದ್ಯದಲ್ಲಿ 24 ರನ್ ಕಲೆಹಾಕಲಷ್ಟೇ ಶಕ್ತರಾದರು.

ಕುಸಿದ ಮಧ್ಯಮ ಕ್ರಮಾಂಕ

ಒಂದು ಹಂತದಲ್ಲಿ ಭಾರತ ತಂಡವು 350 ರನ್‌ಗಳನ್ನು ತಲುಪುತ್ತದೆ ಎಂದು ತೋರುತ್ತಿತ್ತು, ಆದರೆ ಮಧ್ಯಮ ಕ್ರಮಾಂಕದ ಕುಸಿತ ಮತ್ತು ನಿಧಾನಗತಿಯ ಬ್ಯಾಟಿಂಗ್​ನಿಂದ ತಂಡ 300 ರನ್‌ಗಳ ಹತ್ತಿರ ತಲುಪುವಲ್ಲಿ ಮಾತ್ರ ಯಶಸ್ವಿಯಾಯಿತು. ಇದು ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಎರಡನೇ ಅತ್ಯಧಿಕ ಸ್ಕೋರ್ ಮತ್ತು ವಿಶ್ವಕಪ್ ಫೈನಲ್‌ನಲ್ಲಿ ಭಾರತದ ಅತ್ಯಧಿಕ ಸ್ಕೋರ್ ಆಗಿದೆ. 2022 ರ ವಿಶ್ವಕಪ್ ಫೈನಲ್‌ನಲ್ಲಿ ಐದು ವಿಕೆಟ್‌ಗೆ 356 ರನ್ ಗಳಿಸಿರುವ ಆಸ್ಟ್ರೇಲಿಯಾ ಈ ವಿಷಯದಲ್ಲಿ ಅಗ್ರಸ್ಥಾನದಲ್ಲಿದೆ. ಆದಾಗ್ಯೂ, ದಕ್ಷಿಣ ಆಫ್ರಿಕಾ ದಾಖಲೆಯನ್ನು ಬೆನ್ನಟ್ಟಬೇಕಾಗುತ್ತದೆ. ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಇದುವರೆಗೆ ಇಷ್ಟು ದೊಡ್ಡ ಸ್ಕೋರ್ ಅನ್ನು ಬೆನ್ನಟ್ಟಲಾಗಿಲ್ಲ ಎಂಬುದು ಟೀಂ ಇಂಡಿಯಾಕ್ಕೆ ಸಮಾಧಾನಕರ ಸುದ್ದಿಯಾಗಿದೆ.

World Cup 2025: ವಿಶ್ವಕಪ್​ನಲ್ಲಿ ಮಾಜಿ ನಾಯಕಿಯ ದಾಖಲೆ ಮುರಿದ ಸ್ಮೃತಿ ಮಂಧಾನ

ಶಫಾಲಿ, ದೀಪ್ತಿ ಅರ್ಧಶತಕ

ಉಳಿದಂತೆ ಭಾರತದ ಪರ ದೀಪ್ತಿ ಶರ್ಮಾ 58 ರನ್ ಗಳಿಸಿದರೆ, ಶಫಾಲಿ 87 ರನ್ ಬಾರಿಸಿದರು. ಸ್ಮೃತಿ ಮಂಧಾನ ಕೂಡ 45 ರನ್ ಗಳಿಸಿದರು. ಉಳಿದಂತೆ ರಿಚಾ ಘೋಷ್ 24 ಎಸೆತಗಳಲ್ಲಿ 34 ರನ್​ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರೆ, ಜೆಮಿಮಾ ರೊಡ್ರಿಗಸ್ 24 ರನ್ ಮತ್ತು ನಾಯಕಿ ಹರ್ಮನ್ಪ್ರೀತ್ ಕೌರ್ 20 ರನ್ ಗಳಿಸಿ ಔಟಾದರು. ಅಮಂಜೋತ್ ಕೌರ್ 12 ರನ್​ಗಳ ಕಾಣಿಕೆ ನೀಡಿದರು. ದಕ್ಷಿಣ ಆಫ್ರಿಕಾ ಪರ ಅಯಬೊಂಗಾ ಖಾಕಾ ಮೂರು ವಿಕೆಟ್ ಪಡೆದರೆ, ಮಲಬಾ, ಡಿ ಕ್ಲರ್ಕ್ ಮತ್ತು ಕ್ಲೋಯ್ ಟ್ರಯಾನ್ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 pm, Sun, 2 November 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!