IND vs PAK: ಜಯ್​ ಶಾಗೆ ಹೇಳಿಕೆ ಕ್ರಿಕೆಟ್​ ಆಡಳಿತದ ಅನುಭವ ಕೊರತೆಯನ್ನು ತೋರಿಸುತ್ತೆ: ಅಫ್ರಿದಿ

India vs Pakistan: ಏಷ್ಯಾಕಪ್-2023 ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಜಯ್ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು ಎಸಿಸಿ ಅಧ್ಯಕ್ಷನಾಗಿ ಇದನ್ನು ಹೇಳುತ್ತಿದ್ದೇನೆ. ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಲು ಸಾಧ್ಯವಿಲ್ಲ.

IND vs PAK: ಜಯ್​ ಶಾಗೆ ಹೇಳಿಕೆ ಕ್ರಿಕೆಟ್​ ಆಡಳಿತದ ಅನುಭವ ಕೊರತೆಯನ್ನು ತೋರಿಸುತ್ತೆ: ಅಫ್ರಿದಿ
shahid afridi - jay shah
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 19, 2022 | 3:54 PM

Asia Cup 2023: ಪಾಕಿಸ್ತಾನದಲ್ಲಿ ನಡೆಯಬೇಕಿರುವ ಏಷ್ಯಾಕಪ್​ 2023 ರನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ (Jay Shah) ನೀಡಿರುವ ಹೇಳಿಕೆಯು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯ ಬಳಿಕ ಮಾತನಾಡಿದ ಜಯ್​ ಶಾ, ಟೀಮ್ ಇಂಡಿಯಾ (Team India) ಮುಂದಿನ ವರ್ಷ ಏಷ್ಯಾಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ ಏಷ್ಯಾಕಪ್​ಅನ್ನು ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದಿದ್ದರು. ಇದೀಗ ಈ ಹೇಳಿಕೆಯು ಪಾಕ್ ತಂಡದ ಮಾಜಿ ಆಟಗಾರರ ಕಣ್ಣು ಕೆಂಪಾಗಿಸಿದೆ.

ಈಗಾಗಲೇ ಭಾರತ ತಂಡವು ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಡದಿದ್ದರೆ, ಪಾಕ್ ತಂಡವು ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್​ನಿಂದ ಹಿಂದೆ ಸರಿಯಲಿದ್ದಾರೆ ಎಂದು ವರದಿಯಾಗಿದೆ. ಇದರ ನಡುವೆ ಬಿಸಿಸಿಐ ಕಾರ್ಯದರ್ಶಿ ನೀಡಿರುವ ಹೇಳಿಕೆ ಬಗ್ಗೆ ಪಾಕ್ ತಂಡದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಕೂಡ ಆಕ್ರೋಶ ಹೊರಹಾಕಿದ್ದಾರೆ.

ಶಾ ಅವರ ಹೇಳಿಕೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅಫ್ರಿದಿ, ಬಿಸಿಸಿಐ ಕಾರ್ಯದರ್ಶಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಉಭಯ ತಂಡಗಳ ಸದಸ್ಯರು ಆಸ್ಟ್ರೇಲಿಯಾದಲ್ಲಿ ಮೈದಾನದ ಹೊರಗೆ ಉತ್ತಮ ಸೌಹಾರ್ದತೆಯನ್ನು ತೋರಿಸುತ್ತಿರುವಾಗ, ಅವರು ಇಂತಹ ಹೇಳಿಕೆಯನ್ನು ನೀಡಬಾರದಿತ್ತು ಎಂದು ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಕಳೆದ 12 ತಿಂಗಳುಗಳಲ್ಲಿ 2 ತಂಡಗಳ ನಡುವೆ ಉತ್ತಮ ಒಡನಾಟವಿದೆ. ಇದು 2 ದೇಶಗಳಲ್ಲಿನ ಜನರಲ್ಲಿ ಉತ್ತಮ ಭಾವನೆಯನ್ನು ಉಂಟುಮಾಡಿದೆ. ಆದರೆ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಕಾರ್ಯದರ್ಶಿ ಇಂತಹ ಹೇಳಿಕೆಯನ್ನು ಯಾಕಾಗಿ ನೀಡಿದ್ದಾರೆ? ಎಂದು ಶಾಹೀದ್ ಅಫ್ರಿದಿ ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೆ ಇಂತಹ ಬಾಲಿಶ ಹೇಳಿಕೆಗಳು ಭಾರತದಲ್ಲಿನ ಕ್ರಿಕೆಟ್ ಆಡಳಿತದ ಅನುಭವದ ಕೊರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ನೇರವಾಗಿ ಟೀಕೆ ಮಾಡಿದ್ದಾರೆ. ಈ ಮೂಲಕ ಜಯ್​ ಶಾ ನೀಡಿರುವ ಹೇಳಿಕೆಯನ್ನು ಪಸ್ತಾಪಿಸಿರುವ ಪಾಕ್ ಆಟಗಾರ ಪರೋಕ್ಷವಾಗಿ ಬಿಸಿಸಿಐ ಕಾರ್ಯದರ್ಶಿಗೆ ಕ್ರಿಕೆಟ್​ ಆಡಳಿತದ ಬಗ್ಗೆಗಿನ ಅನುಭವದ ಕೊರತೆ ಎದ್ದು ಕಾಣುತ್ತಿದೆ ಎಂದಿದ್ದಾರೆ.

ಏಷ್ಯಾಕಪ್-2023 ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಜಯ್ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು ಎಸಿಸಿ ಅಧ್ಯಕ್ಷನಾಗಿ ಇದನ್ನು ಹೇಳುತ್ತಿದ್ದೇನೆ. ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಲು ಸಾಧ್ಯವಿಲ್ಲ, ಅವರು ಇಲ್ಲಿಗೆ ಬರಲು ಸಾಧ್ಯವಿಲ್ಲ. ಈ ಹಿಂದೆಯೂ ಸಹ ಏಷ್ಯಾ ಕಪ್ ತಟಸ್ಥ ಸ್ಥಳದಲ್ಲಿ ಆಡಲಾಗಿದೆ. ಹೀಗಾಗಿ ಮುಂದಿನ ಬಾರಿ ಕೂಡ ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಜಯ್ ಶಾ ಹೇಳಿದ್ದಾರೆ.

ಆದರೆ ಅಕ್ಟೋಬರ್ 23 ರಂದು ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಅದಕ್ಕೂ ಮುನ್ನ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಭಾರತದಲ್ಲಿನ ಕ್ರಿಕೆಟ್ ಆಡಳಿತದ ಅನುಭವದ ಕೊರತೆಯನ್ನು ಎತ್ತಿತೋರಿಸುತ್ತಿದೆ ಎಂದು ಅಫ್ರಿದಿ ಟೀಕೆ ಮಾಡಿದ್ದಾರೆ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್