AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಏಷ್ಯಾಕಪ್ ಗೆದ್ದಿದ್ರೆ ಏನು ಮಾಡ್ತಿದ್ರು ಗೊತ್ತಾ? ಪ್ಲ್ಯಾನ್ ಬಹಿರಂಗಪಡಿಸಿದ ಅಫ್ರಿದಿ

India vs Pakistan: ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ 150 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ 9ನೇ ಬಾರಿ ಏಷ್ಯಾಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತು.

ಪಾಕ್ ಏಷ್ಯಾಕಪ್ ಗೆದ್ದಿದ್ರೆ ಏನು ಮಾಡ್ತಿದ್ರು ಗೊತ್ತಾ? ಪ್ಲ್ಯಾನ್ ಬಹಿರಂಗಪಡಿಸಿದ ಅಫ್ರಿದಿ
Shahid Afridi
ಝಾಹಿರ್ ಯೂಸುಫ್
|

Updated on:Oct 01, 2025 | 11:18 AM

Share

ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಸತತ 7 ಗೆಲುವುಗಳೊಂದಿಗೆ ಎಂಬುದು ವಿಶೇಷ. ಅದರಲ್ಲಿ ಮೂರು ಗೆಲುವು ಪಾಕಿಸ್ತಾನದ ವಿರುದ್ಧವೇ ಮೂಡಿಬಂದಿರುವುದು ಮತ್ತೊಂದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಭಾರತ ತಂಡವು ಟೂರ್ನಿಯೊಂದರಲ್ಲಿ ಪಾಕ್ ಪಡೆಯನ್ನು ಮೂರು ಬಾರಿ ಮಣಿಸಿದೆ. ಈ ಮೂರು ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸವನ್ನು ನಿರ್ಮಿಸಿದೆ.

ಒಂದು ವೇಳೆ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆದ್ದಿದ್ರೆ? ಈ ಒಂದು ಪ್ರಶ್ನೆಗೆ ಇದೀಗ ಪಾಕ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಉತ್ತರ ನೀಡಿದ್ದಾರೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನಾವು  ಗೆದ್ದಿದ್ದರೆ ಆ ಗೆಲುವನ್ನು ಪಾಕ್ ಆಟಗಾರರು ಪಾಕಿಸ್ತಾನ್ ಸೈನ್ಯಕ್ಕೆ ಅರ್ಪಿಸುತ್ತಿದ್ದರು.

ಫೈನಲ್ ಪಂದ್ಯಕ್ಕೂ ಮುನ್ನ ಇಂತಹದೊಂದು ಐಡಿಯಾವನ್ನು ನಾನು ನೀಡಿದ್ದೆ. ನೀವು ಗೆದ್ದರೆ ಆ ಗೆಲುವನ್ನು ಪಾಕಿಸ್ತಾನದ ವಾಯುಪಡೆಗೆ ಅರ್ಪಿಸಬೇಕೆಂದು ತಿಳಿಸಿದ್ದೆ. ಆದರೆ ದುರಾದೃಷ್ಟ ನಾವು ಗೆಲ್ಲಲಿಲ್ಲ. ಇದರಿಂದಾಗಿ ನಮ್ಮ ಕನಸು ನನಸಾಗಲಿಲ್ಲ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಇದಕ್ಕೂ ಮುನ್ನ ಮೊದಲ ಸುತ್ತಿನಲ್ಲಿ ಪಾಕಿಸ್ತಾನ್ ತಂಡವನ್ನು ಸೋಲಿಸಿದ ನಂತರ, ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಆ ಗೆಲುವನ್ನು ಭಾರತೀಯ ಸಶಸ್ತ್ರ ಪಡೆಗೆ ಮತ್ತು ಪಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ್ದರು. ಇದರ ವಿರುದ್ಧ ಪಿಸಿಬಿ ಸೂರ್ಯಕುಮಾರ್ ಯಾದವ್ ವಿರುದ್ಧ ಐಸಿಸಿಗೆ ದೂರು ದಾಖಲಿಸಿತ್ತು. 

ಈ ದೂರಿನ ಪರಿಣಾಮ ಸೂರ್ಯಕುಮಾರ್ ಯಾದವ್​ಗೆ ಪಂದ್ಯ ಶುಲ್ಕದ ಶೇ.30 ರಷ್ಡು ದಂಡ ವಿಧಿಸಲಾಗಿತ್ತು. ಅತ್ತ ಈ ದೂರಿನ ಹೊರತಾಗಿಯೂ ಟೀಮ್ ಇಂಡಿಯಾಗೆ ತಿರುಗೇಟು ನೀಡಲು ಪಾಕಿಸ್ತಾನ್ ತಂಡ ಪ್ಲ್ಯಾನ್ ರೂಪಿಸಿರುವುದು ಇದೀಗ ಬಹಿರಂಗವಾಗಿದೆ.

ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿ, ಆ ಗೆಲುವನ್ನು ಪಾಕಿಸ್ತಾನ್ ಸೈನಿಕರಿಗೆ ಅರ್ಪಿಸಲು ಯೋಜನೆ ರೂಪಿಸಿದ್ದೆವು. ಆದರೆ ಅಂತಿಮ ಪಂದ್ಯದಲ್ಲೂ ಟೀಮ್ ಇಂಡಿಯಾ ವಿರುದ್ಧ ಸೋತಿದ್ದರಿಂದ ನಮ್ಮ ಪ್ಲ್ಯಾನ್ ಈಡೇರಲಿಲ್ಲ ಎಂದು ಶಾಹಿದ್ ಅಫ್ರಿದಿ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಕಪ್ ಬೇಕಿದ್ರೆ, ಸೂರ್ಯಕುಮಾರೇ ಬರಲಿ: ಮೊಹ್ಸಿನ್ ನಖ್ವಿ ಮತ್ತೆ ಕಿರಿಕ್

ಇತ್ತ ಫೈನಲ್ ಪಂದ್ಯದಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತು. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್ ಯಾದವ್, ಏಷ್ಯಾಕಪ್ ಟೂರ್ನಿಯ ತನ್ನೆಲ್ಲಾ ಪಂದ್ಯದ ಶುಲ್ಕಗಳನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ಮತ್ತು ನಮ್ಮ ಸಶಸ್ತ್ರ ಪಡೆಗಳಿಗೆ ನೀಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

Published On - 11:18 am, Wed, 1 October 25

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ