ಟೀಮ್ ಇಂಡಿಯಾ ಟಿ20 ವಿಶ್ವಕಪ್ಗಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ಇದರ ನಡುವೆ ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆ ಕೂಡ ಚರ್ಚೆಗಳು ಶುರುವಾಗಿದೆ. ಏಷ್ಯಾಕಪ್ ಮೂಲಕ ಭರ್ಜರಿ ಫಾರ್ಮ್ಗೆ ಮರಳಿರುವ ಕೊಹ್ಲಿ, ಅಫ್ಘಾನಿಸ್ತಾನ್ ವಿರುದ್ಧ ಶತಕ ಸಿಡಿಸಿ ಮಿಂಚಿದ್ದರು. ವಿಶೇಷ ಎಂದರೆ ಮೂರು ವರ್ಷಗಳ ಬಳಿಕ ಕೊಹ್ಲಿ ಬಾರಿಸಿದ ಶತಕ ಇದಾಗಿದೆ. ಆದರೆ ಈ ಭರ್ಜರಿ ಪ್ರದರ್ಶನದ ಬೆನ್ನಲ್ಲೇ ಕಿಂಗ್ ಕೊಹ್ಲಿಯ ನಿವೃತ್ತಿ ಕುರಿತಾದ ಚರ್ಚೆಗಳು ಸಹ ಶುರುವಾಗಿದೆ. ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ, ವಿರಾಟ್ ಕೊಹ್ಲಿ ನಿವೃತ್ತಿ ನೀಡಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಈಗ ಕೊಹ್ಲಿ ಫಾರ್ಮ್ನಲ್ಲಿದ್ದು, ಉತ್ತಮವಾಗಿ ಆಡುವಾಗಲೇ ಅವರು ನಿವೃತ್ತರಾಗಲಿ ಎಂದು ಅಫ್ರಿದಿ ಹೇಳಿದ್ದಾರೆ.
ಪಾಕಿಸ್ತಾನ್ ಚಾನೆಲ್ವೊಂದರ ಸಂವಾದದಲ್ಲಿ ಮಾತನಾಡಿದ ಅಫ್ರಿದಿ, ವಿರಾಟ್ ಕೊಹ್ಲಿ ಚಾಂಪಿಯನ್ ಆಟಗಾರ. ಇದಾಗ್ಯೂ ಅವರು ಇತ್ತೀಚೆಗೆ ಸಾಕಷ್ಟು ತೊಂದರೆಗಳನ್ನು ಎದುರಿಸಿದ್ದರು. ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ದಿನ ನಿವೃತ್ತರಾಗಲೇಬೇಕು. ಆದರೆ ಹಮ್ಮೆಯಿಂದ ವಿದಾಯ ಹೇಳುವುದು ನಿಮ್ಮ ಗುರಿಯಾಗಿರಬೇಕು ಎಂದು ಅಫ್ರಿದಿ ಕೊಹ್ಲಿ ಸಲಹೆ ನೀಡಿದ್ದಾರೆ.
ನಿಮ್ಮನ್ನು ತಂಡದಿಂದ ಕೈ ಬಿಡುವ ಹಂತಕ್ಕೆ ತಲುಪಬಾರದು. ನೀವು ಫಾರ್ಮ್ ಉತ್ತುಂಗದಲ್ಲಿರುವಾಗಲೇ ನಿವೃತ್ತಿ ಘೋಷಿಸಬೇಕು. ಕೆಲ ಜನರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮರ್ಥರಾಗಿದ್ದಾರೆ. ಇದು ಏಷ್ಯಾದ ಆಟಗಾರರಿಗೆ ವಿಶೇಷವಾಗಿ ಕಷ್ಟಕರವಾಗಿದೆ. ಇದಾಗ್ಯೂ ವಿರಾಟ್ ಕೊಹ್ಲಿ ಹೆಮ್ಮೆಯಿಂದ ನಿವೃತ್ತಿ ಹೊಂದುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಅಫ್ರಿದಿ ಹೇಳಿದ್ದಾರೆ.
ಅಂದರೆ ಪ್ರಸ್ತುತ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ನಿವೃತ್ತಿ ನೀಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಶಾಹಿದ್ ಅಫ್ರಿದಿ ಮುಂದಿಟ್ಟಿದ್ದಾರೆ. ಮತ್ತೊಂದೆಡೆ ಪಾಕ್ ತಂಡದ ಮಾಜಿ ವೇಗಿ ಶೊಯೇಬ್ ಅಖ್ತರ್ ಕೂಡ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಿವೃತ್ತರಾಗಬಹುದು ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಫಾರ್ಮ್ಗೆ ಮರಳುತ್ತಿದ್ದಂತೆ ವಿರಾಟ್ ಕೊಹ್ಲಿಯ ನಿವೃತ್ತಿ ಚರ್ಚೆಗಳು ಶುರುವಾಗಿವೆ. ಅದರಲ್ಲೂ ಟಿ20 ಕ್ರಿಕೆಟ್ಗೆ ವಿದಾಯ ಹೇಳಿ ಕೊಹ್ಲಿ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನತ್ತ ಗಮನಹರಿಸುವುದು ಸೂಕ್ತ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿರುವುದು ವಿಶೇಷ.