IND vs PAK: ಭಾರತ- ಪಾಕ್ ಪಂದ್ಯದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದ ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಮಗಳು!

IND vs PAK: ನ್ನ ಪುಟ್ಟ ಮಗಳು ಭಾರತದ ಧ್ವಜವನ್ನು ಬೀಸುತ್ತಿರುವ ವೀಡಿಯೊ ಕೂಡ ನನ್ನ ಬಳಿ ಇದೆ. ಆದರೆ ಅದನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿದ್ದೆ ಎಂದು ಅಫ್ರಿದಿ ಹೇಳಿಕೊಂಡಿದ್ದಾರೆ.

IND vs PAK: ಭಾರತ- ಪಾಕ್ ಪಂದ್ಯದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದ ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಮಗಳು!
Follow us
TV9 Web
| Updated By: ಪೃಥ್ವಿಶಂಕರ

Updated on:Sep 11, 2022 | 4:19 PM

ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾಕಪ್ 2022 (Asia Cup 2022)ರಲ್ಲಿ, ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಎರಡು ಪಂದ್ಯಗಳನ್ನು ಆಡಲಾಯಿತು. ಟೂರ್ನಿಯ ಗುಂಪು ಹಂತದಲ್ಲಿ ಮೊದಲ ಪಂದ್ಯ ನಡೆದಿತ್ತು. ಇದರಲ್ಲಿ ಭಾರತ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಬಳಿಕ ಸೂಪರ್ ಫೋರ್ ಪಂದ್ಯದಲ್ಲಿ ಪಾಕಿಸ್ತಾನ 5 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಭಾನುವಾರ ನಡೆಯಲಿರುವ ಏಷ್ಯಾಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾವನ್ನು ಎದುರಿಸಲಿದೆ. ಫೈನಲ್‌ಗೂ ಮುನ್ನ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಭಾರತ-ಪಾಕ್ ಪಂದ್ಯದಲ್ಲಿ ನಡೆದ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ. ವಾಸ್ತವವಾಗಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಕೊನೆಯ ಹೈವೋಲ್ಟೇಜ್ ಪಂದ್ಯದಲ್ಲಿ, ಕ್ರೀಡಾಂಗಣದಲ್ಲಿ ಹಾಜರಿದ್ದ ಅವರ ಮಗಳು ಭಾರತದ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದರು ಎಂದು ಆಫ್ರಿದಿ ಹೇಳಿಕೊಂಡಿದ್ದಾರೆ.

ಸೆಪ್ಟೆಂಬರ್ 4 ರಂದು ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂಗೆ ತಮ್ಮ ಕುಟುಂಬದವರು ನೇರವಾಗಿ ಪಂದ್ಯ ವೀಕ್ಷಿಸಲು ತೆರಳಿದ್ದರು ಎಂದು ಆಫ್ರಿದಿ ಟಿವಿಯಲ್ಲಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಇಲ್ಲಿ ಮಾತನಾಡಿದ ಅಫ್ರಿದಿ, “ಕ್ರಿಡಾಂಗಣದಲ್ಲಿ ಅಷ್ಟೇನೂ ಪಾಕ್ ಅಭಿಮಾನಿಗಳಿರಲಿಲ್ಲ. ಕೇವಲ 10 ಪ್ರತಿಶತದಷ್ಟೂ ಪಾಕಿಸ್ತಾನಿ ಅಭಿಮಾನಿಗಳು ಇರಲಿಲ್ಲ. ಆದರೆ ಉಳಿದ 90 ಪ್ರತಿಶತದಷ್ಟು ಭಾರತೀಯ ಅಭಿಮಾನಿಗಳು ಇಲ್ಲಿ ನೆರೆದಿದ್ದಾರೆ ಎಂದು ನನ್ನ ಹೆಂಡತಿ ಹೇಳಿದ್ದರು. ಆದ್ದರಿಂದ ಅಲ್ಲಿ ಪಾಕಿಸ್ತಾನದ ಧ್ವಜಗಳು ಹೆಚ್ಚಾಗಿ ಇರಲಿಲ್ಲ, ಹಾಗಾಗಿ ನನ್ನ ಕಿರಿಯ ಮಗಳು ಭಾರತದ ಧ್ವಜವನ್ನು ಹಿಡಿದು ಬೀಸುತ್ತಿದ್ದಳು. ನನ್ನ ಪುಟ್ಟ ಮಗಳು ಭಾರತದ ಧ್ವಜವನ್ನು ಬೀಸುತ್ತಿರುವ ವೀಡಿಯೊ ಕೂಡ ನನ್ನ ಬಳಿ ಇದೆ. ಆದರೆ ಅದನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿದ್ದೇನೆ ಎಂದು ಅಫ್ರಿದಿ ಹೇಳಿಕೊಂಡಿದ್ದಾರೆ.

ಏಷ್ಯಾಕಪ್​ನಲ್ಲಿ ಪಾಕಿಸ್ತಾನ ತಂಡ ಫೈನಲ್ ತಲುಪಿದೆ. ಏಷ್ಯಾಕಪ್ ಸೂಪರ್ ಫೋರ್​ನಲ್ಲಿ ಭಾರತ ತನ್ನ ಮೊದಲ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ ಫೋರ್‌ನ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನವು ಶ್ರೀಲಂಕಾ ವಿರುದ್ಧ ಸೋತಿದೆ, ಆದರೆ ಇಂದು ಭಾನುವಾರ ನಡೆಯಲಿರುವ ಪಂದ್ಯವು ಉಭಯ ತಂಡಗಳ ನಡುವೆ ಕಠಿಣ ಹಣಾಹಣಿಯಾಗಬಹುದು. ಆದರೆ, ದುಬೈನಲ್ಲಿ ಟಾಸ್‌ನ ಪಾತ್ರ ಬಹುಮುಖ್ಯವಾಗಿದ್ದು, ಮೊದಲು ಬ್ಯಾಟಿಂಗ್ ಮಾಡುವ ತಂಡ ಸಂಕಷ್ಟಕ್ಕೆ ಸಿಲುಕಲಿದೆ. ಅಲ್ಲದೆ ಮೊದಲು ಬ್ಯಾಟಿಂಗ್ ಮಾಡಿದಾಗಲೆಲ್ಲ ಪಾಕಿಸ್ತಾನದ ಪ್ರದರ್ಶನ ಉತ್ತಮವಾಗಿಲ್ಲ. ಭಾರತ ಮತ್ತು ಶ್ರೀಲಂಕಾ ವಿರುದ್ಧ ಸೋತ ಪಂದ್ಯಗಳಲ್ಲಿ ಪಾಕ್ ತಂಡ ಮೊದಲು ಬ್ಯಾಟ್ ಮಾಡಿತ್ತು.

Published On - 4:17 pm, Sun, 11 September 22

ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ