ಟೆಸ್ಟ್ ಮತ್ತು ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್

Shakib Al Hasan: ಬಾಂಗ್ಲಾದೇಶ್ ಪರ ಈವರೆಗೆ 70 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4600 ರನ್ ಕಲೆಹಾಕಿದ್ದಾರೆ. ಹಾಗೆಯೇ 119 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರಯ 15591 ಎಸೆತಗಳಲ್ಲಿ 242 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

ಟೆಸ್ಟ್ ಮತ್ತು ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್
Shakib Al Hasan
Follow us
ಝಾಹಿರ್ ಯೂಸುಫ್
|

Updated on:Sep 26, 2024 | 2:24 PM

ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತದ ವಿರುದ್ಧದ ಕಾನ್ಪುರ ಟೆಸ್ಟ್​ಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಕೀಬ್ ಮುಂಬರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವುದಿಲ್ಲ ಎಂದು ಸಹ ಹೇಳಿದ್ದಾರೆ.

2024ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ನಾನು ಬಾಂಗ್ಲಾದೇಶ್ ಪರವಾಗಿ ನನ್ನ ಕೊನೆಯ ಟಿ20 ಪಂದ್ಯವನ್ನು ಆಡಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಬಾಂಗ್ಲಾ ಪರ ಚುಟುಕು ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುದೀರ್ಘಾವಧಿಯ ಕ್ರಿಕೆಟ್​ನಲ್ಲಿ ನನ್ನ ಕೊನೆಯ ಪಂದ್ಯವನ್ನಾಡಲಿದ್ದೇನೆ ಎಂದು ಶಕೀಕ್ ಅಲ್ ಹಸನ್ ತಿಳಿಸಿದ್ದಾರೆ.

ಅಕ್ಟೋಬರ್-ನವೆಂಬರ್ ನಡುವೆ ಬಾಂಗ್ಲಾದೇಶ್ ತಂಡವು ಸೌತ್ ಆಫ್ರಿಕಾ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲಿ ಮೀರತ್​ನಲ್ಲಿ ಒಂದು ಪಂದ್ಯ ಜರುಗಲಿದ್ದು, ಈ ಮ್ಯಾಚ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಲು ಶಕೀಬ್ ಅಲ್ ಹಸನ್ ನಿರ್ಧರಿಸಿದ್ದಾರೆ. ಅದರಂತೆ 2024ರಲ್ಲಿ ಬಾಂಗ್ಲಾ ತಂಡದ ಮಾಜಿ ನಾಯಕ ಎರಡು ಮಾದರಿಯ (ಟಿ20 ಮತ್ತು ಟೆಸ್ಟ್) ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಇದಾಗ್ಯೂ ಶಕೀಬ್ ಅಲ್ ಹಸನ್ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಅಲ್ಲದೆ 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. ಈ ಟೂರ್ನಿ ಬಳಿಕ ಅವರು ಒನ್​ ಡೇ ಕ್ರಿಕೆಟ್​ಗೂ ಗುಡ್ ಬೈ ಹೇಳುವ ಸಾಧ್ಯತೆಯಿದೆ.

ಬಾಂಗ್ಲಾದೇಶ್ ಪರ ಈವರೆಗೆ 70 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ 128 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 7454 ಎಸೆತಗಳನ್ನು ಎದುರಿಸಿರುವ ಅವರು 4600 ರನ್ ಕಲೆಹಾಕಿದ್ದಾರೆ. ಇದರ ನಡುವೆ 5 ಶತಕ, 1 ದ್ವಿಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇನ್ನು 119 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಶಕೀಬ್ 15591 ಎಸೆತಗಳನ್ನು ಎಸೆದಿದ್ದು, ಈ ವೇಳೆ 7707 ರನ್​ಗಳನ್ನು ನೀಡಿ 242 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೇ ವೇಳೆ 19 ಬಾರಿ 5 ವಿಕೆಟ್​ಗಳನ್ನು ಕಬಳಿಸಿದ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: IPL 2025: ಧೋನಿಯ ಸಂಭಾವನೆ ಕಡಿತ: ಅತೀ ಕಡಿಮೆ ಮೊತ್ತ ಪಡೆಯಲಿರುವ MSD

ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದು, ಅದರಂತೆ ತವರಿನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಅವರು ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

Published On - 2:06 pm, Thu, 26 September 24