Shakib Al Hasan: ಹೊಸ ದಾಖಲೆ ಬರೆದ ಶಕೀಬ್ ಅಲ್ ಹಸನ್: ಈ ಸಾಧನೆ ಮಾಡಿದ ವಿಶ್ವದ 5ನೇ ಬೌಲರ್

ಶಕೀಬ್ ಅಲ್ ಹಸನ್ ಅವರ ಒಟ್ಟಾರೆ T20 ದಾಖಲೆಯನ್ನು ನೋಡುವುದಾದರೆ, 347 ಇನ್ನಿಂಗ್ಸ್‌ಗಳಲ್ಲಿ 21 ಸರಾಸರಿಯಲ್ಲಿ 400 ವಿಕೆಟ್‌ಗಳನ್ನು ಪಡೆದಿದ್ದಾರೆ.

Shakib Al Hasan: ಹೊಸ ದಾಖಲೆ ಬರೆದ ಶಕೀಬ್ ಅಲ್ ಹಸನ್: ಈ ಸಾಧನೆ ಮಾಡಿದ ವಿಶ್ವದ 5ನೇ ಬೌಲರ್
Shakib Al Hasan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 25, 2022 | 2:39 PM

ಬಾಂಗ್ಲಾದೇಶ ತಂಡದ ಖ್ಯಾತ ಆಲ್​ರೌಂಡರ್ ಶಕೀಬ್ ಅಲ್ ಹಸನ್ ತಮ್ಮ ಹೆಸರಿಗೆ ಮತ್ತೊಂದು ದೊಡ್ಡ ದಾಖಲೆ ಬರೆದಿದ್ದಾರೆ. 34 ವರ್ಷದ ಎಡಗೈ ಸ್ಪಿನ್ನರ್ ಟಿ20ಯಲ್ಲಿ 400 ವಿಕೆಟ್ ಪೂರೈಸಿದ ಮೊದಲ ಬಾಂಗ್ಲಾ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 5 ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ. ವಿಶೇಷ ಎಂದರೆ ಟಿ20 ಕ್ರಿಕೆಟ್​ನಲ್ಲಿ 400 ವಿಕೆಟ್​ ಸಾಧನೆ ಮಾಡಿದ 5 ಬೌಲರ್​ಗಳಲ್ಲಿ ನಾಲ್ವರು ಸ್ಪಿನ್ನರ್​ಗಳು. ಪ್ರಸಕ್ತ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ 2022 ರ ಪಂದ್ಯದ ವೇಳೆ ಶಕೀಬ್ ಅಲ್ ಹಸನ್ ಈ ಸಾಧನೆ ಮಾಡಿದ್ದಾರೆ. ಬಿಪಿಎಲ್​ನಲ್ಲಿ ಫಾರ್ಚೂನ್ ಬಾರಿಶಾಲ್ ನಾಯಕರಾಗಿರುವ ಶಕೀಬ್ ಮಿನಿಸ್ಟರ್ ಗ್ರೂಪ್ ಢಾಕಾ ವಿರುದ್ಧದ ಪಂದ್ಯದಲ್ಲಿ 21 ರನ್​ 1 ವಿಕೆಟ್ ಪಡೆದಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ (ಅಂತಾರಾಷ್ಟ್ರೀಯ ಟಿ20+ಲೀಗ್ ಟಿ20) 400 ವಿಕೆಟ್​ಗಳನ್ನು ಪೂರೈಸಿದ್ದಾರೆ.

ಶಕೀಬ್ ಅಲ್ ಹಸನ್ ಅವರ ಒಟ್ಟಾರೆ T20 ದಾಖಲೆಯನ್ನು ನೋಡುವುದಾದರೆ, 347 ಇನ್ನಿಂಗ್ಸ್‌ಗಳಲ್ಲಿ 21 ಸರಾಸರಿಯಲ್ಲಿ 400 ವಿಕೆಟ್‌ಗಳನ್ನು ಪಡೆದಿದ್ದಾರೆ. 6 ರನ್‌ಗೆ 6 ವಿಕೆಟ್ ಪಡೆದದ್ದು ಅವರ ಅತ್ಯುತ್ತಮ ಪ್ರದರ್ಶನ. ಇನ್ನು 10 ಬಾರಿ 4 ವಿಕೆಟ್ ಮತ್ತು 3 ಬಾರಿ 5 ವಿಕೆಟ್ ಪಡೆದಿದ್ದಾರೆ. ಇದಲ್ಲದೆ 323 ಇನ್ನಿಂಗ್ಸ್‌ಗಳಲ್ಲಿ 20 ಸರಾಸರಿಯಲ್ಲಿ 5610 ರನ್ ಗಳಿಸಿದ್ದಾರೆ. ಈ ವೇಳೆ 19 ಅರ್ಧಶತಕ ಬಾರಿಸಿದ್ದಾರೆ. ಹಾಗೆಯೇ 94 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 117 ವಿಕೆಟ್ ಪಡೆದಿದ್ದಾರೆ. ಇದೇ ವೇಳೆ 9 ಅರ್ಧಶತಕಗಳೊಂದಿಗೆ 1894 ರನ್ ಗಳಿಸಿ ಮಿಂಚಿದ್ದಾರೆ. ಹಾಗೆಯೇ 59 ಟೆಸ್ಟ್‌ಗಳಲ್ಲಿ 215 ವಿಕೆಟ್‌ಗಳನ್ನು ಮತ್ತು 215 ODIಗಳಲ್ಲಿ 277 ವಿಕೆಟ್‌ಗಳನ್ನು ಪಡೆದಿದ್ದಾರೆ.

ಡ್ವೇನ್ ಬ್ರಾವೊ 555 ದಾಖಲೆ: ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ವೆಸ್ಟ್ ಇಂಡೀಸ್‌ನ ದಂತಕಥೆ ಡ್ವೇನ್ ಬ್ರಾವೋ ಹೆಸರಿನಲ್ಲಿದೆ. ಬ್ರಾವೊ 555 ವಿಕೆಟ್‌ಗಳೊಂದಿಗೆ ನಂಬರ್-1 ಸ್ಥಾನದಲ್ಲಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ (435) ಎರಡನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್‌ನ ಆಫ್ ಸ್ಪಿನ್ನರ್ ಸುನಿಲ್ ನರೈನ್ (425) ಮೂರನೇ ಮತ್ತು ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ (420) ನಾಲ್ಕನೇ ಸ್ಥಾನದಲ್ಲಿದ್ದಾರೆ. ಶಕೀಬ್ ಕೆಕೆಆರ್ ಸೇರಿದಂತೆ ಹಲವು ತಂಡಗಳ ಪರ ಐಪಿಎಲ್‌ನಲ್ಲಿ ಆಡಿದ್ದಾರೆ. ಈ ಬಾರಿಯೂ ಅವರ ಹೆಸರು ಮೆಗಾ ಹರಾಜಿನಲ್ಲಿದ್ದು, ದೊಡ್ಡ ಮೊತ್ತಕ್ಕೆ ಬಿಡ್ ಆಗುವ ನಿರೀಕ್ಷೆಯಲ್ಲಿದ್ದಾರೆ. ಸದ್ಯ 5ನೇ ಸ್ಥಾನದಲ್ಲಿರುವ ಶಕೀಬ್ ಅಲ್ ಹಸನ್ ಸುನಿಲ್ ನರೈನ್ ಹಾಗೂ ರಶೀದ್ ಖಾನ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ. ಈ ಬಾರಿಯ ಐಪಿಎಲ್​ ಮೂಲಕ ಶಕೀಬ್ ಅಲ್ ಹಸನ್ ಮತ್ತಷ್ಟು ಮುನ್ನುಗ್ಗಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: Ind vs SA: ಭರ್ಜರಿ ಶತಕ ಸಿಡಿಸಿ ಸಚಿನ್, ಸೆಹ್ವಾಗ್ ದಾಖಲೆ ಮುರಿದ ಕ್ವಿಂಟನ್ ಡಿಕಾಕ್

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(Shakib Al Hasan Creates New Records)

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?