ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ: ದಿ ರೈಸ್’ ಸಿನಿಮಾ ಬಾಕ್ಸಾಫೀಸ್ನಲ್ಲಿ ದೊಡ್ಡ ಹಿಟ್ ಆಗಿದ್ದಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಹುಟ್ಟುಹಾಕಿದೆ. ಈಗಾಗಲೇ ತಾರೆಯರು ಪುಷ್ಪ ಚಿತ್ರದ ಹಾಡುಗಳಿಗೆ ಸ್ಟೆಪ್ಸ್ ಹಾಕಿದ್ದಾರೆ. ಡೈಲಾಗ್ ಅನ್ನು ಮಿಮಿಕ್ ಮಾಡುತ್ತಿದ್ದಾರೆ. ಇದರಿಂದ ಕ್ರಿಕೆಟ್ ತಾರೆಯರು ಕೂಡ ಹೊರತಾಗಿಲ್ಲ. ಇತ್ತೀಚೆಗಷ್ಟೆ ಪುಷ್ಪ (Pushpa: The Rise) ಲುಕ್ನಲ್ಲಿ ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಂಡಿದ್ದರು. ವಿದೇಶದಲ್ಲೂ ಪುಷ್ಪ ಹವಾ ಜೋರಾಗಿದ್ದು ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ (David Warner) ಶ್ರೀವಲ್ಲಿ ಹಾಡಿಗೆ ಮಸ್ತ್ ಹೆಜ್ಜೆ ಹಾಕಿದ್ದರು. ಹಾರ್ದಿಕ್ ಪಾಂಡ್ಯ ಕೂಡ ನಿನ್ನೆಯಷ್ಟೆ ಅಜ್ಜಿ ಜೊತೆ ಶ್ರೀವಲ್ಲಿ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರು. ಇದೀಗ ಬಾಂಗ್ಲಾ ಪ್ರೀಮಿಯರ್ ಲೀಗ್ನಲ್ಲೂ ಪುಷ್ಪ ಟ್ರೆಂಡ್ ಆಗಿದೆ.
ಹೌದು, ಬಾಂಗ್ಲಾದೇಶದಲ್ಲಿ ಬಾಂಗ್ಲಾ ಪ್ರೀಮಿಯರ್ ಲೀಗ್ಗೆ ಕಳೆದ ವಾರ ಅದ್ಧೂರಿ ಚಾಲನೆ ಸಿಕ್ಕಿತ್ತು. ಬುಧವಾರ ನಡೆದ ಪಂದ್ಯದಲ್ಲಿ ವಿಕೆಟ್ ಕಿತ್ತಾಗ ಬಾಂಗ್ಲಾ ಆಲ್ರೌಂಡರ್ ಶಕಿಬ್ ಅಲ್ ಹಸನ್ ಪುಷ್ಪ ಚಿತ್ರದಲ್ಲಿ ‘ತಗ್ಗೆದೆ ಲೇ’ ಡೈಲಾಗ್ ಹೊಡೆದಾಗ ಅಲ್ಲು ಅರ್ಜುನ್ ಮಾಡುವ ಆ್ಯಕ್ಷನ್ ರೀತಿಯಲ್ಲೇ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕೊಮಿಲ್ಲ ವಿಕ್ಟೋರಿಯನ್ಸ್ ಮತ್ತು ಫಾರ್ಚುನ್ ಬ್ಯಾರಿಶಲ್ ನಡುವಣ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಫಾಪ್ ಡುಪ್ಲೆಸಿಸ್ ಅವರ ವಿಕೆಟ್ ಕಿತ್ತಾಗ ಶಕಿಬ್ ಈರೀತಿ ಸಂಭ್ರಮಾಚರಣೆ ಮಾಡಿದ್ದಾರೆ.
After Nazmul Islam, then @DJBravo47, and now the Bangladeshi ? @Sah75official displaying the #Pushpa move! ?
The @alluarjun movie has really taken over the #BBPL2022. ?
? Catch these antics for just ₹5, LIVE on #FanCode ? https://t.co/lr5xUr0sLW#BPLonFanCode #alluarjun pic.twitter.com/9TAn8xqksr
— FanCode (@FanCode) January 26, 2022
ಈ ಹಿಂದೆ ಪುಷ್ಪ ಚಿತ್ರದ ‘ತಗ್ಗೆದೆ ಲೇ’ ಡೈಲಾಗಿಗೆ ಡೇವಿಡ್ ವಾರ್ನರ್ ವಿಡಿಯೋ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಿನಿ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದರು. ಹಾಗೂ ಇದಕ್ಕೂ ಮುನ್ನ ಇದೇ ಸಂಭಾಷಣೆಗೆ ರವೀಂದ್ರ ಜಡೇಜಾ ಕೂಡ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಅಲ್ಲು ಅರ್ಜುನ್ ರೀತಿಯೇ ರವೀಂದ್ರ ಜಡೇಜಾ ಕೂಡ ಸದ್ಯ ಗಡ್ಡಧಾರಿಯಾಗಿದ್ದು ಆ ಸಂಭಾಷಣೆ ರವೀಂದ್ರ ಜಡೇಜಾಗೆ ಅಚ್ಚುಕಟ್ಟಾಗಿ ಹೊಂದಿಕೊಂಡಿತ್ತು. ಹಾಗೂ ರವೀಂದ್ರ ಜಡೇಜಾರ ಆ ವಿಡಿಯೋ ಸಾಮಾಜಿಕ ಜಾಲ ತಾಣದ ತುಂಬಾ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಈ ಟ್ರೆಂಡ್ ಸೃಷ್ಟಿಸಿದ್ದೆ ಡೇವಿಡ್ ವಾರ್ನರ್:
ಈ ಟ್ರೆಂಡ್ ಮೊದಲಿಗೆ ಹುಟ್ಟುಹಾಕಿದ ಕೀರ್ತಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರಿಗೆ ಸಲ್ಲಬೇಕು. ಮೊದಲಿಗೆ ತೆಲುಗು ಚಿತ್ರಗಳ ಸಂಭಾಷಣೆ ಹಾಗೂ ಹಾಡುಗಳಿಗೆ ವಿಡಿಯೋಗಳನ್ನು ಮಾಡುತ್ತಿದ್ದ ಡೇವಿಡ್ ವಾರ್ನರ್ ತೆಲುಗು ನಟ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲೋ ಚಿತ್ರದ ಬುಟ್ಟ ಬೊಮ್ಮ ಹಾಡಿಗೆ ತನ್ನ ಪತ್ನಿ ಜತೆ ನೃತ್ಯವನ್ನು ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದರು. ಈ ವಿಡಿಯೋಗಳು ಕೂಡ ಸಾಕಷ್ಟು ವೈರಲ್ ಆಗಿತ್ತು.
Krunal Pandya: ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಟ್ವಿಟ್ಟರ್ ಖಾತೆ ಹ್ಯಾಕ್