ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ಶಕೀಬ್ ಅಲ್ ಹಸನ್

Shakib Al Hasan: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಎಡಗೈ ಸ್ಪಿನ್ನರ್ ಎಂಬ ವಿಶ್ವ ದಾಖಲೆ ಶಕೀಬ್ ಅಲ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಒಟ್ಟು 706 ವಿಕೆಟ್​ಗಳನ್ನು ಕಬಳಿಸುವ ಮೂಲಕ ಶಕೀಬ್ ನ್ಯೂಝಿಲೆಂಡ್​ನ ಡೇನಿಯಲ್ ವೆಟ್ಟೋರಿ (705) ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ದಾಖಲೆ ಬೆನ್ನಲ್ಲೇ ಸ್ಪೋರ್ಟ್ಸ್​ಕೀಡಾಗೆ ನೀಡಿದ ಸಂದರ್ಶನದಲ್ಲಿ ಶಕೀಬ್ ಅಲ್ ಹಸನ್ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ.

ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ಶಕೀಬ್ ಅಲ್ ಹಸನ್
Shakib Al Hasan
Follow us
|

Updated on: Aug 28, 2024 | 1:11 PM

ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್​ನಲ್ಲಿ ಭಾರತದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಇನ್ನು ಆಲ್​ ಟೈಮ್ ಒಡಿಐ ಇಲೆವೆನ್​ನಲ್ಲಿ ಶಕೀಬ್ ತಮ್ಮನ್ನೂ ಸಹ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಅಂದರೆ ಶಕೀಬ್ ಅಲ್ ಹಸನ್ ಅವರ ಸಾರ್ವಕಾಲಿಕ ಏಕದಿನ ಇಲೆವೆನ್​ನಲ್ಲಿ ಆರಂಭಿಕರಾಗಿ ಆಯ್ಕೆಯಾಗಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಪಾಕಿಸ್ತಾನದ ಮಾಜಿ ಎಡಗೈ ಆರಂಭಿಕ ಆಟಗಾರ ಸಯೀದ್ ಅನ್ವರ್.

ಇನ್ನು ಮೂರನೇ ಕ್ರಮಾಂಕಕ್ಕೆ ವೆಸ್ಟ್ ಇಂಡೀಸ್​ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಅವರನ್ನು ಹೆಸರಿಸಿದ್ದಾರೆ. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಐದನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಜಾಕ್ಸ್ ಕಾಲಿಸ್​ಗೆ ಸ್ಥಾನ ನೀಡಿದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿದ್ದಾರೆ. ಅಲ್ಲದೆ ತಂಡದ ನಾಯಕತ್ವವನ್ನು ಧೋನಿಗೆ ನೀಡಿದ್ದಾರೆ.

ಏಳನೇ ಕ್ರಮಾಂಕಕ್ಕೆ ಆಲ್​ರೌಂಡರ್ ಆಗಿ ಶಕೀಬ್ ಅಲ್ ಹಸನ್ ತಮ್ಮನ್ನೇ ಹೆಸರಿಸಿದ್ದಾರೆ. ಇನ್ನು ಸ್ಪಿನ್ ಬೌಲರ್​ಗಳಾಗಿ ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ಹಾಗೂ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: Dinesh Karthik: ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್

ಇನ್ನು ವೇಗದ ಬೌಲರ್​ಗಳಾಗಿ ಪಾಕಿಸ್ತಾನದ ಎಡಗೈ ವೇಗಿ ವಾಸಿಂ ಅಕ್ರಮ್ ಹಾಗೂ ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್​ಗ್ರಾಥ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಶಕೀಬ್ ಅಲ್ ಹಸನ್ ಅವರ ಆಲ್ ​ಟೈಮ್ ಏಕದಿನ ಇಲೆವೆನ್ ಈ ಕೆಳಗಿನಂತಿದೆ…

  1. ಸಚಿನ್ ತೆಂಡೂಲ್ಕರ್ (ಭಾರತ)
  2. ಸಯೀದ್ ಅನ್ವರ್ (ಪಾಕಿಸ್ತಾನ್)
  3. ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್)
  4. ವಿರಾಟ್ ಕೊಹ್ಲಿ (ಭಾರತ)
  5. ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)
  6. ಮಹೇಂದ್ರ ಸಿಂಗ್ ಧೋನಿ- ನಾಯಕ (ಭಾರತ)
  7. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)
  8. ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ)
  9. ಶೇನ್ ವಾರ್ನ್​ (ಆಸ್ಟ್ರೇಲಿಯಾ)
  10. ವಾಸಿಂ ಅಕ್ರಮ್ (ಪಾಕಿಸ್ತಾನ್)
  11. ಗ್ಲೆನ್ ಮೆಕ್​ಗ್ರಾಥ್ (ಆಸ್ಟ್ರೇಲಿಯಾ)
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ