ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್ನಲ್ಲಿ ಭಾರತದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಇನ್ನು ಆಲ್ ಟೈಮ್ ಒಡಿಐ ಇಲೆವೆನ್ನಲ್ಲಿ ಶಕೀಬ್ ತಮ್ಮನ್ನೂ ಸಹ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಅಂದರೆ ಶಕೀಬ್ ಅಲ್ ಹಸನ್ ಅವರ ಸಾರ್ವಕಾಲಿಕ ಏಕದಿನ ಇಲೆವೆನ್ನಲ್ಲಿ ಆರಂಭಿಕರಾಗಿ ಆಯ್ಕೆಯಾಗಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಪಾಕಿಸ್ತಾನದ ಮಾಜಿ ಎಡಗೈ ಆರಂಭಿಕ ಆಟಗಾರ ಸಯೀದ್ ಅನ್ವರ್.
ಇನ್ನು ಮೂರನೇ ಕ್ರಮಾಂಕಕ್ಕೆ ವೆಸ್ಟ್ ಇಂಡೀಸ್ನ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಅವರನ್ನು ಹೆಸರಿಸಿದ್ದಾರೆ. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಐದನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ಆಲ್ರೌಂಡರ್ ಜಾಕ್ಸ್ ಕಾಲಿಸ್ಗೆ ಸ್ಥಾನ ನೀಡಿದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿದ್ದಾರೆ. ಅಲ್ಲದೆ ತಂಡದ ನಾಯಕತ್ವವನ್ನು ಧೋನಿಗೆ ನೀಡಿದ್ದಾರೆ.
ಏಳನೇ ಕ್ರಮಾಂಕಕ್ಕೆ ಆಲ್ರೌಂಡರ್ ಆಗಿ ಶಕೀಬ್ ಅಲ್ ಹಸನ್ ತಮ್ಮನ್ನೇ ಹೆಸರಿಸಿದ್ದಾರೆ. ಇನ್ನು ಸ್ಪಿನ್ ಬೌಲರ್ಗಳಾಗಿ ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ಹಾಗೂ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರನ್ನು ಆಯ್ಕೆ ಮಾಡಿದ್ದಾರೆ.
ಇದನ್ನೂ ಓದಿ: Dinesh Karthik: ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್
ಇನ್ನು ವೇಗದ ಬೌಲರ್ಗಳಾಗಿ ಪಾಕಿಸ್ತಾನದ ಎಡಗೈ ವೇಗಿ ವಾಸಿಂ ಅಕ್ರಮ್ ಹಾಗೂ ಆಸ್ಟ್ರೇಲಿಯಾ ವೇಗಿ ಗ್ಲೆನ್ ಮೆಕ್ಗ್ರಾಥ್ ಅವರನ್ನು ಹೆಸರಿಸಿದ್ದಾರೆ. ಅದರಂತೆ ಶಕೀಬ್ ಅಲ್ ಹಸನ್ ಅವರ ಆಲ್ ಟೈಮ್ ಏಕದಿನ ಇಲೆವೆನ್ ಈ ಕೆಳಗಿನಂತಿದೆ…