VIDEO: ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಶಕೀಬ್ ಅಲ್ ಹಸನ್

Shakib Al Hasan: ಬಾಂಗ್ಲಾದೇಶ್ ಪರ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 66 ಟೆಸ್ಟ್, 247 ಏಕದಿನ ಮತ್ತು 117 ಟಿ20 ಪಂದ್ಯಗಳನ್ನು ಆಡಿರುವ ಶಕೀಬ್ ಅಲ್ ಹಸನ್ ಟೆಸ್ಟ್​ನಲ್ಲಿ 4,454 ರನ್​ ಮತ್ತು 233 ವಿಕೆಟ್‌ಗಳನ್ನು ಪಡೆದರು. ಹಾಗೆಯೇ 247 ಏಕದಿನ ಪಂದ್ಯಗಳಲ್ಲಿ 37ರ ಸರಾಸರಿಯಲ್ಲಿ 7,570 ರನ್​ಗಳಿಸಿ, 317 ವಿಕೆಟ್ ಪಡೆದಿದ್ದಾರೆ.

VIDEO: ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಶಕೀಬ್ ಅಲ್ ಹಸನ್
Shakib Al Hasan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 08, 2024 | 11:33 AM

ಬಾಂಗ್ಲಾದೇಶ್ ತಂಡದ ಸ್ಟಾರ್ ಆಟಗಾರ ಶಕೀಬ್ ಅಲ್ ಹಸನ್ ಅಭಿಮಾನಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಭಾನುವಾರ ನಡೆದ ಸಾರ್ವತ್ರಿಕ ಚುನಾವಣೆಯ ಮತದಾನದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ನೂಕುನುಗ್ಗಲಿನ ವೇಳೆ ಕುಪಿತಗೊಂಡ ಶಕೀಬ್ ತಾಳ್ಮೆ ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಹತ್ತಿರದಲ್ಲಿದ್ದ ವ್ಯಕ್ತಿಯೊಬ್ಬರ ಕಪಾಳಕ್ಕೆ ಬಾರಿಸಿದ್ದಾರೆ. ಇದೀಗ ಶಕೀಬ್ ಅಲ್ ಹಸನ್ ಅವರ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.  ಏಕೆಂದರೆ ಶಕೀಬ್ ಈಗ ಕೇವಲ ಆಟಗಾರ ಮಾತ್ರವಲ್ಲ. ಬದಲಾಗಿ ಬಾಂಗ್ಲಾದೇಶ್​ನ ನೂತನ ಸಂಸದರಾಗಿ ಕೂಡ ಆಯ್ಕೆಯಾಗಿದ್ದಾರೆ.

ಈ ಬಾರಿಯ ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ಶಕೀಬ್ ಅಲ್ ಹಸನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಆಡಳಿರೂಢ ಪಕ್ಷ ಹವಾಮಿ ಲೀಗ್​ನಿಂದ ಮಗೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅದರಂತೆ ಇದೀಗ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ತಮ್ಮ ಸಮೀಪದ ಸ್ಪರ್ಧಿ ಖಾಜಿ ರೆಜಾಲ್ ಹುಸೇನ್ ವಿರುದ್ಧ 1,50,000 ಮತಗಳ ಭಾರಿ ಬಹುಮತದಿಂದ ಶಕೀಬ್ ಜಯಗಳಿಸಿದ್ದಾರೆ.

ಈ ಗೆಲುವಿನ ಬೆನ್ನಲ್ಲೇ ಶಕೀಬ್ ಅಲ್ ಹಸನ್ ಅಭಿಮಾನಿಯೊಬ್ಬರ ಕಪಾಳಕ್ಕೆ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಬಾಂಗ್ಲಾ ಕ್ರಿಕೆಟಿಗನ ಈ ವರ್ತನೆ ಬಗ್ಗೆ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ನೂತನ ಸಂಸದನ ನಡೆಯು ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಶಕೀಬ್ ಅಲ್ ಹಸನ್ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಶಕೀಬ್ ಅಲ್ ಹಸನ್ ವೃತ್ತಿಜೀವನ:

ಬಾಂಗ್ಲಾದೇಶ್ ಪರ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 66 ಟೆಸ್ಟ್, 247 ಏಕದಿನ ಮತ್ತು 117 ಟಿ20 ಪಂದ್ಯಗಳನ್ನು ಆಡಿರುವ ಶಕೀಬ್ ಅಲ್ ಹಸನ್ ಟೆಸ್ಟ್​ನಲ್ಲಿ 4,454 ರನ್​ ಮತ್ತು 233 ವಿಕೆಟ್‌ಗಳನ್ನು ಪಡೆದರು. ಹಾಗೆಯೇ 247 ಏಕದಿನ ಪಂದ್ಯಗಳಲ್ಲಿ 37ರ ಸರಾಸರಿಯಲ್ಲಿ 7,570 ರನ್​ಗಳಿಸಿ, 317 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: IPL 2024: RCB ತಂಡದ ನಾಯಕತ್ವದಲ್ಲಿ ಮತ್ತೆ ಬದಲಾವಣೆ..?

ಇನ್ನು ಟಿ20ಯಲ್ಲಿ 23ರ ಸರಾಸರಿಯಲ್ಲಿ 2,382 ರನ್ ಗಳಿಸಿರುವ ಶಕೀಬ್ ಬೌಲಿಂಗ್ ನಲ್ಲಿ 140 ವಿಕೆಟ್ ಪಡೆದಿದ್ದಾರೆ. ಸದ್ಯ ಬಾಂಗ್ಲಾದೇಶ್ ತಂಡದ ನಾಯಕತ್ವನ್ನು ತೊರೆದಿರುವ ಶಕೀಬ್ ಅಲ್ ಹಸನ್ ಇದೀಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅವರು ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುತ್ತಾರಾ ಎಂಬುದೇ ಈಗ ಪ್ರಶ್ನೆ.

Published On - 11:32 am, Mon, 8 January 24

ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು