AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shamar Joseph: ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ದಾಖಲೆ ಬರೆದ ವಿಂಡೀಸ್ ವೇಗಿ

Shamar Joseph: ಈ ಪಂದ್ಯದಲ್ಲಿ 20 ಓವರ್​ಗಳನ್ನು ಎಸೆದ ಶಮರ್ ಜೋಸೆಫ್ 94 ರನ್ ನೀಡಿ 5 ವಿಕೆಟ್​ಗಳನ್ನು ಕಬಳಿಸಿದರು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 5 ವಿಕೆಟ್ ಕಬಳಿಸಿದ ವೆಸ್ಟ್ ಇಂಡೀಸ್​ನ ಮೊದಲ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Shamar Joseph: ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ದಾಖಲೆ ಬರೆದ ವಿಂಡೀಸ್ ವೇಗಿ
Shamar Joseph
TV9 Web
| Edited By: |

Updated on: Jan 18, 2024 | 12:01 PM

Share

ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph) ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್​ ಶುರು ಮಾಡಿದ ವೆಸ್ಟ್ ಇಂಡೀಸ್ ತಂಡವು 188 ರನ್ ಕಲೆಹಾಕಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಯುವ ವೇಗಿ ಶಮರ್ ಜೋಸೆಫ್ ಆರಂಭಿಕ ಆಘಾತ ನೀಡಿದರು. ಪಾದಾರ್ಪಣೆ ಪಂದ್ಯದ ಮೊದಲ ಎಸೆತದಲ್ಲೇ ಸ್ಟೀವ್ ಸ್ಮಿತ್ (12) ಶಮರ್ ವಿಕೆಟ್ ಖಾತೆ ತೆರೆದರು. ಆ ಬಳಿಕ ಕೂಡ ಕರಾರುವಾಕ್ ದಾಳಿ ಸಂಘಟಿಸಿ ಮಾರ್ನಸ್ ಲಾಬುಶೇನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇದಾದ ಬಳಿಕ ಕ್ಯಾಮರೋನ್ ಗ್ರೀನ್ (14), ಮಿಚೆಲ್ ಸ್ಟಾರ್ಕ್ (10) ಹಾಗೂ ನಾಥನ್ ಲಿಯಾನ್ (24) ಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಶಮರ್ ಜೋಸೆಫ್ ಯಶಸ್ವಿಯಾದರು. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್​ಗಳ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ 20 ಓವರ್​ಗಳನ್ನು ಎಸೆದ ಶಮರ್ ಜೋಸೆಫ್ 94 ರನ್ ನೀಡಿ 5 ವಿಕೆಟ್​ಗಳನ್ನು ಕಬಳಿಸಿದರು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 5 ವಿಕೆಟ್ ಕಬಳಿಸಿದ ವೆಸ್ಟ್ ಇಂಡೀಸ್​ನ ಮೊದಲ ವೇಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ವಿಂಡೀಸ್​ನ 2ನೇ ಬೌಲರ್ ಎಂಬ ದಾಖಲೆಯನ್ನು 24 ವರ್ಷದ ಯುವ ವೇಗಿ ತಮ್ಮದಾಗಿಸಿಕೊಂಡರು.

1939 ರಲ್ಲಿ ದಿ ಓವಲ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಮಾಜಿ ಎಡಗೈ ಸ್ಪಿನ್ನರ್ ಟೈರೆಲ್ ಜಾನ್ಸನ್ ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ವಿಂಡೀಸ್ ಪರ ವಿಶೇಷ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆ ಮಾಡಿದ ವೆಸ್ಟ್ ಇಂಡೀಸ್​ನ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಶಮರ್ ಜೋಸೆಫ್ ಪಾತ್ರರಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಶಮರ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 283 ರನ್​ಗಳಿಗೆ ಆಲೌಟ್ ಆಗಿದೆ. ಇತ್ತ 95 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ವೆಸ್ಟ್ ಇಂಡೀಸ್ ತಂಡವು 12 ಓವರ್​ಗಳ ಮುಕ್ತಾಯದ ವೇಳೆಗೆ ಕೇವಲ 33 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್​ನಲ್ಲಿ ಕಿರ್ಕ್ ಮೆಕೆಂಜಿ ಹಾಗೂ ಜಸ್ಟಿನ್ ಗ್ರೀವ್ಸ್​ ಬ್ಯಾಟಿಂಗ್ ಮಾಡುತ್ತಿದ್ದಾರೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ತೇಜ್​ನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಝ್, ಕವೆಮ್ ಹಾಡ್ಜ್, ಜಸ್ಟಿನ್ ಗ್ರೀವ್ಸ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಗುಡಕೇಶ್ ಮೋಟಿ, ಅಲ್ಝಾರಿ ಜೋಸೆಫ್, ಶಮರ್ ಜೋಸೆಫ್ ಮತ್ತು ಕೆಮರ್ ರೋಚ್.

ಇದನ್ನೂ ಓದಿ: ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು..!

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಉಸ್ಮಾನ್ ಖ್ವಾಜಾ, ಸ್ಟೀವ್ ಸ್ಮಿತ್ , ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್ ಮತ್ತು ಜೋಶ್ ಹ್ಯಾಝಲ್​ವುಡ್.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ