IND vs PAK: ಅಭ್ಯಾಸದ ವೇಳೆ ಪಾಕ್ ಆರಂಭಿಕ ಆಟಗಾರನಿಗೆ ಇಂಜುರಿ; ಭಾರತ ವಿರುದ್ಧದ ಪಂದ್ಯಕ್ಕೆ ಅಲಭ್ಯ?

T20 World Cup 2022: 33 ವರ್ಷದ ಶಾನ್ ಮಸೂದ್ ಇದುವರೆಗೆ ಪಾಕಿಸ್ತಾನದ ಪರ ಹನ್ನೆರಡು ಟಿ20 ಪಂದ್ಯಗಳನ್ನು ಆಡಿದ್ದಾರೆ ಇದಲರಲ್ಇ 125.00 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ಮಸೂದ್, 220 ರನ್ ಗಳಿಸಿದ್ದಾರೆ.

IND vs PAK: ಅಭ್ಯಾಸದ ವೇಳೆ ಪಾಕ್ ಆರಂಭಿಕ ಆಟಗಾರನಿಗೆ ಇಂಜುರಿ; ಭಾರತ ವಿರುದ್ಧದ ಪಂದ್ಯಕ್ಕೆ ಅಲಭ್ಯ?
ಶಾನ್ ಮಸೂದ್ ಇಂಜುರಿ
Follow us
TV9 Web
| Updated By: ಪೃಥ್ವಿಶಂಕರ

Updated on:Oct 22, 2022 | 12:26 PM

ಆಸೀಸ್ ನಾಡಲ್ಲಿ ಟಿ20 ವಿಶ್ವಕಪ್ (T20 World Cup 2022) ಆರಂಭವಾಗಿದ್ದು, ಸೂಪರ್-12 ಸುತ್ತಿನ ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿವೆ. ಸೂಪರ್-12 ಸುತ್ತಿನ ಭಾಗವಾಗಿ ಭಾನುವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (India and Pakistan) ಎದುರಿಸಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಕಠಿಣ ಅಭ್ಯಾಸ ನಡೆಸುತ್ತಿವೆ. ಆದರೆ ಈ ನಡುವೆ ಪಾಕ್ ತಂಡದಲ್ಲಿ ಆಘಾತಕ್ಕಾರಿ ಘಟನೆಯೊಂದು ನಡೆದಿದೆ. ಅಭ್ಯಾಸದ ವೇಳೆ ಪಾಕಿಸ್ತಾನದ ಆರಂಭಿಕ ಆಟಗಾರ ಶಾನ್ ಮಸೂದ್ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಈ ಘಟನೆಯ ಬಳಿಕ ಹೆಚ್ಚಿನ ಅಪಾಯವಿಲ್ಲ ಎಂದು ತಂಡದ ವೈದ್ಯರು ಹೇಳಿದ್ದರೂ, ಭಾನುವಾರದ ಪಂದ್ಯಕ್ಕೆ ಶಾನ್ ಮಸೂದ್ ಲಭ್ಯರಾಗುತ್ತಾರೋ ಇಲ್ಲವೋ ಎಂಬುದು ಸ್ಕ್ಯಾನಿಂಗ್ ವರದಿ ಆಧರಿಸಿ ವೈದ್ಯಕೀಯ ತಜ್ಞರು ನೀಡುವ ವರದಿಯಿಂದ ಗೊತ್ತಾಗಲಿದೆ. ಆದರೆ ಭಾರತ ವಿರುದ್ಧದ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ ಸ್ಟಾರ್ ವೇಗಿ ಶಾಹೀನ್ ಅಫ್ರಿದಿ ಫಿಟ್‌ನೆಸ್‌ನೊಂದಿಗೆ ತಂಡಕ್ಕೆ ಸೇರ್ಪಡೆಗೊಂಡಿರುವುದರಿಂದ ಪಾಕಿಸ್ತಾನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: ಸೂಪರ್-12 ಸುತ್ತಿನ ಪಂದ್ಯಗಳು ಪ್ರಾರಂಭ; ಯಾವ ಗುಂಪಿನಲ್ಲಿ ಯಾವ ತಂಡವಿದೆ? ಇಲ್ಲಿದೆ ವಿವರ

ವಾಸ್ತವವಾಗಿ, ಪಾಕಿಸ್ತಾನ ತಂಡ ಅಭ್ಯಾಸ ನಡೆಸುತ್ತಿದ್ದ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ಆಲ್ ರೌಂಡರ್ ಮೊಹಮ್ಮದ್ ನವಾಜ್ ಬಲವಾದ ಶಾಟ್ ಆಡಿದ್ದಾರೆ. ಆ ಬಾಲ್ ನೆಟ್​ಗೆ ಬಡಿದು, ಬಳಿಕ ಶಾನ್ ಮಸೂದ್ ಅವರ ತಲೆಗೆ ತಗುಲಿದೆ. ತಂಡದ ವೈದ್ಯರು ತಕ್ಷಣವೇ ಅವರಿಗೆ ವೈದ್ಯಕೀಯ ನೆರವು ನೀಡಿದ್ದು, ನಂತರ ಸ್ಕ್ಯಾನಿಂಗ್‌ಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಸೂಕ್ಷ್ಮ ಜಾಗಕ್ಕೆ ಪೆಟ್ಟು

33 ವರ್ಷದ ಶಾನ್ ಮಸೂದ್ ಇದುವರೆಗೆ ಪಾಕಿಸ್ತಾನದ ಪರ ಹನ್ನೆರಡು ಟಿ20 ಪಂದ್ಯಗಳನ್ನು ಆಡಿದ್ದಾರೆ ಇದಲರಲ್ಇ 125.00 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿರುವ ಮಸೂದ್, 220 ರನ್ ಗಳಿಸಿದ್ದಾರೆ. ಜೊತೆಗೆ ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ. ಘಟನೆಯ ನಂತರ ಪಾಕಿಸ್ತಾನದ ಉಪನಾಯಕ ಶಾದಾಬ್ ಖಾನ್ ಈ ಘಟನೆ ಬಗ್ಗೆ ವಿವರಣೆ ನೀಡಿದ್ದು, ಸೂಕ್ಷ್ಮ ಜಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಸ್ತುತ ಅವರ ಆರೋಗ್ಯದ ಸ್ಥಿತಿ ಬಗ್ಗೆ ನಮಗೆ ಏನು ತಿಳಿದಿಲ್ಲ. ಆದರೆ ತಂಡದ ಫಿಸಿಯೋ ಅವರ ಪ್ರಕಾರ ಮಸೂದ್​ಗೆ ಅಂತಹ ಗಂಭೀರ ಇಂಜುರಿಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ ಶಾನ್ ಮಸೂದ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದೇವೆ ಎಂದಿದ್ದಾರೆ.

ಟಿ20 ವಿಶ್ವಕಪ್​ಗೆ ಉಭಯ ತಂಡಗಳು

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಆಫ್ರಿದಿ, ಖುಷ್ದಿಲ್ ಶಾ, ಮೊಹಮ್ಮದ್ ವಾಸಿಂ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Sat, 22 October 22

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ