IPL 2022: ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ರಾಜಸ್ಥಾನ್ ರಾಯಲ್ಸ್
ಪ್ರಸಕ್ತ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಉತ್ತಮ ಪ್ರದರ್ಶನ ನೀಡುತ್ತಿದೆ. 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

IPL (IPL 2022) ನ 45ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಆಡಲಿದೆ. ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಜಸ್ಥಾನಕ್ಕೆ ಈ ಪಂದ್ಯ ವಿಶೇಷವಾಗಿದೆ. ಏಕೆಂದರೆ ಸಂಜು ಸ್ಯಾಮ್ಸನ್ ತಂಡ ವಿಶೇಷ ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದೆ. ಇಂದಿನ ಪಂದ್ಯದಲ್ಲಿ ಆರ್ಆರ್ ಧರಿಸುವ ಜೆರ್ಸಿಯಲ್ಲಿ ಶೇನ್ ವಾರ್ನ್ ಅವರ ಹೆಸರನ್ನು ಮುದ್ರಿಸಲಾಗಿದೆ. ಈ ಸ್ಪೆಷಲ್ ಜೆರ್ಸಿಯ ವಿಡಿಯೋವನ್ನು ರಾಜಸ್ಥಾನ್ ರಾಯಲ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಮೊದಲ ನಾಯಕನಿಗೆ ಗೌರವ ಸೂಚಿಸುವುದಾಗಿ ತಿಳಿಸಿದೆ. ಆಸ್ಟ್ರೇಲಿಯಾ ಸ್ಪಿನ್ ದಂತಕಥೆ ಶೇನ್ ವಾರ್ನ್ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದರು.
ಶೇನ್ ವಾರ್ನ್ ಅವರ ಗೌರವಾರ್ಥವಾಗಿ ರಾಜಸ್ಥಾನ್ ರಾಯಲ್ಸ್ ಬಿಡುಗಡೆ ಮಾಡಿರುವ ಜೆರ್ಸಿಯು ಗುಲಾಬಿ ಮತ್ತು ನೀಲಿ ಬಣ್ಣದ್ದಾಗಿದೆ. ಆದರೆ ಅದರ ಕಾಲರ್‌ಗಳಲ್ಲಿ SW 23 ಎಂದು ಬರೆಯಲಾಗಿದೆ. ಅಂದರೆ ಶೇನ್ ವಾರ್ನ್ ಅವರ ಜೆರ್ಸಿ ನಂಬರ್ 23. ವಾರ್ನ್ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ಸಿನಲ್ಲಿ ಶೇನ್ ವಾರ್ನ್ ಪ್ರಮುಖ ಪಾತ್ರ ವಹಿಸಿದ್ದರು. ಐಪಿಎಲ್ನ ಮೊದಲ ಸೀಸನ್ನಲ್ಲಿ ಶೇನ್ ವಾರ್ನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
#ForWarnie ? pic.twitter.com/vsgAX1LaMR
— Rajasthan Royals (@rajasthanroyals) April 30, 2022
2008ರ ಚಾಂಪಿಯನ್ಸ್: ಚೆನ್ನೈ ಸೂಪರ್ ಕಿಂಗ್ಸ್‌ನ ಬಲಿಷ್ಠ ತಂಡವನ್ನು ಸೋಲಿಸಿ ರಾಜಸ್ಥಾನ ಮೊದಲ ಐಪಿಎಲ್ ಪ್ರಶಸ್ತಿ ಗೆದ್ದಿದ್ದರು. ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ 5 ವಿಕೆಟ್‌ಗೆ 163 ರನ್ ಗಳಿಸಿತು. ಉತ್ತರವಾಗಿ ರಾಜಸ್ಥಾನ ಕೊನೆಯ ಎಸೆತದಲ್ಲಿ ಈ ಗುರಿಯನ್ನು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಐಪಿಎಲ್ 2008 ರಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಶೇನ್ ವಾರ್ನ್ 15 ಪಂದ್ಯಗಳಲ್ಲಿ 19 ವಿಕೆಟ್ಗಳನ್ನು ಪಡೆದಿದ್ದರು.
Today’s more than just a game.
Today’s #ForWarnie. ?#RoyalsFamily | #RRvMI pic.twitter.com/xM7X4CkAv6
— Rajasthan Royals (@rajasthanroyals) April 30, 2022
ಈ ಬಾರಿ ಕೂಡ ಉತ್ತಮ ಪ್ರದರ್ಶನ: ಪ್ರಸಕ್ತ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಉತ್ತಮ ಪ್ರದರ್ಶನ ನೀಡುತ್ತಿದೆ. 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲುವ ಪ್ಲೇಆಫ್ಗೇರುವ ಹಾದಿಯನ್ನು ಸುಗಮಗೊಳಿಸುವ ಇರಾದೆಯಲ್ಲಿ ರಾಜಸ್ಥಾನ್ ರಾಯಲ್ಸ್.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.