ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಮೋಜು ಮಸ್ತಿ: ಕಿಶನ್-ಶಾರ್ದೂಲ್ ರೋಮ್ಯಾಂಟಿಕ್ ಡ್ಯಾನ್ಸ್
Shardul Thakur and Ishan kishan Dance Video: ಹ್ಯಾಲೋವೀನ್ ಪಾರ್ಟಿಯಲ್ಲಿ ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಮಕ್ಕಳಿಗೆ ಕ್ಯಾಂಡಿ ನೀಡಿ ಸಂಭ್ರಮಿಸಿದರು. ರವಿಚಂದ್ರನ್ ಅಶ್ವಿನ್ ಅವರ ಪತ್ನಿ ಪೃತಿ ನಾರಾಯಣ್ ಈ ಹ್ಯಾಲೋವೀನ್ ಪಾರ್ಟಿಯ ಕೆಲವು ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ (Team India) ಆಟಗಾರರು ಭರ್ಜರಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಯುಎಇನಲ್ಲಿರುವ ಟೀಮ್ ಇಂಡಿಯಾ ಆಟಗಾರರ ಮಕ್ಕಳು ಹೋಟೆಲ್‌ನಲ್ಲಿ ಹ್ಯಾಲೋವೀನ್ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಮಕ್ಕಳ ಜೊತೆಗೆ ಇತರ ಕ್ರಿಕೆಟಿಗರೂ ಕೂಡ ಮಕ್ಕಳಾಗಿ ಮೈಮರೆತು ಖುಷಿಪಟ್ಟಿದ್ದಾರೆ. ವಿರಾಟ್ ಕೊಹ್ಲಿ ಪುತ್ರಿ ವಾಮಿಕಾ, ರೋಹಿತ್ ಶರ್ಮಾ ಪುತ್ರಿ ಸಮೈರಾ, ಅಶ್ವಿನ್ ಪುತ್ರಿ ಆಧ್ಯ ಮತ್ತು ಅಕಿರಾ ಹಾಗೂ ಹಾರ್ದಿಕ್ ಪಾಂಡ್ಯ ಪುತ್ರ ಅಗಸ್ತ್ಯ ಮುದ್ದಾದ ಡ್ರೆಸ್ನಲ್ಲಿ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು.
ಮಕ್ಕಳ ಈ ಮೋಜಿನ ಪಾರ್ಟಿಯಲ್ಲಿ, ಇಶಾನ್ ಕಿಶನ್ ಮತ್ತು ಶಾರ್ದೂಲ್ ಠಾಕೂರ್ ಎಲ್ಲರ ಗಮನ ಸೆಳೆದರು. ರೊಮ್ಯಾಂಟಿಕ್ ಡ್ಯಾನ್ಸ್ ಮೂಲಕ ಎಲ್ಲರನ್ನು ರಂಜಿಸಿದ ಕಿಶನ್-ಶಾರ್ದೂಲ್ ಜೋಡಿಯ ವಿಡಿಯೋವನ್ನು ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇನ್ನುಳಿದ ಆಟಗಾರರು ಕೂಡ ಪಾರ್ಟಿಯಲ್ಲಿ ಕಾಣಿಸಿಕೊಂಡು ಮಕ್ಕಳನ್ನು ಹಾಗೂ ಇಶಾನ್ ಕಿಶನ್ ಹಾಗೂ ಶಾರ್ದೂಲ್ ಡ್ಯಾನ್ಸ್ ಅನ್ನು ಹುರಿದುಂಬಿಸಿದ್ದಾರೆ.
View this post on Instagram
ಇನ್ನು ಹ್ಯಾಲೋವೀನ್ ಪಾರ್ಟಿಯಲ್ಲಿ ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಮಕ್ಕಳಿಗೆ ಕ್ಯಾಂಡಿ ನೀಡಿ ಸಂಭ್ರಮಿಸಿದರು. ರವಿಚಂದ್ರನ್ ಅಶ್ವಿನ್ ಅವರ ಪತ್ನಿ ಪೃತಿ ನಾರಾಯಣ್ ಈ ಹ್ಯಾಲೋವೀನ್ ಪಾರ್ಟಿಯ ಕೆಲವು ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ, ಎಲ್ಲಾ ಮಕ್ಕಳು ತುಂಬಾ ಮುದ್ದಾಗಿ ಕಾಣುತ್ತಿದ್ದಾರೆ ಮತ್ತು ಕ್ರಿಕೆಟಿಗರು ಕೂಡ ತುಂಬಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿರುವುದು ಕಾಣಬಹುದು.
View this post on Instagram
View this post on Instagram
ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
ಇದನ್ನೂ ಓದಿ: T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
(Shardul Thakur and Ishan kishan couple dance video goes viral on social media)