ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ: ಮಾಜಿ ಕ್ರಿಕೆಟಿಗ ಟೀಕೆ

ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಕ್​ ವಾ ಟೀಕಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಶಾರ್ದೂಲ್ ಅವರನ್ನು ವಾ ಬಿಟ್ಸ್​ ಅ್ಯಂಡ್ ಪೀಸಸ್ ಕ್ರಿಕೆಟಿಗ ಎಂದು ಜರಿದರು. ಏಕೆಂದರೆ ವಿಶ್ವಕಪ್ ತಂಡದಲ್ಲಿರುವ ಆಟಗಾರನಾಗಿರುವ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 35 ರನ್ ನೀಡಿದ್ದರು. ಅಲ್ಲದೆ ಒಂದೇ ಒಂದು ವಿಕೆಟ್ ಕಬಳಿಸಿರಲಿಲ್ಲ. ಇದಾಗ್ಯೂ ಶಾರ್ದೂಲ್ ಠಾಕೂರ್​ಗೆ ಸತತ […]

ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ: ಮಾಜಿ ಕ್ರಿಕೆಟಿಗ ಟೀಕೆ
Shardul Thakur
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 25, 2023 | 6:41 PM

ಟೀಮ್ ಇಂಡಿಯಾ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಮಾರ್ಕ್​ ವಾ ಟೀಕಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದ್ದ ಶಾರ್ದೂಲ್ ಅವರನ್ನು ವಾ ಬಿಟ್ಸ್​ ಅ್ಯಂಡ್ ಪೀಸಸ್ ಕ್ರಿಕೆಟಿಗ ಎಂದು ಜರಿದರು.

ಏಕೆಂದರೆ ವಿಶ್ವಕಪ್ ತಂಡದಲ್ಲಿರುವ ಆಟಗಾರನಾಗಿರುವ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 35 ರನ್ ನೀಡಿದ್ದರು. ಅಲ್ಲದೆ ಒಂದೇ ಒಂದು ವಿಕೆಟ್ ಕಬಳಿಸಿರಲಿಲ್ಲ. ಇದಾಗ್ಯೂ ಶಾರ್ದೂಲ್ ಠಾಕೂರ್​ಗೆ ಸತತ ಅವಕಾಶ ನೀಡುತ್ತಿರುವುದು ಅಚ್ಚರಿ ಎಂದು ಮಾರ್ಕ್​ ವಾ ವಾದಿಸಿದರು.

ನನ್ನ ಪ್ರಕಾರ ಶಾರ್ದೂಲ್ ಠಾಕೂರ್ ಬಿಟ್ಸ್​ ಅ್ಯಂಡ್ ಪೀಸಸ್ ಕ್ರಿಕೆಟರ್. ಅಂದರೆ ಅರ್ಧಂಬರ್ಧ ಆಟಗಾರ. ಏಕೆಂದರೆ ಆತ ಅತ್ತ ಬೌಲರ್​ ಆಗಿಯೂ ಮಿಂಚುತ್ತಿಲ್ಲ. ಇತ್ತ ಬ್ಯಾಟ್ಸ್​ಮನ್ ಆಗಿಯೂ ಯಶಸ್ಸು ಕಾಣುತ್ತಿಲ್ಲ ಎಂದು ಮಾರ್ಕ್ ವಾ ತಿಳಿಸಿದರು.

ಶಾರ್ದೂಲ್ ಠಾಕೂರ್ ಕಳಪೆ ಪ್ರದರ್ಶನ:

ಮಾರ್ಕ್​ ವಾ ಅವರ ಹೇಳಿಕೆಯಂತೆ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪರ ಸತತ ಕಳಪೆ ಪ್ರದರ್ಶನ ನೀಡುತ್ತಾ ಬರುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 10 ಓವರ್​ಗಳಲ್ಲಿ 78 ರನ್ ಬಿಟ್ಟುಕೊಟ್ಟಿದ್ದ ಠಾಕೂರ್ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇನ್ನು 2ನೇ ಪಂದ್ಯದಲ್ಲೂ 4 ಓವರ್​ಗಳಲ್ಲಿ 35 ರನ್​ ನೀಡಿ ದುಬಾರಿ ಎನಿಸಿಕೊಂಡರು.

ಹಾಗೆಯೇ ಇತ್ತೀಚೆಗೆ ಮುಗಿದ ಏಷ್ಯಾಕಪ್​ನಲ್ಲಿ 4 ಪಂದ್ಯಗಳನ್ನಾಡಿದ್ದ ಶಾರ್ದೂಲ್ ಕಲೆಹಾಕಿದ್ದು ಕೇವಲ 14 ರನ್​ಗಳು ಮಾತ್ರ. ಇನ್ನು ಬೌಲಿಂಗ್​ನಲ್ಲಿ ಪಡೆದಿದ್ದು ಕೇವಲ 5 ವಿಕೆಟ್​ಗಳು. ಇದಾಗ್ಯೂ ಏಕದಿನ ವಿಶ್ವಕಪ್​ ತಂಡದಲ್ಲಿ ಶಾರ್ದೂಲ್ ಠಾಕೂರ್ ಅವರನ್ನು ಉಳಿಸಿಕೊಂಡಿರುವುದು ಅಚ್ಚರಿ.

ಇದನ್ನೂ ಓದಿ: Shubman Gill: ಗಿಲ್​ ಗಿಲಕ್​ಗೆ ಹಳೆಯ ದಾಖಲೆಗಳು ಧೂಳೀಪಟ

ಏಕದಿನ ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್