ಬರೋಬ್ಬರಿ 69 ರನ್​​… ಟಿ20 ಟೂರ್ನಿಯಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಶಾರ್ದೂಲ್ ಠಾಕೂರ್

Shardul Thakur: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಶಾರ್ದೂಲ್ ಠಾಕೂರ್ ಅನ್​​ಸೋಲ್ಡ್ ಆಗಿದ್ದರು. ಅತ್ಯುತ್ತಮ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದ ಶಾರ್ದೂಲ್ ಅವರನ್ನು ಖರೀದಿಸಲು ಈ ಬಾರಿ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದಕ್ಕೆ ಮುಖ್ಯ ಕಾರಣ ಮುಂಬೈ ಆಟಗಾರನ ಕಳಪೆ ಪ್ರದರ್ಶನ.

ಬರೋಬ್ಬರಿ 69 ರನ್​​… ಟಿ20 ಟೂರ್ನಿಯಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಶಾರ್ದೂಲ್ ಠಾಕೂರ್
Shardul Thakur
Follow us
ಝಾಹಿರ್ ಯೂಸುಫ್
|

Updated on: Nov 30, 2024 | 2:19 PM

ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಬೌಲರ್ ಎಂಬ ಕೆಟ್ಟ ದಾಖಲೆಯೊಂದು ಶಾರ್ದೂಲ್ ಠಾಕೂರ್ ಪಾಲಾಗಿದೆ. ಅದು ಕೂಡ ಬರೋಬ್ಬರಿ 69 ರನ್​​ ನೀಡುವ ಮೂಲಕ ಶಾರ್ದೂಲ್ ಈ ಹೀನಾಯ ದಾಖಲೆಯನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೇರಳ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಗೆದ್ದ ಮುಂಬೈ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೇರಳ ತಂಡವನ್ನು ಬ್ಯಾಟಿಂಗ್​​ಗೆ ಆಹ್ವಾನಿಸಿದರು. ಅದರಂತೆ ಇನಿಂಗ್ಸ್ ಶುರು ಮಾಡಿದ ಕೇರಳ ರೋಹನ್ ಕುನ್ನುಮ್ಮಲ್ (87) ಸ್ಪೋಟಕ ಆರಂಭ ಒದಗಿಸಿದ್ದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಲ್ಮಾನ್ ನಿಝಾರ್ 49 ಎಸೆತಗಳಲ್ಲಿ 8 ಸಿಕ್ಸ್​ ಹಾಗೂ 5 ಫೋರ್​​​ಗಳೊಂದಿಗೆ ಅಜೇಯ 99 ರನ್ ಚಚ್ಚಿದ್ದರು. ರೋಹನ್ ಹಾಗೂ ಸಲ್ಮಾನ್​ರ ಸಿಡಿಲಬ್ಬರದಿಂದ ನಲುಗಿದ್ದು ಅನುಭವಿ ವೇಗಿ ಶಾರ್ದೂಲ್ ಠಾಕೂರ್.

ಏಕೆಂದರೆ ಈ ಪಂದ್ಯದಲ್ಲಿ 4 ಓವರ್​​​ಗಳನ್ನು ಎಸೆದಿದ್ದ ಶಾರ್ದೂಲ್ ಠಾಕೂರ್ ಬರೋಬ್ಬರಿ 69 ರನ್ ನೀಡಿದರು. ಈ ಮೂಲಕ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತ್ಯಂತ ದುಬಾರಿ ಸ್ಪೆಲ್ ಎಸೆದ ಬೌಲರ್ ಎನಿಸಿಕೊಂಡರು. ಅಲ್ಲದೆ ರಮೇಶ್ ರಾಹುಲ್ ಹೆಸರಿನಲ್ಲಿದ್ದ ಕಳಪೆ ದಾಖಲೆಯನ್ನು ಸರಿಗಟ್ಟಿದರು.

ನವೆಂಬರ್ 25, 2024 ರಂದು ನಡೆದ ಹರ್ಯಾಣ ವಿರುದ್ದದ ಪಂದ್ಯದಲ್ಲಿ ರಮೇಶ್ ರಾಹುಲ್ 4 ಓವರ್​​ಗಳಲ್ಲಿ 69 ರನ್ ಬಿಟ್ಟುಕೊಟ್ಟಿದ್ದರು. ಇದೀಗ ಶಾರ್ದೂಲ್ ಠಾಕೂರ್ ಕೂಡ ಪ್ರತಿ ಓವರ್​​ಗೆ 17.20 ಸರಾಸರಿಯಲ್ಲಿ ರನ್ ನೀಡುವ ಮೂಲಕ ಈ ಕೆಟ್ಟ ದಾಖಲೆಯನ್ನು ಸರಿಗಟ್ಟಿದ್ದಾರೆ.

ಕೇರಳ ತಂಡಕ್ಕೆ ಜಯ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೇರಳ ತಂಡವು 20 ಓವರ್​​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 234 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಪರ ಅಜಿಂಕ್ಯ ರಹಾನೆ 35 ಎಸೆತಗಳಲ್ಲಿ 68 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್​​​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 20 ಓವರ್​​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 191 ರನ್​​ ಕಲೆಹಾಕಿ 43 ರನ್​​ಗಳಿಂದ ಸೋಲೊಪ್ಪಿಕೊಂಡಿತು.

ಕೇರಳ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್ (ನಾಯಕ) , ರೋಹನ್ ಕುನ್ನುಮ್ಮಲ್ , ಮೊಹಮ್ಮದ್ ಅಝರುದ್ದೀನ್ , ಸಚಿನ್ ಬೇಬಿ , ವಿಷ್ಣು ವಿನೋದ್ , ಸಲ್ಮಾನ್ ನಿಝಾರ್ , ಅಬ್ದುಲ್ ಬಾಸಿತ್ , ಎಂಡಿ ನಿಧೀಶ್ , ವಿನೋದ್ ಕುಮಾರ್ , ಸುಧೇಶನ್ ಮಿಧುನ್ , ನೆಡುಮಂಕುಝಿ ಬಾಸಿಲ್.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಪಾಕಿಸ್ತಾನ್ ಹೊರಬಿದ್ದರೆ, ಯಾವ ತಂಡಕ್ಕೆ ಚಾನ್ಸ್?

ಮುಂಬೈ ಪ್ಲೇಯಿಂಗ್ 11: ಪೃಥ್ವಿ ಶಾ , ಆಂಗ್​​ಕ್ರಿಶ್ ರಘುವಂಶಿ , ಶ್ರೇಯಸ್ ಅಯ್ಯರ್ (ನಾಯಕ) , ಅಜಿಂಕ್ಯ ರಹಾನೆ , ಸೂರ್ಯಾಂಶ್ ಶೆಡ್ಗೆ , ಶಮ್ಸ್ ಮುಲಾನಿ , ಹಾರ್ದಿಕ್ ತಮೋರೆ ( ವಿಕೆಟ್ ಕೀಪರ್ ) , ತನುಷ್ ಕೋಟ್ಯಾನ್ , ಶಾರ್ದೂಲ್ ಠಾಕೂರ್ , ಮೋಹಿತ್ ಅವಸ್ತಿ , ರಾಯ್​ಸ್ಟನ್ ಡಯಾಸ್.

ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ