AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaun Marsh: ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಚೊಚ್ಚಲ ಐಪಿಎಲ್ ಸೂಪರ್ ಸ್ಟಾರ್

Shaun Marsh: ಆಸ್ಟ್ರೇಲಿಯಾ ಪರ 38 ಟೆಸ್ಟ್ ಪಂದ್ಯಗಳನ್ನಾಡಿರುವ ಮಾರ್ಷ್ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್ ಕಲೆಹಾಕಿದ್ದಾರೆ. ಹಾಗೆಯೇ 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳನ್ನು ಬಾರಿಸಿ 2773 ರನ್​ಗಳಿಸಿದ್ದಾರೆ

Shaun Marsh: ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಚೊಚ್ಚಲ ಐಪಿಎಲ್ ಸೂಪರ್ ಸ್ಟಾರ್
Shaun Marsh
TV9 Web
| Edited By: |

Updated on: Jan 14, 2024 | 12:09 PM

Share

ಆಸ್ಟ್ರೇಲಿಯಾ ಆಟಗಾರ ಶಾನ್ ಮಾರ್ಷ್ (Shaun Marsh) ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. 2008 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭಿಸಿದ್ದ ಮಾರ್ಷ್​ 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದರು. ಇದಾಗ್ಯೂ ಅವರು ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್​ಗಳಲ್ಲಿ  ಮುಂದುವರೆದಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್​ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅದರಂತೆ ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ಅಂತಿಮ ಮ್ಯಾಚ್ ಅವರ ವೃತ್ತಿಜೀವನದ ಕೊನೆಯ ಪಂದ್ಯವಾಗಿರಲಿದೆ.

ಆಸ್ಟ್ರೇಲಿಯಾ ಪರ 38 ಟೆಸ್ಟ್ ಪಂದ್ಯಗಳನ್ನಾಡಿರುವ ಮಾರ್ಷ್ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್ ಕಲೆಹಾಕಿದ್ದಾರೆ. ಹಾಗೆಯೇ 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳನ್ನು ಬಾರಿಸಿ 2773 ರನ್​ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್​ ಕಲೆಹಾಕಿದ್ದಾರೆ.

ಐಪಿಎಲ್ ಸೂಪರ್ ಸ್ಟಾರ್:

ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ. 2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್ ಸೀಸನ್​ವೊಂದರಲ್ಲಿ 600+ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು.

ವಿಶೇಷ ಎಂದರೆ ಶಾನ್ ಮಾರ್ಷ್ ಐಪಿಎಲ್​ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಪರ ಮಾತ್ರ ಕಣಕ್ಕಿಳಿದಿದ್ದಾರೆ. ಒಂದೇ ತಂಡದ ಪರ 9 ಸೀಸನ್​ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.

2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಬಿಡುಗಡೆ ಮಾಡಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಆ ಬಳಿಕ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಬಿಗ್ ಬ್ಯಾಷ್ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಮಾರ್ಷ್ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಈ IPL ನಲ್ಲೂ RCBಗೆ ಸೋಲು: SRH ವಿನ್ನರ್..!

ಇದೀಗ ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅದರಂತೆ ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧದ ಪಂದ್ಯದ ಮೂಲಕ ಶಾನ್ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.

Follow Us
Web contact
Web contact

TV9 Kannada

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ